ಶಿವಮೊಗ್ಗದ ಸಾಂದೀಪನಿ ಶಾಲೆಗೆ ಪ್ರಥಮ ಸ್ಥಾನ

ಶಿವಮೊಗ್ಗ: ಸಹ್ಯಾದ್ರಿ ಸವೋದಯ ಶಾಲಾ ಸಂಕೀರ್ಣ ಹಾಗೂ ಜ್ಞಾನ ಸಾಗರ ಸೆಂಟ್ರಲ್ ಸ್ಕೂಲ್ ಸಂಯುಕ್ತ ಆಶ್ರಯದಲ್ಲಿ ಅ.31ರಂದು ನಡೆದ 14 ವರ್ಷದೊಳಗಿನ ಜಿಲ್ಲಾ ಮಟ್ಟದ ಸಿಬಿಎಸ್‌ಇ ಶಾಲೆಗಳ ವಾಲಿಬಾಲ್ ಪಂದ್ಯಾವಳಿಯಲ್ಲಿ ಶಿವಮೊಗ್ಗದ ಸಾಂದೀಪನಿ ಆಂಗ್ಲ ಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ ಪಡೆದಿದೆ. (ಈ ಸುದ್ದಿಯನ್ನು ಇನ್ನು 24 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಸತತ ಎರಡನೇ ಬಾರಿಗೆ ಪ್ರಶಸ್ತಿ ಗೆಲ್ಲುವ ಮೂಲಕ ಶಾಲೆಗೆ ಕೀರ್ತಿ ತಂದಿರುವ ವಿದ್ಯಾರ್ಥಿಗಳನ್ನು ಶಾಲೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದ ಅಭಿನಂದಿಸಿದ್ದಾರೆ. ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ ದೈಹಿಕ ಶಿಕ್ಷಣ ಶಿಕ್ಷಕರ ಕಾರ್ಯವನ್ನೂ ಶ್ಲಾಘಿಸಿದ್ದಾರೆ.

Sandeepani-English-School-Volleyball-Team