ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಂಕರಘಟ್ಟ: ಕುವೆಂಪು ವಿಶ್ವವಿದ್ಯಾಲಯದದಲ್ಲಿ ನಡೆದ ಮೂರು ದಿನಗಳ ಅಂತರ ಕಾಲೇಜು ಮಟ್ಟದ ಸಾಂಸ್ಕೃತಿಕ ಸ್ಪರ್ಧೆ ಸಹ್ಯಾದ್ರಿ ಉತ್ಸವಕ್ಕೆ ಶನಿವಾರ ತೆರೆಬಿದ್ದಿದೆ. ಸಾಗರದ ಇಂದಿರಾ ಗಾಂಧಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಸಮಗ್ರ ಪ್ರಶಸ್ತಿ (championship) ತನ್ನದಾಗಿಸಿಕೊಂಡಿದೆ.
ವಿವಿಯ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಯ 40ಕ್ಕೂ ಹೆಚ್ಚು ಪದವಿ ಕಾಲೇಜುಗಳ ವಿದ್ಯಾರ್ಥಿಗಳು ಸಹ್ಯಾದ್ರಿ ಉತ್ಸವದಲ್ಲಿ ಸ್ಪರ್ಧಿಸಿದ್ದರು. ಪಥ ಸಂಚಲನದಲ್ಲಿ ವಿಶಿಷ್ಟವಾಗಿ ಮಾದಕ ವಸ್ತುಗಳು, ಸಮಾಜದಲ್ಲಿ ಕೆಟ್ಟ ನಡವಳಿಕೆಯನ್ನು ಮಹಿಷನ ರೂಪದಲ್ಲಿ ಪ್ರಸ್ತುತಪಡಿಸಿದ್ದ ನಗರದ ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯ ಪ್ರಥಮ ಸ್ಥಾನ, ಕಮಲ ನೆಹರು ಮೆಮೋರಿಯಲ್ ರಾಷ್ಟ್ರೀಯ ಮಹಿಳಾ ಕಾಲೇಜು ದ್ವಿತೀಯ, ರಿಪ್ಪನ್ ಪೇಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತೃತೀಯ ಬಹುಮಾನ ಪಡೆದಿವೆ.

ಇದನ್ನೂ ಓದಿ – ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

LATEST NEWS
- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

- ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

- ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

About The Editor
ನಿತಿನ್ ಆರ್.ಕೈದೊಟ್ಲು














