ಕೊನೆಗೂ ಕುವೆಂಪು ವಿವಿ ಘಟಿಕೋತ್ಸವಕ್ಕೆ ದಿನಾಂಕ ನಿಗದಿ, ಇತಿಹಾಸದಲ್ಲೇ ಮೊದಲು ಈ ರೀತಿಯ ಘಟಿಕೋತ್ಸವ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | SHIMOGA | 10 ಜೂನ್ 2022

ಕುವೆಂಪು ವಿಶ್ವವಿದ್ಯಾಲಯದ ಘಟಿಕೋತ್ಸವಕ್ಕೆ ಕೊನೆಗೂ ದಿನಾಂಕ ನಿಗದಿಯಾಗಿದೆ. ಎರಡು ಶೈಕ್ಷಣಿಕ ವರ್ಷದ ಘಟಿಕೋತ್ಸವವನ್ನು ಒಂದೆ ದಿನ ನಡೆಸಲು ತೀರ್ಮಾನಿಸಲಾಗಿದೆ. ಆದರೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಮುಖ್ಯ ಅತಿಥಿಯಾಗಿ ಕರೆಯಿಸಬೇಕು ಎಂದು ಬಿಗಿಪಟ್ಟು ಹಿಡಿದಿದ್ದ ವಿವಿ ಆಡಳಿತಕ್ಕೆ ನಿರಾಸೆ ಉಂಟಾಗಿದೆ.

Shimoga Nanjappa Hospital

ಶಂಕರ ಘಟ್ಟದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್’ನಲ್ಲಿ ಎರಡು ವರ್ಷದ ಘಟಿಕೋತ್ಸವ ನಡೆಸಲಾಗುತ್ತಿದೆ. ಜೂನ್ 16ರಂದು ಘಟಿಕೋತ್ಸವ ನಿಗದಿಯಾಗಿದೆ. ಇದರ ಅಧಿಕೃತ ಪ್ರಕಟಣೆ ಬಾಕಿ ಇದೆ.

ಎರಡು ವರ್ಷದ ಘಟಿಕೋತ್ಸವ

ಕಳೆದ ಎರಡು ವರ್ಷ ಕುವೆಂಪು ವಿವಿಯಲ್ಲಿ ಘಟಿಕೋತ್ಸವ ನಡೆದಿರಲಿಲ್ಲ. ಹಾಗಾಗಿ 31 ಮತ್ತು 32ನೇ ಘಟಿಕೋತ್ಸವವನ್ನು ಒಟ್ಟಿಗೆ ಆಯೋಜಿಸಲಾಗಿದೆ. ಕುವೆಂಪು ವಿವಿಯ ಇತಿಹಾಸದಲ್ಲಿ ಇದೆ ಮೊದಲ ಭಾರಿಗೆ ಎರಡು ಘಟಿಕೋತ್ಸವಗಳನ್ನು ಒಟ್ಟಿಗೆ ಮಾಡಲಾಗುತ್ತಿದೆ.

ಎರಡು ಘಟಿಕೋತ್ಸವ ಒಟ್ಟಿಗೆ ಮಾಡಲು ಕಾರಣವೇನು?

ಕಾರಣ 1 – ಕೋವಿಡ್ ಆತಂಕದಿಂದ ಘಟಿಕೋತ್ಸವ ಮುಂದೂಡಲಾಗಿತ್ತು. ಹೆಚ್ಚು ಜನರನ್ನು ಒಂದೆಡೆ ಸೇರಿಸದಂತೆ ಸರ್ಕಾರ ಗೈಡ್ ಲೈನ್ ಹೊರಡಿಸಿತ್ತು. ಈ ಹಿನ್ನೆಲೆ ಘಟಿಕೋತ್ಸವ ಆಯೋಜಿಸಿರಲಿಲ್ಲ.

ಕಾರಣ 2 – ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದಲೆ ಘಟಿಕೋತ್ಸವ ಉದ್ಘಾಟನೆ ಮಾಡಿಸಬೇಕು ಎಂದು ವಿವಿಯ ಆಡಳಿತ ಬಿಗಿ ಪಟ್ಟು ಹಿಡಿದಿತ್ತು. 2021ರ ಅಕ್ಟೋಬರ್ ತಿಂಗಳಲ್ಲಿ ಘಟಿಕೋತ್ಸವ ನಿಗದಿಯಾಗಿತ್ತು. ಸಚಿವರು ಸಮಯ ಕೊಡದ ಹಿನ್ನೆಲೆ ಹಲವು ಭಾರಿ ಮುಂದೂಡಲಾಗಿತ್ತು.

ತಣ್ಣೀರು ಎರಚಿದ ಕೇಂದ್ರ ಸಚಿವೆ

ಕೇಂದ್ರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಘಟಿಕೋತ್ಸವದ ಉದ್ಘಾಟನೆಗೆ ಕರೆಯಿಸಲು ನಿರ್ಧರಿಸಲಾಗಿತ್ತು. ಅವರಿಗೆ ಆಹ್ವಾನವನ್ನೂ ನೀಡಲಾಗಿತ್ತು. ನಿರ್ಮಲಾ ಸೀತಾರಾಮನ್ ಅವರು ಸಮಯ ನೀಡದ ಕಾರಣ ಹಲವು ಭಾರಿ ಘಟಿಕೋತ್ಸವವನ್ನು ಮುಂದೂಡಲಾಯಿತು. ಆದರೆ ಕೇಂದ್ರ ಸಚಿವ ನಿರ್ಮಲಾ ಸೀತಾರಾಮನ್ ಅವರು ವಿವಿ ಆಡಳಿತದ ಆಸೆಗೆ ತಣ್ಣೀರು ಎರಚಿದ್ದಾರೆ. ಅನಿವಾರ್ಯವಾಗಿ ಘಟಿಕೋತ್ಸವ ನಡೆಸಬೇಕಾಗಿದೆ.

ನಿಟ್ಟುಸಿರು ಬಿಟ್ಟ ವಿದ್ಯಾರ್ಥಿಗಳು

ಕುವೆಂಪು ವಿವಿ ಘಟಿಕೋತ್ಸವ ಆಯೋಜಿಸುತ್ತಿರುವುದು ವಿಚಾರ ತಿಳಿದು ವಿದ್ಯಾರ್ಥಿಗಳು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಘಟಿಕೋತ್ಸವ ನಡೆಯದೆ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿಲ್ಲ. ಪದವಿ ಮುಗಿದು ಉದ್ಯೋಗಕ್ಕೆ ತೆರಳುವ ಅಭ್ಯರ್ಥಿಗಳಿಗೆ ಅಂಕ ಪಟ್ಟಿ ಮತ್ತು ಪ್ರಮಾಣ ಪತ್ರ ಮುಖ್ಯವಾಗುತ್ತದೆ. ಸರ್ಕಾರಿ ಉದ್ಯೋಗಕ್ಕೆ ಪ್ರಮಾಣ ಪತ್ರ ಅತ್ಯಗತ್ಯ. ಹಲವು ಖಾಸಗಿ ಕಂಪನಿಗಳು ಕೂಡ ಪ್ರಮಾಣ ಪತ್ರ ಕಡ್ಡಾಯಗೊಳಿಸಿವೆ. ಆದರೆ ಘಟಿಕೋತ್ಸವ ವಿಳಂಬದಿಂದ ಸುಮಾರು 25 ಸಾವಿರ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದರು.

ಹೇಗಿರುತ್ತೆ ಈ ಭಾರಿ ಘಟಿಕೋತ್ಸವ?

ಎರಡು ಘಟಿಕೋತ್ಸವವನ್ನು ಒಟ್ಟಿಗೆ ಆಯೋಜನೆ ಮಾಡಲಾಗಿದೆ. ಗಣ್ಯರನ್ನು ಆಹ್ವಾನಿಸಲಾಗಿದೆ. ಈಗಾಗಲೇ ಗೌರವ ಡಾಕ್ಟರೇಟ್ ನೀಡುವವರ ಹೆಸರುಗಳು ಅಂತಿಮವಾಗಿದೆ. ರಾಂಕ್ ಪಡೆದ ವಿದ್ಯಾರ್ಥಿಗಳು, ಪಿ.ಹೆಚ್.ಡಿ ಪಡೆಯಲಿರುವ ಸಂಶೋಧನಾರ್ಥಿಗಳಿಗೆ ಈಗಾಗಲೆ ಮಾಹಿತಿ ರವಾನಿಸಲಾಗಿದೆ. ಎರಡು ಘಟಿಕೋತ್ಸವವನ್ನ ಒಟ್ಟಿಗೆ ಆಯೋಜನೆ ಮಾಡಿ, ಪದವಿ ಪ್ರಧಾನ ಮಾಡಲಾಗುತ್ತದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ – ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ಇದನ್ನೂ ಓದಿ – ಸಾಗರದ ಸರ್ಕಾರಿ ಶಾಲೆಗಳ ದುಸ್ಥಿತಿ ಬಗ್ಗೆ ಶಾಸಕರ ಮೌನಕ್ಕೆ ಬೇಳೂರು ಆಕ್ರೋಶ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 10, 2022

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment