SHIVAMOGGA LIVE NEWS | 3 MAY 2024
SHIMOGA : ನಾವೀನ್ಯತೆ ಇಡೀ ಜಗತ್ತನ್ನು ಸಮರ್ಥನೀಯವಾಗಿ ಮುನ್ನಡೆಸಲಿದ್ದು ಉಜ್ವಲ ಮತ್ತು ಸಮರ್ಥನೀಯ ಭವಿಷ್ಯ ನಿರ್ಮಾಣ ಮಾಡಲಿದೆ ಎಂದು ಶಾಂತಲಾ ಸ್ಪೇರೊಕ್ಯಾಸ್ಟ್ ಸಂಸ್ಥೆಯ ಉಪಾಧ್ಯಕ್ಷರಾದ ಡಿ.ಎಸ್.ಚಂದ್ರಶೇಖರ್ ಅಭಿಪ್ರಾಯಪಟ್ಟರು.
![]() |
ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕಾಲೇಜಿನ ಸಭಾಂಗಣದಲ್ಲಿ ಏರ್ಪಡಿಸಿದ್ದ ರಾಜ್ಯಮಟ್ಟದ ಅಂತರ ಇಂಜಿನಿಯರಿಂಗ್ ಕಾಲೇಜುಗಳ ವಿವಿಧ ತಾಂತ್ರಿಕ ಸ್ಪರ್ಧಾ ಕಾರ್ಯಕ್ರಮ ‘ಟೆಕ್ ಜೋನ್ – 2024’ ಉದ್ಘಾಟಿಸಿ ಮಾತನಾಡಿದರು.
ನಾವೀನ್ಯತೆ ಎಂಬುದು ಕಾಲೇಜು ಪದವಿಗಿಂತ ಭಿನ್ನವಾಗಿದೆ. ನಮ್ಮ ಆಲೋಚನೆಗಳು ಅಂತಹ ವಿಭಿನ್ನತೆಯನ್ನು ಹೊಂದಿರಬೇಕು. ನಮ್ಮ ಸುತ್ತಲಿನ ವಾತಾವರಣದಲ್ಲಿ ನಡೆದ ನಾವೀನ್ಯಯುತ ಬದಲಾವಣೆಗಳಿಂದ ಪ್ರೇರಣೆ ಪಡೆಯಿರಿ. ಉದ್ಯೋಗ ಪಡೆಯುವ ಹೋರಾಟಕ್ಕಿಂತ ಸ್ವಂತ ಉದ್ಯಮ ನಡೆಸುವತ್ತ ಕೇಂದ್ರಿಕರಿಸಿ.
ಇಂದಿನ ತಲೆಮಾರಿಗೆ ವಾಸ್ತವತೆಯ ಅರಿವು ಕಡಿಮೆಯಿದೆ. ಸಮರ್ಪಣಾ ಭಾವ ಮತ್ತು ಆತ್ಮವಿಶ್ವಾಸ ನಿಮ್ಮದಾಗಲಿ. ನಿಮ್ಮ ಸಾಮರ್ಥ್ಯದ ಮೇಲೆ ಗಮನವಹಿಸಿ ನಿರ್ಣಯಗಳನ್ನು ತೆಗೆದುಕೊಳ್ಳಿ ಎಂದು ಕಿವಿಮಾತು ಹೇಳಿದರು.
ಹೊಸತನದ ಹುಡುಕಾಟದ ಜೊತೆಗೆ ಅಸ್ತಿತ್ವದಲ್ಲಿರುವ ವಿಷಯಗಳನ್ನು ಸುಧಾರಿಸುವುದು ಕೂಡ ನಾವೀನ್ಯತೆಯೆ. ಹಾಗಾಗಿಯೇ ನಮ್ಮ ಸುತ್ತಲಿನ ವಾತಾವರಣದಲ್ಲಿರುವ ವಾಸ್ತವತೆಯನ್ನು ಸೂಕ್ಷ್ಮವಾಗಿ ಗಮನಿಸಿ ಎಸ್.ಎನ್.ನಾಗರಾಜ, ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ
ಜೆ.ಎನ್.ಎನ್.ಸಿ.ಇ ಪ್ರಾಂಶುಪಾಲ ಡಾ.ವೈ.ವಿಜಯಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಶೈಕ್ಷಣಿಕ ಡೀನ್ ಡಾ.ಪಿ.ಮಂಜುನಾಥ, ಸಂಶೋಧನಾ ಡೀನ್ ಡಾ.ಎಸ್.ವಿ.ಸತ್ಯನಾರಾಯಣ, ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ.ಈ.ಬಸವರಾಜ ಸೇರಿದಂತೆ ವಿದ್ಯಾರ್ಥಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಮುಂದುವರೆದ ಬಿಸಿಲು, ಇವತ್ತು ಎಷ್ಟಿರುತ್ತೆ ತಾಪಮಾನ? ಇಲ್ಲಿದೆ ಇಡೀ ದಿನದ ಉಷ್ಣಾಂಶ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200