ಶಿವಮೊಗ್ಗ: ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ (ATNCC) ವತಿಯಿಂದ ಐಕ್ಯೂಎಸಿ, ಎನ್ಎಸ್ಎಸ್ ಹಾಗೂ ರೆಡ್ ಕ್ರಾಸ್ ಘಟಕಗಳ ಸಂಯುಕ್ತಾಶ್ರಯದಲ್ಲಿ ಕಾಲೇಜಿನ ಚಂದನ ಸಭಾಂಗಣದಲ್ಲಿ ಅಂತರಾಷ್ಟ್ರೀಯ ಯುವ ದಿನದ ಅಂಗವಾಗಿ ನಶಾ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿದರು.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಯುವ ಸಮೂಹ ಮಾದಕ ವ್ಯಸನಗಳ ಅಡಿಯಾಳಾಗದೆ ವ್ಯಸನ ಮುಕ್ತ ಸುಸ್ಥಿರ ದೇಶ ನಿರ್ಮಾಣ ಮಾಡಲು ಕಂಕಣ ಬದ್ದರಾಗಬೇಕು.
ವೈಯೋಸಹಜ ವ್ಯಾಮೋಹಗಳಿಂದ ಶುರುವಾಗುವ ಕೆಲವು ದುಶ್ಚಟಗಳು, ಹಂತವಾಗಿ ನಮ್ಮ ದೇಹವನ್ನು ಆಕ್ರಮಿಸಿಕೊಳ್ಳುತ್ತದೆ. ಇದರಿಂದ ಸಮಾಜದಲ್ಲಿ ಗೌರವ ಇಲ್ಲವಾಗುತ್ತದೆ. ಯಾವುದೇ ಕೌಶಲ್ಯಾಧಾರಿತ ಚಿಂತನೆ ಮಾಡಲಾಗದೆ ಅಧೋಗತಿಗೆ ಬಂದು ತಲುಪಿಬಿಡುತ್ತಾರೆ.
ಕಳೆದ ವರ್ಷ ಜಿಲ್ಲೆಯಲ್ಲಿ 300 ಕ್ಕೂ ಹೆಚ್ಚು ಗಾಂಜಾ ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ ನಗರ ಪ್ರದೇಶಗಳಲ್ಲಿಯೇ ಅತಿ ಹೆಚ್ಚು ಪ್ರಕರಣಗಳು ದಾಖಲಾಗಿವೆ.
ಪೊಲೀಸ್ ಇಲಾಖೆ ಒಂದೇ ಎಲ್ಲವನ್ನು ಸರಿ ಪಡಿಸುತ್ತದೆ ಎಂಬ ಯೋಚನೆಗಿಂತ, ಸಮಾಜದ ಪ್ರಜೆಗಳಾಗಿ ಸುಸ್ಥಿರ ವಾತಾವರಣ ನಿರ್ಮಾಣ ಮಾಡಲು ಏನೆಲ್ಲಾ ಕೊಡುಗೆ ನೀಡಬಹುದು ಎಂಬುದನ್ನು ಸೂಕ್ಷ್ಮವಾಗಿ ಯೋಜಿಸಿ.
ಅಮೂಲ್ಯವಾದ ಬದುಕನ್ನು ಸಮಾಜಮುಖಿ ಕಾರ್ಯಗಳಿಗೆ ವಿನಿಯೋಗಿಸಿ. ಹೆಲ್ಮೆಟ್, ಸೀಟ್ ಬೆಲ್ಟ್ ನಂತಹ ಸೂಕ್ಷ್ಮ ವಿಚಾರಗಳ ಬಗೆಗಿನ ಅಸಡ್ಡೆ ದೊಡ್ಡ ಅನಾಹುತಗಳಿಗೆ ಕಾರಣವಾಗುತ್ತಿದ್ದು, ಸುರಕ್ಷಿತವಾಗಿ ವಾಹನಗಳನ್ನು ಚಲಾಯಿಸಿ ಎಂದು ಸಲಹೆ ನೀಡಿದರು.
ದೇಹದ ಪ್ರಕೃತಿಗೆ ಸಮಸ್ಯೆಯಾದಾಗ ಪ್ರಕೃತಿಯ ಹಾಗೆಯೇ ಸ್ವಯಂ ನಿಯಂತ್ರಿಸಿಕೊಳ್ಳಲು ಪ್ರಯತ್ನಿಸುತ್ತದೆ. ಮಾದಕ ದ್ರವ್ಯವು ದೇಹದ ಪ್ರಕೃತಿಯಲ್ಲಿ ಅಸಹಜ ಬೆಳವಣಿಗೆಗೆ ಕಾರಣವಾಗಿ, ಸಮತೋಲನ ತಪ್ಪಲು ಕಾರಣವಾಗುತ್ತದೆ. ಒಮ್ಮೆ ಶುರುವಾದ ವ್ಯಸನದಿಂದ ಹೊರಬರುವ ದಾರಿಯೇ ಕಾಣದಾಗುತ್ತದೆ. ಮನಸ್ಸಿನ ಭಾವನೆಗಳ ನಿಯಂತ್ರಣ ಮತ್ತು ಜಾಗೃತಿಯೇ ಇದಕ್ಕಿರುವ ಔಷಧವೇ ವಿನಃ ಬೇರೆ ಯಾವ ಔಷಧೀಯು ಇಲ್ಲ.ಎಸ್.ಎನ್.ನಾಗರಾಜ, ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ
ಗ್ರಾಮೀಣ ಭಾಗದಲ್ಲಿ ಈ ಅಭಿಯಾನ ವಿಸ್ತರಣೆಗೊಳ್ಳಬೇಕಿದೆ. ವಿದ್ಯಾರ್ಥಿಗಳ ಜೊತೆಗೆ ಪ್ರತಿಯೊಬ್ಬ ಪ್ರಜೆಯು ಈ ಅಭಿಯಾನದಲ್ಲಿ ಭಾಗವಹಿಸುವ ಮೂಲಕ ಸದೃಢ ಭಾರತ ನಿರ್ಮಾಣ ಮಾಡಲು ಶಕ್ತರಾಗೋಣ.ಪ್ರೊ.ಎನ್.ಕೆ.ಹರಿಯಪ್ಪ, ಎನ್ಇಎಸ್ ಕುಲಸಚಿವ
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಪಿ.ಆರ್.ಮಮತಾ ಅಧ್ಯಕ್ಷತೆ ವಹಿಸಿದ್ದರು. ಕುವೆಂಪು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ.ಶುಭಾ ಮರುವಂತೆ, ಗೃಹ ರಕ್ಷಕದಳದ ನಿಕಟಪೂರ್ವ ಜಿಲ್ಲಾ ಸಮಾದೇಷ್ಟರಾದ ಚಂದನ್ ಪಟೇಲ್, ಎನ್ಎಸ್ಎಸ್ ಘಟಕ ಅಧಿಕಾರಿ ಮಂಜುನಾಥ್.ಎನ್, ಪ್ರವೀಣ್.ಬಿ.ಎನ್, ಗಾಯತ್ರಿ.ಟಿ, ಯುವ ರೆಡ್ ಕ್ರಾಸ್ ವಿಭಾಗ ಸಂಚಾಲಕಿ ಸೌಪರ್ಣಿಕ ಉಮೇಶ್, ಶೃತಿ.ಕೆ, ದೈಹಿಕ ಶಿಕ್ಷಣ ವಿಭಾಗ ನಿರ್ದೇಶಕ ಡಾ.ಫ್ರಾನ್ಸಿಸ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