ಕುವೆಂಪು ವಿಶ್ವವಿದ್ಯಾಲಯ, ಅರ್ಜಿ ಸಲ್ಲಿಸುವ ದಿನಾಂಕ ಮುಂದಕ್ಕೆ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಂಕರಘಟ್ಟ: ಕುವೆಂಪು ವಿಶ್ವವಿದ್ಯಾಲಯವು 2025-26ನೇ ಶೈಕ್ಷಣಿಕ ಸಾಲಿನ ಸ್ನಾತಕೋತ್ತರ ಪದವಿ ಮತ್ತು ಸ್ನಾತಕೋತ್ತರ ಡಿಪ್ಲೊಮಾ ಕೋರ್ಸ್‌ಗಳ ಪ್ರವೇಶಾತಿಗೆ (Admission) ಸಂಬಂಧಿಸಿದಂತೆ ಯುಯುಸಿಎಂಎಸ್ ಪೋರ್ಟಲ್ ಮೂಲಕ ಆಹ್ವಾನಿಸಲಾದ ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಿದೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಇಲ್ಲಿದೆ ಪ್ರಮುಖ ದಿನಾಂಕಗಳು

  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಆಗಸ್ಟ್ 8
  • ಮೆರಿಟ್ ಆಧಾರಿತ ಪಟ್ಟಿ ಬಿಡುಗಡೆ: ಆಗಸ್ಟ್ 18
  • ಪ್ರವೇಶಾತಿ ಕೌನ್ಸಿಲಿಂಗ್:
  • ಮೆರಿಟ್ ಮತ್ತು ಸ್ಪೆಷಲ್‌ ಕೆಟಗರಿ: ಆಗಸ್ಟ್ 20
  • ಮೆರಿಟ್ ಕಮ್ ಪೇಮೆಂಟ್: ಆಗಸ್ಟ್ 21
  • ವರ್ಗಾವಣೆಗೆ ಕೊನೆಯ ದಿನಾಂಕ: ಆಗಸ್ಟ್ 22

ಈ ಕುರಿತು ಕುವೆಂಪು ವಿಶ್ವವಿದ್ಯಾಲಯದ ಶೈಕ್ಷಣಿಕ ವಿಭಾಗದ ಉಪ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆಸಕ್ತ ವಿದ್ಯಾರ್ಥಿಗಳು ವಿಸ್ತರಿಸಿದ ಅವಧಿಯೊಳಗೆ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಅಧಿಕಾರಿಗಳಿಂದಲೇ ಕಡತಗಳಿಗೆ ಬೆಂಕಿ ಆರೋಪ, ಕಚೇರಿ ಮುಂದೆ ದಿಢೀರ್‌ ಹೋರಾಟ

June-2025-Report-Shivamogga-Live-New-New.

kuvempu-University-

Leave a Comment