ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 9 MAY 2024
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
EDUCATION NEWS : ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶದಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ವಿದ್ಯಾರ್ಥಿನಿಯರು ಮೇಲುಗೈ ಸಾಧಿಸಿದ್ದಾರೆ. ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿನಿಯರ ಪೈಕಿ ಶೇ.93.03ರಷ್ಟು ವಿದ್ಯಾರ್ಥಿನಿಯರು ಪಾಸ್ ಆಗಿದ್ದಾರೆ.
ಶಿವಮೊಗ್ಗ ಜಿಲ್ಲೆಯಾದ್ಯಂತ 11,389 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 9,592 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶೇ.84.22ರಷ್ಟು ವಿದ್ಯಾರ್ಥಿಗಳು ಪಾಸಾಗಿದ್ದಾರೆ. 11,639 ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗಿದ್ದರು. 10,828 ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ. ಶೇ.93.03ರಷ್ಟು ವಿದ್ಯಾರ್ಥಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪಾಸಾಗಿದ್ದಾರೆ.
ತಾಲೂಕುವಾರು ಹೇಗಿದೆ ಫಲಿತಾಂಶ?
ತೀರ್ಥಹಳ್ಳಿ ತಾಲೂಕಿನಲ್ಲಿ ಅತಿ ಹೆಚ್ಚು ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ತೀರ್ಥಹಳ್ಳಿಗೆ ಶೇ.94.24ರಷ್ಟು ಫಲಿತಾಂಶ ಲಭಿಸಿದೆ. ಸೊರಬ ಶೇ.92.79, ಹೊಸನಗರ ಶೇ.92.66, ಸಾಗರ ಶೇ.92.37, ಶಿಕಾರಿಪುರ ಶೇ.90.34, ಶಿವಮೊಗ್ಗ ಶೇ.85.56, ಭದ್ರಾವತಿಯಲ್ಲಿ ಶೇ.83.87 ರಷ್ಟು ಫಲಿತಾಂಶ ಬಂದಿದೆ.
ಸರ್ಕಾರಿ ಶಾಲೆಗಳಲ್ಲಿ ಶೇ.100 ಫಲಿತಾಂಶ
ಜಿಲ್ಲೆಯ 132 ಶಾಲೆಗಳಲ್ಲಿ ಶೇ. 100ರಷ್ಟು ಫಲಿತಾಂಶ ಲಭಿಸಿದೆ. ಈ ಪೈಕಿ 37 ಸರ್ಕಾರಿ ಶಾಲೆಗಳಿವೆ. ತೀರ್ಥಹಳ್ಳಿಯ 11, ಶಿಕಾರಿಪುರದ 7, ಹೊಸನಗರದ 7, ಸಾಗರದ 5, ಸೊರಬದ 3, ಶಿವಮೊಗ್ಗದ 2, ಭದ್ರಾವತಿಯ 2 ಸರ್ಕಾರಿ ಶಾಲೆಗಳಲ್ಲಿ ಪೂರ್ಣ ಫಲಿತಾಂಶ ಬಂದಿದೆ. ಸಮಾಜ ಕಲ್ಯಾಣ ಇಲಾಖೆಯ 24 ಶಾಲೆಗಳು, 10 ಅನುದಾನಿತ, 61 ಅನುದಾನ ರಹಿತ ಶಾಲೆಗಳಲ್ಲಿಯು ಎಲ್ಲ ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ.
ಗ್ರಾಮೀಣ ವಿದ್ಯಾರ್ಥಿಗಳದ್ದೇ ಮೇಲುಗೈ
ನಗರ ಮತ್ತು ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಪೈಕಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳೆ ಹೆಚ್ಚು ಪಾಸ್ ಆಗಿದ್ದಾರೆ. ಗ್ರಾಮೀಣ ಭಾಗದ ಶೇ. 90.35ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ನಗರ ಪ್ರದೇಶದ ಶೇ.86.38ರಷ್ಟು ಮಂದಿ ಪಾಸ್ ಆಗಿದ್ದಾರೆ.
ಇದನ್ನೂ ಓದಿ – ವಿವಿಧ ಶಾಲೆಯ 12 ವಿದ್ಯಾರ್ಥಿಗಳು ಶಿವಮೊಗ್ಗ ಜಿಲ್ಲಾ ಮಟ್ಟದ ಟಾಪರ್‌ಗಳು, ಇಲ್ಲಿದೆ ಲಿಸ್ಟ್