ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಡಿಸೆಂಬರ್ 2021
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಶಿವಮೊಗ್ಗ ಜಿಲ್ಲೆಯಲ್ಲಿ ಕರೋನ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಇವತ್ತು 32 ಮಂದಿಗೆ ಕೋವಿಡ್ ಸೋಂಕು ತಗುಲಿದೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ.
ಜಿಲ್ಲೆಯಲ್ಲಿ ಇವತ್ತು 32 ಮಂದಿಗೆ ಸೋಂಕು ತಗುಲಿದೆ. ಈ ಪೈಕಿ 29 ಸೋಂಕಿತರು ವಿದ್ಯಾರ್ಥಿಗಳಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಒಟ್ಟು ಸೋಂಕಿತರ ಪೈಕಿ ಶಿವಮೊಗ್ಗ ತಾಲೂಕಿನ 31 ಮಂದಿ, ಸಾಗರ ಒಬ್ಬರಿದ್ದಾರೆ.
ಸಕ್ರಿಯ ಪ್ರಕರಣ ಏರಿಕೆ
ಸೋಂಕಿತರ ಸಂಖ್ಯೆ ಹೆಚ್ಚಳದ ಬೆನ್ನಿಗೆ ಶಿವಮೊಗ್ಗ ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆಯು ಏರಿಕೆಯಾಗಿದೆ. ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 76ಕ್ಕೆ ತಲುಪಿದೆ. ಈ ಪೈಕಿ 8 ಮಂದಿ ಕೋವಿಡ್ ಆಸ್ಪತ್ರೆಯಲ್ಲಿದ್ದಾರೆ. 42 ಮಂದಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. 25 ಮಂದಿ ಹೋಂ ಐಸೊಲೇಷನ್’ನಲ್ಲಿದ್ದಾರೆ. ಒಬ್ಬರು ಡಿಸಿಹೆಚ್’ಸಿಯಲ್ಲಿದ್ದಾರೆ.
ಇನ್ನು, ಇವತ್ತು ಇಬ್ಬರು ಕೋವಿಡ್’ನಿಂದ ಗುಣವಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ | ಶಿವಮೊಗ್ಗದಲ್ಲಿ ಮತ್ತೆ ಕರೋನ ಭೀತಿ, 23 ನರ್ಸಿಂಗ್ ವಿದ್ಯಾರ್ಥಿಗಳಿಗೆ ಪಾಸಿಟಿವ್

LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






