ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHANKARAGHATTA | 28 ಡಿಸೆಂಬರ್ 2019
ಶಿವಮೊಗ್ಗ ಸಿಟಿ ಮತ್ತು ತರೀಕೆರೆ ನಡುವೆ ಚತುಷ್ಪತ ರಸ್ತೆ ನಿರ್ಮಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್’ನಲ್ಲಿ ಆಯೋಜಿಸಿದ್ದ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಖೋ ಖೋ ಪಂದ್ಯಾವಳಿಗೆ ಚಾಲನೆ ನೀಡಿದ ಸಂಸದ ರಾಘವೇಂದ್ರ, ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿ ತ್ವರಿತಗೊಳಿಸಲಾಗುತ್ತಿದೆ. ಇದಕ್ಕಾಗಿ 150 ಕೋಟಿ ರೂ. ಮಂಜೂರು ಮಾಡಲಾಗಿದೆ.
ಏರ್’ಪೋರ್ಟ್ ಮತ್ತು ಕುವೆಂಪು ವಿಶ್ವವಿದ್ಯಾಲಯಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಉನ್ನತೀಕರಿಸಲಾಗುತ್ತದೆ. ಅಲ್ಲದೆ, ಶಿವಮೊಗ್ಗ ಸಿಟಿ ಮತ್ತು ತರೀಕರೆ ನಡುವೆ ಚತುಷ್ಪಥ ರಸ್ತೆಯನ್ನು ನಿರ್ಮಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಇದೇ ವೇಳೆ ವಿವಿ ಕ್ಯಾಂಪಸ್’ನಲ್ಲಿ ಸಂಸದರ ನಿಧಿಯಿಂದ ಸ್ಥಾಪಿಸಿರುವ ಶುದ್ಧ ಕುಡಿಯುವ ನೀರಿನ ನಾಲ್ಕು ವಾಟರ್ ಫಿಲ್ಟರ್’ಗಳನ್ನು ಸಂಸದ ರಾಘವೇಂದ್ರ ಉದ್ಘಾಟಿಸಿದರು.
ಕುವೆಂಪು ವಿವಿ ಕುಲಪತಿ ಪ್ರೊ.ಬಿ.ಪಿ.ವೀರಭದ್ರಪ್ಪ, ಕುಲಸಚಿವ ಪ್ರೊ.ಎಸ್.ಎಸ್.ಪಟೀಲ್ ಸೇರಿದಂತೆ ಹಲವರು ಈ ವೇಳೆ ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]