ಶಿವಮೊಗ್ಗದ ಸೇಕ್ರೆಡ್‌ ಹಾರ್ಟ್‌ ಶಾಲೆ ವಜ್ರಮಹೋತ್ಸವ, ಯಾವಾಗ? ಏನೇನಿರುತ್ತೆ ಕಾರ್ಯಕ್ರಮ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಸೇಕ್ರೆಡ್ ಹಾರ್ಟ್ ಪ್ರೌಢ ಶಾಲೆಯ 60ನೇ ವರ್ಷದ ವಜ್ರಮಹೋತ್ಸವದ ಆಚರಣೆಯನ್ನು ಸಡಗರ, ಸಂಭ್ರಮದಿಂದ ಆಚರಿಸಲಾಗುವುದು ಎಂದು ಪ್ರೌಢಶಾಲೆಯ ಹಳೆಯ ವಿದ್ಯಾರ್ಥಿ ಹಾಗೂ ಮಾಜಿ ಸಚಿವ ಕುಮಾ‌ರ್ ಬಂಗಾರಪ್ಪ ತಿಳಿಸಿದರು.

ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕುಮಾರ ಬಂಗಾರಪ್ಪ, ನಗರದ ಹೃದಯ ಭಾಗದಲ್ಲಿರುವ ಸೇಕ್ರೆಡ್ ಹಾರ್ಟ್ ಪ್ರೌಢಶಾಲೆ 1965ರಲ್ಲಿ ಚಿಕ್ಕದಾಗಿ ಪ್ರಾರಂಭಗೊಂಡು ಇಂದು ಹೆಮ್ಮರವಾಗಿ ಬೆಳೆದಿದೆ. 1990ರಲ್ಲಿ ಬೆಳ್ಳಿ ಮಹೋತ್ಸವವನ್ನು ಆಚರಿಸಿಕೊಂಡಿತ್ತು. ಈಗ ವಜ್ರ ಮಹೋತ್ಸವ ಆಚರಣೆಗೆ ಸಿದ್ಧತೆ ನಡೆಸಿದ್ದೇವೆ ಎಂದರು.

Kumar-Bangarappa-at-Shivamogga-Press-Trust

ಡಿ.20 ಮತ್ತು 21ರಂದು ವಜ್ರಮಹೋತ್ಸವ ಆಚರಣೆ ಮಾಡಲಾಗುವುದು. ಡಿ.20ರಂದು ಹಳೆಯ ವಿದ್ಯಾರ್ಥಿಗಳ ಸಮ್ಮಿಲನ ಏರ್ಪಡಿಸಲಾಗಿದೆ ಮತ್ತು ಹಳೆಯ ವಿದ್ಯಾರ್ಥಿಗಳಿಗಾಗಿ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ. ಶಾಲಾ ಆವರಣದಲ್ಲಿ ಸಂಜೆ ಮನೋರಂಜನೆ ಹಾಗೂ ಔತಣಕೂಟ ಕಾರ್ಯಕ್ರಮವಿದೆ ಎಂದು ಕುಮಾ‌ರ್ ಬಂಗಾರಪ್ಪ ತಿಳಿಸಿದರು.

ಜಿಲ್ಲಾಧಿಕಾರಿಗಳಾದ ಸುಹಾಸ್‌.ಎಲ್.ವೈ, ಡಾ.ದಯಾನಂದ, ರಾಜಕಾರಣಿಗಳಾದ ಡಾ. ಧನಂಜಯ ಸರ್ಜಿ, ಕುಮಾರ್ ಬಂಗಾರಪ್ಪ, ವಿಜ್ಞಾನಿಗಳಾದ ಗಣೇಶ್ ನಾಯರ್, ಐಎಎಸ್ ಪದವಿ ಪಡೆದ ಮಂಜುನಾಥ್ ನಾಯಕ್ ಸೇರಿದಂತೆ ಹಲವರು ಈ ಶಾಲೆಯಲ್ಲಿಯೇ ಓದಿದ್ದಾರೆ. ನಾಡಿಗೆ ಹೆಸರು ತಂದಿದ್ದಾರೆ.ಫಾ.ಸ್ವಾನಿ ಡಿಸೋಜಾ, ಸೇಕ್ರೆಡ್‌ ಹಾರ್ಟ್‌ನ ಧರ್ಮಗುರು

sacred heart school shimoga

ಪತ್ರಿಕಾಗೋಷ್ಠಿಯಲ್ಲಿ ಹಳೆಯ ವಿದ್ಯಾರ್ಥಿಗಳಾದ ಡಾ. ಧನಂಜಯ ಸರ್ಜಿ, ಹೆಚ್.ಸಿ. ಯೋಗೀಶ್, ಬಳ್ಳೇಕೆರೆ ಸಂತೋಷ್, ಹರ್ಷಾ, ರಾಕೇಶ್ ಡಿಸೋಜಾ, ಕಿರಣ್, ಮರಿಯಪ್ಪ, ವಿಲಿಯಂ ಡಿಸೋಜಾ, ವಿನ್ಸೆಂಟ್, ಫ್ಯಾಟ್ರಿಕ್, ಸೆಕ್ರೇಡ್ ಹಾರ್ಟ್‌ನ ಫಾ. ಕ್ಲಿಫರ್ಡ್‌ ರೋಷನ್ ಪಿಂಟೋ, ಫಾ. ಸ್ಪ್ಯಾನಿ ಡಿಸೋಜಾ, ಫಾ. ಫ್ರಾನ್ಸಿಸ್ ನರೋನ, ಕಿರಣ್ ಫೆರ್ನಾಂಡಿಸ್, ಮುಖ್ಯ ಶಿಕ್ಷಕ ಹೂಬರ್ಟ್ ಮಿರಾಂಡಾ ಸೇರಿದಂತೆ ಹಲವರಿದ್ದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 2, 2025

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

Leave a Comment