SSLC ಫಲಿತಾಂಶ, ಶಿವಮೊಗ್ಗ ಜಿಲ್ಲೆಗೆ ರಾಜ್ಯದಲ್ಲಿ 9ನೇ ಸ್ಥಾನ, ಇಲ್ಲಿದೆ ತಾಲೂಕವಾರು ಫಲಿತಾಂಶ

ಶಿವಮೊಗ್ಗ: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ (SSLC result) ಪ್ರಕಟವಾಗಿದೆ. ಈ ಬಾರಿ ಶಿವಮೊಗ್ಗ ಜಿಲ್ಲೆಯಲ್ಲಿ ಶೇ.96.56ರಷ್ಟು ಫಲಿತಾಂಶ ದಾಖಲಾಗಿದೆ. ರಾಜ್ಯ ಮಟ್ಟದಲ್ಲಿ 9ನೇ ಸ್ಥಾನದಲ್ಲಿದೆ.

ಜಿಲ್ಲೆಯಿಂದ ಒಟ್ಟು 21,692 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. 20,946 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ.

Shimoga-DDPI-Office-in-BH-Road

ತೀರ್ಥಹಳ್ಳಿ, ಸಾಗರ ಶೇ.99ರಷ್ಟು ಫಲಿತಾಂಶ

ಇನ್ನು ತಾಲೂಕುವಾರು ಫಲಿತಾಂಶದಲ್ಲಿ ತೀರ್ಥಹಳ್ಳಿ ತಾಲೂಕು ಶೇ.99.60 ಫಲಿತಾಂಶದೊಂದಿಗೆ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದೆ. ಸಾಗರ ಶೇ.99.01, ಹೊಸನಗರ ಶೇ.98.90, ಸೊರಬ ಶೇ.96.77, ಶಿವಮೊಗ್ಗ ಶೇ.96.55, ಶಿಕಾರಿಪುರ ಶೇ.94.79 ಹಾಗೂ ಭದ್ರಾವತಿ ಶೇ.94 ಫಲಿತಾಂಶ ದಾಖಲಿಸಿವೆ.

ಇದನ್ನೂ ಓದಿ : ಐಎಎಸ್‌ ಕನಸು ಹೊತ್ತ ತೀರ್ಥಹಳ್ಳಿಯ ಅನಘ ರಾಜ್ಯಕ್ಕೆ ಎರಡನೇ ರ‍್ಯಾಂಕ್‌

620 ಅಂಕ ಪಡೆದವರ ಡಿಟೇಲ್ಸ್‌

ಜಿಲ್ಲೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದವರ ಪಟ್ಟಿಯಲ್ಲಿ ತೀರ್ಥಹಳ್ಳಿಯ ವಾಗ್ದೇವಿ ಇಂಗ್ಲಿಷ್ ಮೀಡಿಯಂ ಪ್ರೌಢಶಾಲೆಯ ಅನಘ ಕೆ.ಎಸ್. 624 ಅಂಕ ಗಳಿಸಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಶಿವಮೊಗ್ಗದ ಪ್ರಿಯದರ್ಶಿನಿ ಪ್ರೌಢಶಾಲೆಯ ಕೃತಿ ಪಿ.ಎಸ್. 623 ಅಂಕ, ಭದ್ರಾವತಿಯ ಪೂರ್ಣಪ್ರಜ್ಞ ವಿದ್ಯಾಸಂಸ್ಥೆಯ ಅಕುಲ್ ವಿಷ್ಣು ಭಟ್ 622 ಅಂಕ ಮತ್ತು ಶಿಕಾರಿಪುರದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕೇಶವ ಜಿ. 622 ಅಂಕ ಪಡೆದಿದ್ದಾರೆ.

