ಶಿವಮೊಗ್ಗ ಲೈವ್.ಕಾಂ | SHIMOGA NEWS | 23 ಮೇ 2020
ಈಗಾಗಲೇ ಜಿಲ್ಲೆಯಲ್ಲಿ ಐದು ಕಂಟೈನ್ಮೆಂಟ್ ವಲಯಗಳನ್ನು ಘೋಷಿಸಲಾಗಿದೆ. ಈ ಪ್ರದೇಶದಲ್ಲಿ ಯಾರೂ ಮನೆಯಿಂದ ಹೊರ ಬಾರದಂತೆ ಸೂಕ್ತ ಕಟ್ಟೆಚ್ಚರ ವಹಿಸಲಾಗಿದೆ.
ಏನಿದು ಕಂಟೈನ್ಮೆಂಟ್ ಜೋನ್?
ಕರೋನ ಸೋಂಕು ಮತ್ತಷ್ಟು ಕಡೆಗೆ ಹರಡದಂತೆ ತಡೆಗಟ್ಟಲು ಸೋಂಕಿತ ವ್ಯಕ್ತಿ ಇರುವ ಮನೆ, ಕಟ್ಟಡ ಅಥವಾ ಪ್ರದೇಶವನ್ನು ಕಂಟೈನ್ಮೆಂಟ್ ಜೋನ್ ಎಂದು ಘೋಷಿಸಲಾಗುತ್ತದೆ.

ಕರೋನಾ ಪಾಸಿಟಿವ್ ಪ್ರಕರಣಗಳು ಕಂಡು ಬಂದ ತಕ್ಷಣ ಕಂಟೈನ್ಮೆಂಟ್ ಪ್ರದೇಶ ಗುರುತಿಸಿ ಬಂದೋಬಸ್ತ್ ಏರ್ಪಡಿಸಲಾಗುತ್ತದೆ. ಕಂಟೈನ್ಮೆಂಟ್ ಪ್ರದೇಶದಲ್ಲಿ ಯಾವುದೇ ಗೊಂದಲ ಉಂಟಾಗದಂತೆ ನೋಡಿಕೊಳ್ಳಬೇಕು.
ಈ ವಲಯದಲ್ಲಿ ಇಬ್ಬರು ಆಶಾ ಕಾರ್ಯಕರ್ತೆಯರು, ಇಬ್ಬರು ಪೊಲೀಸ್ ಸಿಬ್ಬಂದಿ ಬಿಟ್ಟರೆ ಬೇರೆ ಯಾವುದೇ ಸರ್ಕಾರಿ ಅಧಿಕಾರಿಗಳು ಅಡ್ಡಾಡುವಂತಿಲ್ಲ ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಸೂಚನೆ ನೀಡಿದ್ದಾರೆ.
ಕಂಟೈನ್ಮೆಂಟ್ ಪ್ರದೇಶದಿಂದ ಯಾರೂ ಮನೆಗಳಿಂದ ಹೊರಗೆ ಬರುವಂತಿಲ್ಲ. ಮೆಡಿಕಲ್ ಎಮರ್ಜೆನ್ಸಿ ಪ್ರಕರಣಗಳನ್ನು ಮಾತ್ರ ಹೊರಗೆ ಬಿಡಲಾಗುತ್ತದೆ.
ಕಂಟೈನ್ಮೆಂಟ್ ಪ್ರದೇಶದಲ್ಲಿ ಪ್ರತಿದಿನ ಆರೋಗ್ಯ ಸಮೀಕ್ಷೆ ನಡೆಸಲಾಗುತ್ತದೆ. ರೋಗ ಲಕ್ಷಣಗಳು ಕಂಡು ಬಂದವರ ಗಂಟಲ ದ್ರವವನ್ನು ಸಂಗ್ರಹಿಸಿ ಕಳುಹಿಸಬೇಕು ಎಂದರು.
ಪ್ರಾಥಮಿಕ ಸಂಪರ್ಕಿತರನ್ನು ಪತ್ತೆಗೆ ಪೊಲೀಸ್ ಟೀಂ
ಪ್ರಾಥಮಿಕ ಸಂಪರ್ಕಿತರನ್ನು ಗುರುತಿಸಲು ಪೊಲೀಸ್ ವರಿಷ್ಟಾಧಿಕಾರಿ ಕಚೇರಿಯಲ್ಲಿ ತಂಡ ರಚಿಸಲಾಗಿದೆ. ಈ ತಂಡಕ್ಕೆ ತಹಶೀಲ್ದಾರ್ ಹಾಗೂ ಆರೋಗ್ಯ ಇಲಾಖೆ ಆಗಿಂದಾಗ್ಗೆ ಸಮರ್ಪಕ ಮಾಹಿತಿ ಒದಗಿಸುತ್ತಾರೆ.

ಪ್ರಾಥಮಿಕ ಸಂಪರ್ಕಿತರನ್ನು ಗುರುತಿಸಿದ ತಕ್ಷಣ ತಾಲೂಕು ಮಟ್ಟದಲ್ಲಿ ಅವರ ಗಂಟಲ ದ್ರವ ಸಂಗ್ರಹಿಸಿ ತಪಾಸಣೆಗೆ ಕಳುಹಿಸಬೇಕು. 14 ದಿನ ಕ್ವಾರೆಂಟೈನ್ ಪೂರ್ಣಗೊಳಿಸಿರುವವರನ್ನು ಹೋಂ ಕ್ವಾರೆಂಟೈನ್ಗೆ ಕಳುಹಿಸಬೇಕು.
ಶಿವಮೊಗ್ಗ ಸಿಟಿಯ ತುಂಗಾನಗರ, ತಾಲೂಕಿನ ಬಾಳೆಕೊಪ್ಪ ಗ್ರಾಮ, ಸೊರಬ ತಾಲೂಕಿನ ಹಳೆ ಸೊರಬ, ತೀರ್ಥಹಳ್ಳಿಯ ಹಳ್ಳಿಬೈಲು, ಶಿಕಾರಿಪುರದ ತರಲಘಟ್ಟ ಗ್ರಾಮಗಳನ್ನು ಕಂಟೈನ್ಮೆಂಟ್ ಜೋನ್ ಎಂದು ಗುರುತಿಸಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200