GOOD NEWS | ಜಗತ್ತಿನ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಕುವೆಂಪು ವಿವಿಯ ಇಬ್ಬರಿಗೆ ಸ್ಥಾನ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shimoga Nanjappa Hospital

 SHIVAMOGGA LIVE NEWS 

SHANKARAGHATTA | ಅಮೇರಿಕದ ಸ್ಟ್ಯಾನ್‌ಫೋರ್ಡ್ ವಿವಿ ಹೊರತಂದಿರುವ ವಿಶ್ವದ ಟಾಪ್ ಶೇ.2 ವಿಜ್ಞಾನಿಗಳ (TOP SCIENTISTS) ಪಟ್ಟಿಯಲ್ಲಿ ಕುವೆಂಪು ವಿವಿ ಸಹ ಪ್ರಾಧ್ಯಾಪಕರಾದ ಡಾ.ಬಿ.ಜೆ. ಗಿರೀಶ್ ಮತ್ತು ಡಾ.ಬಿ.ಇ. ಕುಮಾರಸ್ವಾಮಿ ಮತ್ತೊಮ್ಮೆ ಸ್ಥಾನ ಪಡೆದಿದ್ದಾರೆ.

Shimoga Nanjappa Hospital

ಎಲ್ಸೇವಿಯರ್ ಸಂಸ್ಥೆಯ ಸಹಯೋಗದೊಂದಿಗೆ ಸ್ಟ್ಯಾನ್‌ಫೋರ್ಡ್ ವಿವಿಯ ಜೆರೋಯಿನ್ ಬಾಸ್, ಕೆವಿನ್ ಬೋಯಾಕ್ ಮತ್ತು ಡಾ.ಜಾನ್ ಇವೊನ್ನಿಡಿಸ್ ಸಂಶೋಧನಾ ತಂಡ ಅ.10ರಂದು ವಿಶ್ವದ ಅಗ್ರ ಶೇ.2 ವಿಜ್ಞಾನಿಗಳ (TOP SCIENTISTS) ಡೇಟಾಬೇಸ್ ಬಿಡುಗಡೆ ಮಾಡಿದೆ.

ಕ್ಲಿಕ್ ಮಾಡಿ ಇದನ್ನೂ ಓದಿ |  JNN ಇಂಜಿನಿಯರಿಂಗ್ ಕಾಲೇಜಿನಲ್ಲಿ 2 ದಿನ ಅಂತಾರಾಷ್ಟ್ರೀಯ ಸಮ್ಮೇಳನ, ಏನೆಲ್ಲ ಚರ್ಚೆಯಾಗಲಿದೆ?

ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೈಗೊಂಡ ಸಂಶೋಧನಾ ಪ್ರಕಟಣೆಗಳು, ಸಂಶೋಧನಾ ಉಲ್ಲೇಖಗಳು, ಸಹಲೇಖನಗಳು, ಇಂಡೆಕ್ಸ್ ಸೇರಿದಂತೆ ಹಲವು ಸಂಯೋಜಿತ ಮಾನದಂಡಗಳನ್ನು ಬಳಸಿ, ಜಾಗತಿಕ ಅತ್ಯುತ್ತಮ ಒಂದು ಲಕ್ಷ ವಿಜ್ಞಾನಿಗಳನ್ನು ಗುರುತಿಸಿ ದತ್ತಾಂಶ ಪ್ರಕಟಿಸಲಾಗಿದೆ.

TOP SCIENTISTS

22 ವಿಜ್ಞಾನ ವಿಷಯಗಳು ಮತ್ತು 176 ಉಪವಿಜ್ಞಾನ ವಿಷಯಗಳನ್ನು ವಿಂಗಡಿಸಿ ಪಟ್ಟಿ (TOP SCIENTISTS) ರಚಿಸಲಾಗಿದೆ. ವೃತ್ತಿ ಜೀವಮಾನ ಸಾಧಕರು ಮತ್ತು 2022ನೇ ಸಾಲಿನ ಸಾಧಕರು ಎಂಬ ಎರಡು ವಿಭಾಗಗಳಲ್ಲಿ ಪಟ್ಟಿ ಪ್ರಕಟಿಸಲಾಗಿದೆ. 2022ರ ಸಾಲಿನ ಉತ್ತಮ ವಿಜ್ಞಾನಿಗಳ ಪಟ್ಟಿಯಲ್ಲಿ ಕುವೆಂಪು ವಿವಿಯ ಗಣಿತ ವಿಜ್ಞಾನ ಸಹಪ್ರಾಧ್ಯಾಪಕ ಡಾ.ಬಿ.ಜೆ. ಗಿರೀಶ್ 50,440ನೇ ಸ್ಥಾನ ಪಡೆದಿದ್ದಾರೆ. ಇಂಜಿನಿಯರಿಂಗ್, ಅನ್ವಯಿಕ ಭೌತಶಾಸ್ತ್ರ ಮತ್ತು ಮೆಕಾನಿಕಲ್ ಇಂಜಿನಿಯರಿಂಗ್ ವಿಷಯಗಳ ಕುರಿತ ಅತ್ಯುತ್ತಮ ಸಂಶೋಧನಾ ಲೇಖನಗಳನ್ನು ಪ್ರಕಟಿಸಿದ್ದಾರೆ. ಸತತ ನಾಲ್ಕನೇ ವರ್ಷ ಈ ಪಟ್ಟಿಯಲ್ಲಿ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ.

ಔದ್ಯೋಗಿಕ ರಸಾಯನಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಡಾ.ಬಿ.ಇ.ಕುಮಾರಸ್ವಾಮಿ 1,63,473ನೇ ಸ್ಥಾನದಲ್ಲಿದ್ದು, ಸತತ ಎರಡನೇ ವರ್ಷ ಪಟ್ಟಿಯಲ್ಲಿ ಸ್ಥಾನ ಗಳಿಸಿದ್ದಾರೆ.

JNNCe Engineering College

ಕ್ಲಿಕ್ ಮಾಡಿ ಇದನ್ನೂ ಓದಿ |  ಶಿವಮೊಗ್ಗದಲ್ಲಿ 7 ಚಕ್ರದ ಆಟೋ, ಒಳಗೆ ಎಲ್ಲವೂ ಹೈಟೆಕ್, ಹೇಗಿದೆ? ಏನೇನೆಲ್ಲ ಇದೆ?

ADVERTISEMENT 

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment