ಶಿವಮೊಗ್ಗ: 2026-27ನೇ ಸಾಲಿನ ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ಹಾಗೂ ಪ್ರವರ್ಗ-1ರ ಅಲೆಮಾರಿ ಮತ್ತು ಅರೆಅಲೆಮಾರಿ ಜನಾಂಗದ ವಿದ್ಯಾರ್ಥಿಗಳ ವಿವಿಧ ಸೌಲಭ್ಯಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ನವೆಂಬರ್ 30 ರವರೆಗೆ ವಿಸ್ತರಿಸಲಾಗಿದೆ. (ಈ ಸುದ್ದಿಯನ್ನು ಇನ್ನು 37 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ನೀಡುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ ಹಾಗೂ ವಿದ್ಯಾಸಿರಿ (ಊಟ ಮತ್ತು ವಸತಿ ಸಹಾಯ ಯೋಜನೆ) ಸೌಲಭ್ಯ ಪಡೆಯಲು ಅರ್ಹ ವಿದ್ಯಾರ್ಥಿಗಳು ssp.postmatric.karnataka.gov.in ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಕಾರ್ಯಕ್ರಮಗಳ ವಿವರ, ಅರ್ಹತೆ ಹಾಗೂ ಅಗತ್ಯ ದಾಖಲೆಗಳ ಹೆಚ್ಚಿನ ಮಾಹಿತಿಗಾಗಿ bcwd.karnataka.gov.in ವೆಬ್‌ಸೈಟ್ ವೀಕ್ಷಿಸಬಹುದು ಎಂದು ತಿಳಿಸಲಾಗಿದೆ.

ಹೆಚ್ಚಿನ ಮಾಹಿತಿಗೆ ಇಲಾಖಾ ಸಹಾಯವಾಣಿ 8050770004 (ಇಮೇಲ್: bcwdhelpline@gmail.com) ಅಥವಾ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ 1902 (ಇಮೇಲ್: postmatrichelp@karnataka.gov.in) ಅನ್ನು ಸಂಪರ್ಕಿಸಬಹುದೆಂದು ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.