ಇದನ್ನೂ ಓದಿ : ಮೈಸೂರು – ತಾಳಗುಪ್ಪ ಎಕ್ಸ್‌ಪ್ರೆಸ್‌ ಸೇರಿ ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

ವಿಕಾಸ ಪ್ರೌಢಶಾಲೆಯ ಚಿತ್ಸುಕಿ ಆರ್ ನಾಡಿಗ್ 621, ನವಜ್ಯೋತಿ ಇಂಗ್ಲಿಷ್ ಪ್ರೌಢಶಾಲೆಯ ದೇವಿ ಪ್ರಸಾದ್.ಹೆಚ್.ಯು 621, ಭದ್ರಾವತಿಯ ಸೇಂಟ್ ಮೇರಿಸ್ ಇಂಗ್ಲಿಷ್ ಪ್ರೌಢಶಾಲೆಯ ಚಾರ್ವಿ ಎಂ 620, ಸಾಗರದ ಕ್ರಿಯೇಟಿವಿಟಿ ಇಂಟರ್ ನ್ಯಾಷನಲ್ ಇಂಗ್ಲಿಷ್ ಪ್ರೌಢಶಾಲೆಯ ಪೂರ್ವ ವಿಬಪಟೇಲ್ 620 ಅಂಕ, ಶಿವಮೊಗ್ಗದ ಡಿವಿಎಸ್ ಪ್ರೌಢಶಾಲೆಯ ಶಾಂಭವಿ.ಕೆ.ಪಿ 620 ಅಂಕಗಳು ಪಡೆದಿದ್ದು ಇವರು ಅತಿ ಹೆಚ್ಚು ಅಂಕ ಪಡೆದ ಪ್ರಮುಖ ವಿದ್ಯಾರ್ಥಿಗಳಾಗಿದ್ದಾರೆ.

Shimoga-DDPI-Office-in-BH-Road

ಪರೀಕ್ಷೆ-2 ಮತ್ತು ಶುಲ್ಕದ ಮಾಹಿತಿ

‘2025-26ರ ಸಾಲಿನಲ್ಲಿ ಪರೀಕ್ಷೆ-1ರಲ್ಲಿ ಉತ್ತೀರ್ಣರಾಗಿ ಕೇವಲ ತೃತೀಯ ಭಾಷಾ ವಿಷಯದಲ್ಲಿ ಫಲಿತಾಂಶ ಸುಧಾರಿಸಿಕೊಳ್ಳಲು ಇಚ್ಛಿಸುವ ವಿದ್ಯಾರ್ಥಿಗಳಿಗೆ ಪರೀಕ್ಷೆ-2ಕ್ಕೆ ಪರೀಕ್ಷಾ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಉಳಿದ ವಿಷಯಗಳಲ್ಲಿ ಫಲಿತಾಂಶ ಸುಧಾರಿಸಿಕೊಳ್ಳಲು ಬಯಸುವವರು ಮತ್ತು ಪುನರಾವರ್ತಿತ ಅಭ್ಯರ್ಥಿಗಳು ನಿಗದಿಪಡಿಸಿದ ಶುಲ್ಕವನ್ನು ಕಡ್ಡಾಯವಾಗಿ ಪಾವತಿಸಬೇಕುʼ ಎಂದು ಡಿಡಿಪಿಐ ಮಂಜುನಾಥ್ ತಿಳಿಸಿದ್ದಾರೆ.

ದೀರ್ಘಕಾಲದ ಗೈರುಹಾಜರಿಯಿಂದ ಪರೀಕ್ಷೆ ಬರೆಯಲಾಗದ ವಿದ್ಯಾರ್ಥಿಗಳಿಗೆ ಹೊಸ ಖಾಸಗಿ ವಿದ್ಯಾರ್ಥಿಗಳಾಗಿ ತಾವು ಓದಿದ ಶಾಲೆಯ ಮೂಲಕವೇ ನೋಂದಾಯಿಸಿಕೊಳ್ಳಲು ಅವಕಾಶ ನೀಡಲಾಗಿದೆ. ಇವರು ನೋಂದಣಿ ಶುಲ್ಕ ಪಾವತಿಸಬೇಕಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ 

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Shivamogga-Live-Number-1-Promotion
Shivamogga-Live-Number-1-Promotion

Leave a Comment