ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 27 DECEMBER 2024
ಬೆಂಗಳೂರು : ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ಡಿಸೆಂಬರ್ 26ರ ರಾತ್ರಿ ನಿಧನರಾಗಿದ್ದಾರೆ. ಅವರ ನಿಧನಕ್ಕೆ ಶಿವಮೊಗ್ಗದ ಸಂಸದ, ಸಚಿವ, ಶಾಸಕರು ಸಂತಾಪ (Condolence) ಸೂಚಿಸಿದ್ದಾರೆ.
ಯಾರೆಲ್ಲ ಏನೆಲ್ಲ ಹೇಳಿದ್ದಾರೆ?
ಮಾಜಿ ಪ್ರಧಾನ ಮಂತ್ರಿಗಳಾದ ಶ್ರೀ ಮನಮೋಹನ್ ಸಿಂಗ್ ಅವರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ಬಹಳ ದುಃಖವಾಯಿತು. ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ, ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ಹಾಗೂ ಅವರ ಅಭಿಮಾನಿಗಳಿಗೆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಬಿ.ವೈ.ರಾಘವೇಂದ್ರ, ಸಂಸದ
ದೇಶದ ಆರ್ಥಿಕತೆಗೆ ಮತ್ತು ಪಕ್ಷದ ಹಿರಿಯ ನಾಯಕರಾಗಿ ಅವರು ಸಲ್ಲಿಸಿರುವ ಕೊಡುಗೆ ಅನನ್ಯವಾದದ್ದು. ಅಪರೂಪದ ರಾಜಕಾರಣಿ ಮನಮೋಹನ್ ಸಿಂಗ್ ಅವರ ಜನಪರ ಮತ್ತು ಸಮಾಜಮುಖಿ ಕೆಲಸಗಳು ನಮಗೆ ಎಂದಿಗೂ ದಾರಿದೀಪ. ಮಧು ಬಂಗಾರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಶಿವಮೊಗ್ಗ ಲೈವ್.ಕಾಂ
ರಾಷ್ಟ್ರ ಕಂಡ ಮಹಾನ್ ಆರ್ಥಿಕ ತಜ್ಞ, ಮಾಜಿ ಪ್ರಧಾನಿ ಶ್ರೀ ಮನಮೋಹನ್ ಸಿಂಗ್ ಅವರ ನಿಧನದ ಸುದ್ದಿ ತಿಳಿದು ಅತೀವ ದುಃಖವಾಯಿತು. ದಶಕಗಳ ಕಾಲ ರಾಷ್ಟ್ರದ ಪ್ರಗತಿಗೆ ಅನೇಕ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ ಅವರನ್ನು ರಾಷ್ಟ್ರ ಸದಾ ಸ್ಮರಿಸುತ್ತದೆ. ಬೇಳೂರು ಗೋಪಾಲಕೃಷ್ಣ, ಸಾಗರ ಶಾಸಕ ಶಿವಮೊಗ್ಗ ಲೈವ್.ಕಾಂ
ಎಂದೂ ಯಾರೊಂದಿಗೂ ವಿರಸ ಕಟ್ಟಿಕೊಳ್ಳದೇ ಒಬ್ಬ ಶಿಸ್ತು ಬದ್ಧ ಆರ್ಥಿಕ ಸಲಹೆಗಾರರಾಗಿ, ಸರಳತೆಯ ರಾಜಕಾರಣಿಯಾಗಿ, ಭಾರತದ ಪ್ರಧಾನಿಗಳಾಗಿ ಅವರ ಹತ್ತು ವರ್ಷಗಳ ಸುದೀರ್ಘ ಸೇವೆ ಮಹತ್ವದ ಮೈಲಿಗಲ್ಲು. ಭಾರತೀಯ ರಿಸರ್ವ್ ಬ್ಯಾಂಕ್’ನ ಗವರ್ನರ್ ಆಗಿ, ದೇಶದ ವಿತ್ತ ಸಚಿವರಾಗಿ ಅವರು ಇಟ್ಟ ಹೆಜ್ಜೆಗಳು ಆರ್ಥಿಕ ಸುಧಾರಣೆಯ ಮಹತ್ವದ ತಿರುವುಗಳು. ಬಿ.ವೈ.ವಿಜಯೇಂದ್ರ, ಶಿಕಾರಿಪುರ ಶಾಸಕ ಶಿವಮೊಗ್ಗ ಲೈವ್.ಕಾಂ
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಹಾಗೂ ಮಾಜಿ ಪ್ರಧಾನಮಂತ್ರಿಗಳಾದ ಡಾ. ಮನಮೋಹನ್ ಸಿಂಗ್ ಅವರು ದೈವಾಧೀನರಾದ ಸುದ್ದಿ ಆಘಾತ ಮೂಡಿಸಿದೆ. ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಆರಗ ಜ್ಞಾನೇಂದ್ರ, ತೀರ್ಥಹಳ್ಳಿ ಶಾಸಕ ಶಿವಮೊಗ್ಗ ಲೈವ್.ಕಾಂ
ಭಾರತದ ಆರ್ಥಿಕ ಸುಧಾರಣೆಗಳು, ಜಾಗತಿಕ ಮಟ್ಟ ಮತ್ತು ಪ್ರಜಾಸತ್ತಾತ್ಮಕ ಮೌಲ್ಯಗಳಿಗೆ ಅವರ ಕೊಡುಗೆಗಳು ಶಾಶ್ವತವಾಗಿ ಸ್ಮರಣೀಯವಾಗಿರುತ್ತವೆ. ಡಾ. ಮನಮೋಹನ್ ಸಿಂಗ್ ಅವರು ಸಾರ್ವಜನಿಕ ಜೀವನದಲ್ಲಿ ಸಮಗ್ರತೆ, ನಮ್ರತೆ ಮತ್ತು ಬುದ್ಧಿವಂತಿಕೆಯ ದಾರಿದೀಪವಾಗಿದ್ದರು, ತಲೆಮಾರುಗಳ ನಾಯಕರು ಮತ್ತು ನಾಗರಿಕರನ್ನು ಸಮಾನವಾಗಿ ಪ್ರೇರೇಪಿಸಿದರು. ಶಾರದಾ ಪೂರ್ಯಾನಾಯ್ಕ್, ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಿವಮೊಗ್ಗ ಲೈವ್.ಕಾಂ
ಕೇಂದ್ರ ಹಣಕಾಸು ಸಚಿವರಾಗಿ, ಆರ್‌ಬಿಐ ಗವರ್ನರ್ ಆಗಿ, ಆರ್ಥಿಕ ಸಲಹೆಗಾರರಾಗಿ ಅನೇಕ ಹುದ್ದೆಗಳಲ್ಲಿ ರಾಷ್ಟ್ರ ಸೇವೆ ಸಲ್ಲಿಸಿದ ಡಾ. ಮನಮೋಹನ್ ಸಿಂಗ್ ಅವರ ಅಗಲಿಕೆಯು ದೇಶಕ್ಕೆ ತುಂಬಲಾರದ ನಷ್ಟವುಂಟು ಮಾಡಿದೆ. ಎಸ್.ಎನ್.ಚನ್ನಬಸಪ್ಪ, ಶಿವಮೊಗ್ಗ ಶಾಸಕ ಶಿವಮೊಗ್ಗ ಲೈವ್.ಕಾಂ
ಇದನ್ನೂ ಓದಿ » ಇವತ್ತು ಶಾಲೆ, ಕಾಲೇಜಿಗೆ ರಜೆ, ಏಳು ದಿನ ಶೋಕಾಚರಣೆ
condolence
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422