SHIVAMOGGA LIVE NEWS | 20 FEBRUARY 2023
EDUCATION NEWS : 2023-24ನೇ ಸಾಲಿನ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳ ದಿನಾಂಕ ಪ್ರಕಟವಾಗಿದೆ. ಪತ್ರಿಕಾಗೋಷ್ಠಿಯಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖಾ ಸಚಿವ ಎಸ್.ಮಧು ಬಂಗಾರಪ್ಪ ಅವರು ಮಾಹಿತಿ ನೀಡಿದ್ದು, ಮಾರ್ಚ್ 1 ರಿಂದ 22ರ ವರೆಗೆ ಪಿಯುಸಿ ಹಾಗೂ ಮಾರ್ಚ್ 25 ರಿಂದ ಏಪ್ರಿಲ್ 6 ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆಗಳು ನಡೆಯಲಿವೆ ಎಂದು ತಿಳಿಸಿದರು.
ಎಷ್ಟು ವಿದ್ಯಾರ್ಥಿಗಳು? ಎಷ್ಟು ಪರೀಕ್ಷಾ ಕೇಂದ್ರ?
ಈ ಬಾರಿ ಪಿಯುಸಿ ಪರೀಕ್ಷೆಯಲ್ಲಿ 6,98,624 ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದಾರೆ. ಪಿಯುಸಿಗೆ 1124 ಪರೀಕ್ಷಾ ಕೇಂದ್ರಗಳನ್ನು ನಿಗದಿ ಮಾಡಲಾಗಿದೆ. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 8,96,271 ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದು, ಒಟ್ಟು 2747 ಪರೀಕ್ಷಾ ಕೇಂದ್ರಗಳು ಇರಲಿದೆ.
ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಅಧ್ಯಕ್ಷರಾದ ಮಂಜುಳಾ, ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರಾದ ಸಿಂಧೂ ಬಿ ರೂಪೇಶ್ ಹಾಗೂ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ – BREAKING NEWS – ಭದ್ರಾ ನದಿ, ನಾಲೆ ಸುತ್ತಮುತ್ತ 144 ಸೆಕ್ಷನ್ ನಿಷೇಧಾಜ್ಞೆ, ಕಾರಣವೇನು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200