ಶಿವಮೊಗ್ಗ: ನಗರದ ಜೆ.ಎನ್.ಎನ್ ಇಂಜಿನಿಯರಿಂಗ್ ಕಾಲೇಜಿನ ಅನನ್ಯ ಮಂಟಪದಲ್ಲಿ ರಾಜ್ಯಮಟ್ಟದ ಇಂಜಿನಿಯರಿಂಗ್ ಅಂತರ ಕಾಲೇಜುಗಳ ತಾಂತ್ರಿಕ ಸ್ಪರ್ಧೆ ‘ಟೆಕ್ ಜೋನ್’ (Tech Zone) ಸಮಾರೋಪ ಸಮಾರಂಭ ನಡೆಯಿತು. ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ನಂತರ ಜಾನ್ವಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್ ಟು ಸ್ಕೂಲ್ ಆಫರ್, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್?
ಯಾರೆಲ್ಲ ಏನೆಲ್ಲ ಹೇಳಿದರು?



ಕಾಲೇಜಿನ ಪ್ರಾಂಶುಪಾಲರಾದ ಡಾ.ವೈ.ವಿಜಯಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಎನ್ಇಎಸ್ ಆಜೀವ ಸದಸ್ಯ ರಾಮಪ್ರಸಾದ್, ಶೈಕ್ಷಣಿಕ ಡೀನ್ ಡಾ.ಪಿ.ಮಂಜುನಾಥ, ಸಂಶೋಧನಾ ಡೀನ್ ಡಾ.ಎಸ್.ವಿ.ಸತ್ಯನಾರಾಯಣ, ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ.ಈ.ಬಸವರಾಜ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಇದನ್ನೂ ಓದಿ » ಕುವೆಂಪು ವಿವಿ ಘಟಿಕೋತ್ಸವ, ಅಭ್ಯರ್ಥಿಗಳಿಂದ ಪದವಿ ಪ್ರಮಾಣ ಪತ್ರಕ್ಕೆ ಅರ್ಜಿ ಆಹ್ವಾನ

