ಶಿವಮೊಗ್ಗ : ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ (Exam) ಮಾರ್ಚ್ 1ರಿಂದ 20ರ ವರೆಗೆ ನಡೆಯಲಿವೆ. ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು 39 ಪರೀಕ್ಷಾ ಕೇಂದ್ರಗಳಿದ್ದು, ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ.
ಒಟ್ಟು ವಿದ್ಯಾರ್ಥಿಗಳೆಷ್ಟು?
ಒಟ್ಟು 18,218 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ರೆಗ್ಯುಲರ್ ವಿದ್ಯಾರ್ಥಿಗಳಲ್ಲಿ ಕಲಾ ವಿಭಾಗದಲ್ಲಿ 4,019, ವಾಣಿಜ್ಯ ವಿಭಾಗದಲ್ಲಿ 5,432 ಮತ್ತು ವಿಜ್ಞಾನ ವಿಭಾಗದಲ್ಲಿ 7,742 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ತಾಲೂಕುವಾರು ಎಷ್ಟೆಷ್ಟು ವಿದ್ಯಾರ್ಥಿಗಳು?
ಶಿವಮೊಗ್ಗ ತಾಲೂಕಿನಲ್ಲಿ 16 ಪರೀಕ್ಷಾ ಕೇಂದ್ರದಲ್ಲಿ ಒಟ್ಟು 7063 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಭದ್ರಾವತಿಯಲ್ಲಿ 6 ಪರೀಕ್ಷಾ ಕೇಂದ್ರ 2160 ವಿದ್ಯಾರ್ಥಿಗಳು, ತೀರ್ಥಹಳ್ಳಿಯಲ್ಲಿ 3 ಪರೀಕ್ಷಾ ಕೇಂದ್ರ 1139 ವಿದ್ಯಾರ್ಥಿಗಳು, ಹೊಸನಗರ 3 ಪರೀಕ್ಷಾ ಕೇಂದ್ರ 854 ವಿದ್ಯಾರ್ಥಿಗಳು, ಸಾಗರ 5 ಪರೀಕ್ಷಾ ಕೇಂದ್ರ 2249 ವಿದ್ಯಾರ್ಥಿಗಳು, ಶಿಕಾರಿಪುರದಲ್ಲಿ 4 ಪರೀಕ್ಷಾ ಕೇಂದ್ರ, 2303 ವಿದ್ಯಾರ್ಥಿಗಳು, ಸೊರಬದಲ್ಲಿ 2 ಪರೀಕ್ಷಾ ಕೇಂದ್ರ 1423 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ.
ಪರೀಕ್ಷಾ ಕೇಂದ್ರದಲ್ಲಿ ಹೇಗಿದೆ ಸಿದ್ಧತೆ?
» ಎಲ್ಲ ಪರೀಕ್ಷಾ ಕೇಂದ್ರಗಳಿಗೂ ಮುಖ್ಯ ಅಧೀಕ್ಷಕರು, ಸಹ ಮುಖ್ಯ ಅಧೀಕ್ಷಕರು ಮತ್ತು ಜಾಗೃತ ದಳದ ಸದಸ್ಯರುಗಳನ್ನು ನೇಮಕ ಮಾಡಲಾಗಿದೆ.

» ಎಲ್ಲ ಪರೀಕ್ಷೆ ಕೇಂದ್ರಗಳಲ್ಲೂ ಸಿಸಿಟಿವಿಗಳನ್ನು ಅಳವಡಿಸಲಾಗಿದೆ. ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ವೆಬ್ ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ.
» ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಒಟ್ಟು 12 ಪ್ರಶ್ನೆಪತ್ರಿಕೆ ಮಾರ್ಗಗಳನ್ನು ಮಾಡಲಾಗಿದ್ದು ಭದ್ರವಾಗಿ ಪ್ರಶ್ನೆ ಪತ್ರಿಕೆ ಗಳನ್ನು ಪರೀಕ್ಷಾ ಕೇಂದ್ರಗಳಿಗೆ ತಲುಪಿಸಲು ತ್ರಿಸದಸ್ಯರ ಸಮಿತಿ ನೇಮಕ ಮಾಡಲಾಗಿದೆ.
» ಪ್ರಶ್ನೆ ಪತ್ರಿಕೆಗಳನ್ನು ಸಾಗಿಸುವ ವಾಹನಗಳಿಗೆ ಜಿಪಿಎಸ್ ಅಳವಡಿಸಲಾಗಿದ್ದು ಮಾನಿಟರ್ ಮಾಡಲು ವ್ಯವಸ್ಥೆ ಮಾಡಲಾಗಿದೆ. ಜಿಲ್ಲಾ ಖಜಾನೆಯಲ್ಲಿ 24X7 ಸಿಸಿಟಿವಿ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ.
ಇದನ್ನೂ ಓದಿ » ಶಿವಮೊಗ್ಗದ ಪತ್ರಕರ್ತರಿಗೆ ಪ್ರಶಸ್ತಿ ಪ್ರಕಟ | ಮುದಸ್ಸಿರ್ ಅಹ್ಮದ್‌ಗೆ ಪ್ರಶಸ್ತಿ ಪ್ರದಾನ | ಬೆಜ್ಜವಳ್ಳಿಯಲ್ಲಿ ಜನ ಸಂಪರ್ಕ ಸಭೆ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200