ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | COLLEGE NEWS | 1 MARCH 2021
ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಹೆದ್ದಾರಿ ಮತ್ತು ಸಾರಿಗೆ ಕ್ಷೇತ್ರದಲ್ಲಿನ ಹಲವು ಬೆಳವಣಿಗೆ ತಿಳಿಯುವ ಸಲುವಾಗಿ ಜವಾಹರಲಾಲ್ ನೆಹರೂ ಎಂಜಿನಿಯರಿಂಗ್ ಕಾಲೇಜು (ಜೆಎನ್‍ಎನ್‍ಸಿಇ), ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಜೊತೆ ಒಡಂಬಡಿಕೆ ಮಾಡಿಕೊಂಡಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಹೆದ್ದಾರಿಗಳು, ಸಾರಿಗೆ ವ್ಯವಸ್ಥೆ ಮತ್ತು ಅವುಗಳಲ್ಲಿ ಹಲವು ಬೆಳವಣಿಗೆಗಳನ್ನು ತಿಳಿದುಕೊಳ್ಳಲು ಮತ್ತು ನೂತನ ಯೋಜನೆಗಳಿಗೆ ಪ್ರಾಧಿಕಾರದೊಂದಿಗೆ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಅನುಕೂಲವಾಗಲಿದೆ. ಅಲ್ಲದೆ ವಿದ್ಯಾರ್ಥಿಗಳ ಇಂಟರ್ನ್‍ಶಿಪ್‍ಗೂ ಈ ಒಡಂಬಡಿಕೆಯಿಂದ ಅನುಕೂಲವಾಗಲಿದೆ.
ಸಂಶೋಧನಾ ಕೇಂದ್ರ ಸ್ಥಾಪನೆ
ಜೆಎನ್ಎನ್‍ಸಿಇ ಕಾಲೇಜು ಆವರಣದಲ್ಲಿ ಹೆದ್ದಾರಿ ಮತ್ತು ಸಾರಿಗೆ ಕ್ಷೇತ್ರದ ಸಂಶೋಧನಾ ಕೇಂದ್ರ ಸ್ಥಾಪಿಸಲಾಗುತ್ತಿದೆ. ರಸ್ತೆಯ ಗುಣಮಟ್ಟ ಸೇರಿದಂತೆ ವಿವಿಧ ಆಯಾಮಗಳಲ್ಲಿ ಇಲ್ಲಿ ಸಂಶೋಧನೆಗಳು ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಬೆಟ್ಟದಹಳ್ಳಿಯಿಂದ ಶ್ರೀರಾಂಪುರದವರೆಗೆ ಕಾಮಗಾರಿ ನಡೆಯುತ್ತಿದೆ. 56.35 ಕಿ.ಮೀ ಹೆದ್ದಾರಿ ಕಾಮಗಾರಿಯ ನಿರ್ವಹಣೆಯನ್ನು ಜೆಎನ್‍ಎನ್‍ಸಿಇ ಕಾಲೇಜು ಸಾಮಾಜಿಕ ಜವಾಬ್ದಾರಿಯಾಗಿ ಅಳವಡಿಸಿಕೊಂಡಿದೆ. ಕಾಮಗಾರಿಯ ಗುಣಮಟ್ಟ ಕಾಪಾಡಲು ಪ್ರಾಧಿಕಾರದೊಂದಿಗೆ ಕಾರ್ಯನಿರ್ವಹಿಸಲಿದೆ.
ಜೆ.ಎನ್.ಎನ್.ಸಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಪಿ.ಮಂಜುನಾಥ, ಇನ್ಫ್ರಾಸ್ಟ್ರಕ್ಚರ್ ಡೀನ್ ಡಾ.ಎಂ.ಎಂ.ರಜತ್ ಹೆಗಡೆ, ಸಿವಿಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ. ಬಿ.ಎಸ್.ಕಾರ್ತಿಕ್, ಸಹ ಪ್ರಾಧ್ಯಾಪಕ ವಿ.ಅರುಣ್ ನೇತೃತ್ವದಲ್ಲಿ ಈ ಯೋಜನೆ ಮುನ್ನಡೆಯಲಿದೆ.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422