ಎಸ್ಸೆಸ್ಸೆಲ್ಸಿ ಫಲಿತಾಂಶ, ರಾಜ್ಯಮಟ್ಟದಲ್ಲಿ ದಾಖಲೆ ನಿರ್ಮಿಸಿದ ಶಿವಮೊಗ್ಗ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

SHIVAMOGGA LIVE NEWS | 9 MAY 2024

EDUCATION NEWS : ಎಸ್ಸೆಸ್ಸೆಲ್ಸಿ ಪರೀಕ್ಷೆ ರಿಸೆಲ್ಟ್ ಪ್ರಕಟವಾಗಿದ್ದು ಶಿವಮೊಗ್ಗ ಜಿಲ್ಲೆ ದಾಖಲೆ ಫಲಿತಾಂಶ ಪಡೆದಿದೆ. ರಾಜ್ಯಮಟ್ಟದಲ್ಲಿ ಶಿವಮೊಗ್ಗ ಜಿಲ್ಲೆ ಮೂರನೇ ಸ್ಥಾನ ಪಡೆದಿದೆ.

ಶೇ.94ರಷ್ಟು ಫಲಿತಾಂಶ ಪಡೆದು ಉಡುಪಿ ಶೈಕ್ಷಣಿಕ ಜಿಲ್ಲೆ ಮೊದಲ ಸ್ಥಾನ ಪಡೆದಿದೆ. ದಕ್ಷಿಣ ಕನ್ನಡ ಶೇ.92.12, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳು ಶೇ.88.67ರಷ್ಟು ಫಲಿತಾಂಶ ಪಡೆದಿದ್ದು, ಕ್ರಮವಾಗಿ ಮೂರು ಮತ್ತು ನಾಲ್ಕನೆ ಸ್ಥಾನ ಪಡೆದಿವೆ.

ಶಿವಮೊಗ್ಗಕ್ಕೆ ದಾಖಲೆ ಫಲಿತಾಂಶ

ಶಿವಮೊಗ್ಗ ಜಿಲ್ಲೆಯಲ್ಲಿ 23,028 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 20,420 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಹಾಗಾಗಿ ಜಿಲ್ಲೆಗೆ ಶೇ.88.67ರಷ್ಟು ಫಲಿತಾಂಶ ದೊರೆತಿದೆ. ರಾಜ್ಯಮಟ್ಟದಲ್ಲಿ ಮೂರನೇ ಸ್ಥಾನ ಪಡೆದಿದೆ. ಕಳೆದ ಬಾರಿ ಶಿವಮೊಗ್ಗ ಜಿಲ್ಲೆ 28ನೇ ಸ್ಥಾನದಲ್ಲಿತ್ತು.

ಇದನ್ನೂ ಓದಿ – ಕೋರ್ಟ್‌ ಮೊರೆ ಹೋದ ಈಶ್ವರಪ್ಪ, ಜಯನಗರ ಠಾಣೆಯಲ್ಲಿ ದಾಖಲಾಯ್ತು ಪ್ರಕರಣ, ಏನಿದು ಕೇಸ್‌?

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment