ಜಗತ್ತಿನ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಕುವೆಂಪು ವಿಶ್ವವಿದ್ಯಾಲಯದ ಇಬ್ಬರಿಗೆ ಸ್ಥಾನ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ |SHANKARAGATTA  NEWS | 23 ಅಕ್ಟೋಬರ್ 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಅಮೆರಿಕಾದ ಪ್ರತಿಷ್ಠಿತ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯ ಹೊರತಂದಿರುವ ವಿಶ್ವದ ಟಾಪ್ 2% ವಿಜ್ಞಾನಿಗಳ ಪಟ್ಟಿಯಲ್ಲಿ ಕುವೆಂಪು ವಿವಿಯ ಡಾ. ಬಿ. ಜೆ ಗಿರೀಶ್ ಮತ್ತು ಡಾ.ಬಿ.ಇ.ಕುಮಾರಸ್ವಾಮಿ ಸ್ಥಾನ ಪಡೆದಿದ್ದಾರೆ.

NH nephrolody%2Bad %2Bkannada 10

ಎಲ್ಸೇವಿಯರ್ ಸಂಸ್ಥೆಯ ಸಹಯೋಗದೊಂದಿಗೆ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯದ ಜೆರೋಯಿನ್ ಬಾಸ್, ಕೆವಿನ್ ಬೋಯಾಕ್ ಮತ್ತು ಜಾನ್ ಪಿ.ಎ. ಇವೊನ್ನಿಡಿಸ್ ಅವರನ್ನೊಳಗೊಂಡ ಸಂಶೋಧನಾ ತಂಡ ಸಿದ್ಧಪಡಿಸಿರುವ ವಿಶ್ವದ ಟಾಪ್ 2% ವಿಜ್ಞಾನಿಗಳ ಡೇಟಾಬೇಸ್‌ ಅಕ್ಟೋಬರ್ 19ರಂದು ಬಿಡುಗಡೆಯಾಗಿದ್ದು, ಅಂತರ್ಜಾಲದಲ್ಲಿ ಮುಕ್ತವಾಗಿ ಲಭ್ಯವಿದೆ ಎಂದು ಕುವೆಂಪು ವಿವಿ ಪ್ರಕಟಣೆಯಲ್ಲಿ ತಿಳಿಸಿದೆ.

ಅಂತಾರಾಷ್ಟ್ರೀಯ ಮಟ್ಟದ ಸಂಶೋಧನೆ

ಸಂಶೋಧನಾ ತಂಡವು ವಿಶ್ವದ ಸಂಶೋಧಕರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೈಗೊಂಡ ಸಂಶೋಧನಾ ಪ್ರಕಟಣೆಗಳು, ಸಂಶೋಧನಾ ಉಲ್ಲೇಖಗಳು, ಸಹಲೇಖನಗಳು, ಹೆಚ್-ಇಂಡೆಕ್ಸ್ ಸೇರಿದಂತೆ ಹಲವು ಸಂಯೋಜಿತ ಮಾನದಂಡಗಳನ್ನು ಬಳಸಿ ಜಾಗತಿಕವಾಗಿ ಅತ್ಯುತ್ತಮ ಒಂದು ಲಕ್ಷ ವಿಜ್ಞಾನಿಗಳನ್ನು ಗುರುತಿಸಿ ದತ್ತಾಂಶವನ್ನು ಪ್ರಕಟಿಸಿದ್ದಾರೆ. ಪಟ್ಟಿಯು 22 ವಿಜ್ಞಾನ ವಿಷಯಗಳು ಮತ್ತು 176 ಉಪವಿಜ್ಞಾನ ವಿಷಯಗಳನ್ನು ವಿಂಗಡಿಸಿ ರಚಿಸಿರುವುದಾಗಿದ್ದು, ವೃತ್ತಿಜೀವಮಾನ ಸಾಧಕರು ಮತ್ತು 2021ನೇ ಸಾಲಿನ ಸಾಧಕರು ಎಂಬ ಎರಡು ವಿಭಾಗಗಳನ್ನು ಒಳಗೊಂಡಿದೆ.

AVvXsEhb3jFyWxFwNeCYl AbejJXI2RvEJ8pSPctaWyCB5ZltVBbmE6B9C3QsINsmdQD8fgFAqE8DdbKLxNEFzvOYigt6zxfLjDgAY0qIwLwfX7VbTE48iev J XGNszghyKdXl
ಡಾ. ಕುಮಾರಸ್ವಾಮಿ | ಡಾ. ಗಿರೀಶ್

2021ರ ಸಾಲಿನ ಉತ್ತಮ ವಿಜ್ಞಾನಿಗಳ ಪಟ್ಟಿಯಲ್ಲಿ 54804ನೇ ಸ್ಥಾನವನ್ನು ಪಡೆದಿರುವ ವಿವಿಯ ಗಣಿತವಿಜ್ಞಾನ ಸಹಪ್ರಾಧ್ಯಾಪಕ ಡಾ. ಬಿ.ಜೆ. ಗಿರೀಶ್ ಇಂಜಿನಿಯರಿಂಗ್, ಅನ್ವಯಿಕ ಭೌತಶಾಸ್ತ್ರ ಮತ್ತು ಮೆಕ್ಯಾನಿಕಲ್ ಇಂಜಿನಿಯರಿಂಗ್‌ ವಿಷಯಗಳ ಕುರಿತ ಸಂಶೋಧನಾ ಲೇಖನಗಳನ್ನು ಪ್ರಕಟಿಸಿದ್ದಾರೆ. ಇನ್ನು ಔದ್ಯೋಗಿಕ ರಸಾಯನಶಾಸ್ತ್ರ ವಿಭಾಗದ ಸಹ ಪ್ರಧ್ಯಾಪಕ  ಡಾ. ಬಿ. ಇ. ಕುಮಾರಸ್ವಾಮಿ 165713ನೇ ಸ್ಥಾನದಲ್ಲಿದ್ದಾರೆ.

ಈ ವರ್ಷದ ಪಟ್ಟಿಯಲ್ಲಿ ಭಾರತದ ವಿಶ್ವವಿದ್ಯಾಲಯಗಳು ಮತ್ತು ಶೈಕ್ಷಣಿಕ ಸಂಸ್ಥೆಗಳ ಸುಮಾರು 2042 ವಿಜ್ಞಾನಿಗಳು ಸ್ಥಾನ ಪಡೆದಿದ್ದಾರೆ. ಕಳೆದ ವರ್ಷ 1900 ವಿಜ್ಞಾನಿಗಳು ಸ್ಥಾನ ಪಡೆದಿದ್ದರು. ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ (IISc.) 114 ವಿಜ್ಞಾನಿಗಳು ಈ ಪಟ್ಟಿಯಲ್ಲಿದ್ದಾರೆ.

ಕಳೆದ ಕೆಲವು ವರ್ಷಗಳಿಂದ ವಿವಿಯ ಸಂಶೋಧನಾ ಸಾಧನೆಗೆ ಪೂರಕವಾದ ಕಾರ್ಯ ಮಾಡುತ್ತಿರುವ ಈ ಇಬ್ಬರು ಅಧ್ಯಾಪಕರ ಸಾಧನೆಯು ಕುವೆಂಪು ವಿವಿಗೆ ಹೆಮ್ಮೆ ತಂದಿದೆ ಎಂದು ವಿವಿಯ ಕುಲಪತಿ ಪ್ರೊ. ಬಿ.ಪಿ. ವೀರಭದ್ರಪ್ಪ ಮತ್ತು ಕುಲಸಚಿವೆ ಜಿ. ಅನುರಾಧ ಅವರು ಅಭಿನಂದಿಸಿದ್ದಾರೆ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment