ಶಿವಮೊಗ್ಗ: ವಿದ್ಯಾರ್ಥಿ (Students) ಜೀವನದಲ್ಲಿ ಕಲಿಯುವ ಪ್ರತಿಯೊಂದು ವಿಷಯಗಳಲ್ಲಿರುವ ವಾಸ್ತವ ಪ್ರಾಮುಖ್ಯತೆಯನ್ನು ಅರಿತು ಕಲಿಕೆ ಮುಂದುವರೆಸಿ ಎಂದು ನಾಸಾ-ಇಸ್ರೋ ಸಿಂಥೆಟಿಕ್ ಅಪರ್ಚರ್ ರಾಡಾರ್ (NISAR) ಮಿಷನ್ ಯೋಜನಾ ನಿರ್ದೇಶಕಿ ಚೈತ್ರಾ ರಾವ್ ಸಲಹೆ ನೀಡಿದರು.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ಭಾನುವಾರ ಏರ್ಪಡಿಸಿದ್ದ ಪ್ರಥಮ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಗಳ ಅಭಿವಿನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪದವಿ ಹಂತದಲ್ಲಿ ಕಲಿಯುವ ಇನ್ಟಿಗ್ರೇಷನ್ ಮತ್ತು ಡಿಫರೆಸ್ನಿಯೇಷನ್ ವಿಷಯಗಳು ರಾಕೆಟ್ ವಿಜ್ಞಾನದಲ್ಲಿ ಬಳಸಲಾಗುತ್ತದೆ. ಅದೇ ರೀತಿ ಯಾವುದೇ ವಿಷಯಗಳನ್ನು ನಾವು ಕಲಿಯುವಾಗ, ಅದರ ವಾಸ್ತವ ಬಳಕೆಯನ್ನು ಅರಿತುಕೊಳ್ಳುವುದು ಅತಿ ಮುಖ್ಯ. ಬದುಕಿನ ಹೊಸ ಜವಾಬ್ದಾರಿಗಳು ಅಂತಹ ಜ್ಞಾನದ ಅವಶ್ಯಕತೆಯನ್ನು ಒತ್ತಿ ಹೇಳುತ್ತದೆ ಎಂದರು.

ಕಲಿಕೆ ಎಂಬುದು ಬದುಕಿನ ನಿರಂತರ ಪ್ರಕ್ರಿಯೆಯಾಗಿರಬೇಕು. ಕಲಿಕೆ ನಿಂತಾಗ ಬದುಕಿನ ನಿಜವಾದ ಬೆಳವಣಿಗೆಯೆ ನಿಂತಂತೆ. ಸಿರಿ ಟೆಕ್ನಾಲಜಿಯ ಕಾಲದಲ್ಲಿ ತಂತ್ರಜ್ಞಾನದ ಕಲಿಕೆ ಕ್ಲಿಷ್ಟಕರವಾಗಿಲ್ಲ. ನಾವೀನ್ಯತೆಯ ಕಲಿಕೆಗೆ ಯಾವುದೇ ವಯಸ್ಸಿನ ಅಂತರವಿಲ್ಲ ಎಂದು ಹೇಳಿದರು.
ಸರ್.ಎಂ.ವಿ ಎಂದೆಂದಗೂ ಸ್ಪೂರ್ತಿದಾಯಕ
ಸಿಗಂದೂರು ಸೇತುವೆಯ ಉಸ್ತುವಾರಿ ಅಧಿಕಾರಿ ಪೀರ್ ಪಾಷಾ ಮಾತನಾಡಿ, ಭವಿಷ್ಯದ ಭಾರತ ನಿರ್ಮಾಣದಲ್ಲಿ ಇಂಜಿನಿಯರ್‌ಗಳ ಪಾತ್ರ ಮಹತ್ವದ್ದು. ಸರ್.ಎಂ.ವಿಶ್ವೇಶ್ವರಯ್ಯ ಅವರಂತಹ ಸೃಜನಶೀಲ ಇಂಜಿನಿಯರ್, ಮುಂದಿನ ಪೀಳಿಗೆಗೆ ಎಂದೆಂದಿಗೂ ಸ್ಪೂರ್ತಿದಾಯಕ. ರಸ್ತೆ ಸಂಪರ್ಕ ಅಭಿವೃದ್ಧಿಯಲ್ಲಿ ಅಮೆರಿಕ ದೇಶಕ್ಕೆ ಪೈಪೋಟಿ ನೀಡುವಲ್ಲಿ ಭಾರತ ಯಶಸ್ವಿಯಾಗಿದೆ ಎಂಬುದು ಹೆಮ್ಮೆಯ ವಿಚಾರ. ಇದೆಲ್ಲ ಸಾಧ್ಯವಾಗಿದ್ದು ಕೌಶಲ್ಯಾಧಾರಿತ ಇಂಜಿನಿಯರ್ ಗಳಿಂದ ಎಂದು ಹೇಳಿದರು.

ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣ ರಾವ್ ಮಾತನಾಡಿ, ರೈತನ ಕೈಯಿಗೆ ಅಂಟಿದ ಮಣ್ಣು, ಸೈನಿಕನ ಕೈಯಿಗೆ ಅಂಟಿದ ರಕ್ತ, ಶಿಕ್ಷಕರ ಕೈಯಿಗೆ ಅಂಟಿದ ಸೀಮೆ ಸುಣ್ಣ ದೇಶವನ್ನೆ ಬದಲಾಯಿಸುವ ಶಕ್ತಿ ಹೊಂದಿದೆ. ಓದು ಬರವಣಿಗೆ ಜೊತೆಗೆ ವಿನಯ ವಿನಮ್ರತೆ ಕಲಿಸುವುದು ನಿಜವಾದ ವಿದ್ಯಾಭ್ಯಾಸ. ಸಂಸ್ಕಾರಯುತ ಶಿಕ್ಷಣದ ಜೊತೆಗೆ ಮಾನವೀಯ ಸಂಪನ್ಮೂಲಗಳನ್ನು ಸೃಷ್ಟಿಸುವತ್ತ ವಿದ್ಯಾಸಂಸ್ಥೆ ಕಾರ್ಯನಿರ್ವಹಿಸುತ್ತಿದೆ. ಒಳ್ಳೆಯ ಸ್ವಭಾವ ಗಣಿತದಲ್ಲಿರುವ ಶೂನ್ಯದಂತೆ, ಏಕೆಂದರೆ ಯಾರ ಜೊತೆ ಇರುತ್ತಾರೆ ಅವರ ಬೆಲೆ ಹೆಚ್ಚುತ್ತಾ ಹೋಗುತ್ತದೆ. ಭಾಷೆಯನ್ನು ಬೆಳೆಸಲು ಕಂಕಣ ಬದ್ದರಾಗಿ, ಎಲ್ಲಿ ಭಾಷೆ ಸೋಲುತ್ತದೆ ಅಲ್ಲಿ ನಮ್ಮ ಸಂಸ್ಕೃತಿ ಸೋಲುತ್ತದೆ ಎಂದು ಹೇಳಿದರು.

ಮಲೆನಾಡಿನ ದೊಡ್ಡ ವಿದ್ಯಾಸಂಸ್ಥೆ
ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ ಮಾತನಾಡಿ, 79 ವರ್ಷಗಳ ಎನ್ಇಎಸ್ ಸಂಸ್ಥೆ ಮಲೆನಾಡಿನ ಭಾಗದಲ್ಲಿ ಅತ್ಯಂತ ದೊಡ್ಡ ವಿದ್ಯಾಸಂಸ್ಥೆಯಾಗಿ ಬೆಳೆದು ನಿಂತಿದೆ. ಪೋಷಕರು, ವಿದ್ಯಾರ್ಥಿಗಳು ವಿದ್ಯಾಸಂಸ್ಥೆಯ ನಿಜವಾದ ಪಾಲುದಾರರು. ವಿದ್ಯಾರ್ಥಿಗಳು ಸ್ವಂತ ವಾಹನಗಳಲ್ಲಿ ಬರುವುದಕ್ಕಿಂತ ಕಾಲೇಜಿನ ಸಾರಿಗೆ ವ್ಯವಸ್ಥೆಯನ್ನು ಪರಿಪೂರ್ಣವಾಗಿ ಬಳಸಿಕೊಳ್ಳಿ. ಉದ್ಯೋಗ ನೀಡುವ ಸಂಸ್ಥೆಗಳ ಅವಶ್ಯಕತೆಗೆ ಅನುಗುಣವಾಗಿ, ಕಾಲೇಜಿನಲ್ಲಿ ಲಭ್ಯವಿರುವ ಐಡಿಯಾ ಲ್ಯಾಬ್ ನಂತಹ ನಾವೀನ್ಯಯುತ ಕಾರ್ಯಚಟುವಟಿಕೆ ನಡೆಸಲು ಪೂರಕವಾಗಿರುವ ವೇದಿಕೆಗಳನ್ನು ಸದ್ಬಳಕೆ ಮಾಡಿಕೊಳ್ಳಿ ಎಂದು ಹೇಳಿದರು.
ಎನ್ಇಎಸ್ ಸಂಸ್ಥೆಯ ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ್ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಖಜಾಂಚಿ ಡಿ.ಜಿ.ರಮೇಶ್, ನಿರ್ದೇಶಕರಾದ ಪಿ.ಮೈಲಾರಪ್ಪ, ಟಿ.ಆರ್.ಅಶ್ವಥನಾರಾಯಣ ಶೆಟ್ಟಿ, ಹೆಚ್.ಸಿ.ಶಿವಕುಮಾರ್, ಎಸ್.ಮಧುರಾವ್, ಎಂ.ಆರ್.ಸೀತಾಲಕ್ಷ್ಮೀ, ಎಂ.ಎಸ್.ಅನಂತದತ್ತ, ಜಿ.ಎನ್.ಸುಧೀರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಪ್ರಾಂಶುಪಾಲ ಡಾ.ವೈ.ವಿಜಯಕುಮಾರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಎಂಸಿಎ ವಿದ್ಯಾರ್ಥಿ ಅನುಶ್ರೀ ಪ್ರಾರ್ಥಿಸಿದರು, ಡಾ.ಎಚ್.ಬಿ.ಸುರೇಶ್ ನಿರೂಪಿಸಿ, ದಿವ್ಯ ವಂದಿಸಿದರು. ಇದೇ ವೇಳೆ ಕಾಲೇಜಿನ ಕೈಪಿಡಿ ಬಿಡುಗಡೆಗೊಳಿಸಲಾಯಿತು.
ಇದನ್ನೂ ಓದಿ » ಶಿವಮೊಗ್ಗದ ಮಾಚೇನಹಳ್ಳಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ, ಶೀಘ್ರ ಕ್ಲಸ್ಟರ್ ಸ್ಥಾಪನೆಯ ಘೋಷಣೆ

Students orientation programme in JNNCE
LATEST NEWS
- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

- MRPಗಿಂತಲು ಹೆಚ್ಚು ವಸೂಲಿ, ಫ್ಲಿಪ್ಕಾರ್ಟ್ ಸಂಸ್ಥೆಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ

- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

About The Editor
ನಿತಿನ್ ಆರ್.ಕೈದೊಟ್ಲು





