ಶಿಕ್ಷಣದೊಂದಿಗೆ ಯಕ್ಷಗಾನ, ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ, ಯಾರೆಲ್ಲ ಸೇರಬಹುದು?

ಶಿವಮೊಗ್ಗ: ರಾಜ್ಯ ಸರ್ಕಾರದ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾನಿಲಯದಿಂದ ಮಾನ್ಯತೆ ಪಡೆದಿರುವ ಹಂಗಾರಕಟ್ಟೆ ಯಕ್ಷಗಾನ ಕಲಾಕೇಂದ್ರವು ‘ಶಿಕ್ಷಣದೊಂದಿಗೆ ಯಕ್ಷಗಾನ’ ಗುರುಕುಲ ಪದ್ಧತಿಯ ವಸತಿ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿದೆ. ವಸತಿ ಶಾಲೆಯಲ್ಲಿ 6ನೇ ತರಗತಿಯಿಂದ 10 ತರಗತಿವರೆಗಿನ ಬಾಲಕರಿಗೆ ಪ್ರವೇಶ ನೀಡಲಾಗುವುದು.

ಸುದ್ದಿಯ ಮುಂದಿನ ಭಾಗ ಕೆಳಗಿದೆ

ಅವಕಾಶ ಪಡೆದ ಬಾಲಕರಿಗೆ ಹತ್ತಿರದ ಶಾಲೆಯಲ್ಲಿ ಶಿಕ್ಷಣ ನೀಡಲಾಗುವುದಲ್ಲದು. ಉಚಿತ ಊಟ, ಉಪಹಾರ, ವಸತಿ ವ್ಯವಸ್ಥೆಯೊಂದಿಗೆ ಯಕ್ಷಗಾನದ ಭಾಗವತಿಕೆ, ಮದ್ದಲೆ, ಚಂಡೆ, ನೃತ್ಯ ಶಿಕ್ಷಣವನ್ನೂ ನೀಡಲಾಗುವುದು. ಯಕ್ಷಗಾನದ ಸರ್ಟಿಫಿಕೇಟ್ ಮತ್ತು ಡಿಪ್ಲೊಮಾ ಕೋರ್ಸ್‌ಗೆ ಪರೀಕ್ಷೆ ನಡೆಸಿ ಉತ್ತೀರ್ಣರಾದವರಿಗೆ ವಿಶ್ವವಿದ್ಯಾನಿಲಯದ ಸರ್ಟಿಫಿಕೇಟ್ ನೀಡಲಾಗುವುದು.

Education News Shimoga Live Update

ಗುರುಕುಲ ಪದ್ದತಿಯ ಈ ಶಾಲೆಗೆ ಸೇರಬಯಸುವವರು ಮೇ 25ರೊಳಗೆ ಹೆಸರು ನೋಂದಾಯಿಸಿಕೊಳ್ಳಬೇಕು. ಆಸಕ್ತರು ಮಾಹಿತಿಗೆ ಯಕ್ಷಗಾನ ಕಲಾಕೇಂದ್ರ, ಹಂಗಾರಕಟ್ಟೆ, ಐರೋಡಿ- 576226, ಉಡುಪಿ. ಹೆಚ್ಚಿನ ಮಾಹಿತಿಗೆ ಮೊಬೈಲ್‌ ಫೋನ್‌ 9880605610 ಸಂಪರ್ಕಿಸಬಹುದು ಎಂದು ತಿಳಿಸಲಾಗಿದೆ.

Shivamogga Live Promotion

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.