ಶಿವಮೊಗ್ಗ ಜಿಲ್ಲೆಯಲ್ಲಿ ಒಂದೇ ದಿನ 50ಕ್ಕೂ ಹೆಚ್ಚು ಮಂದಿಗೆ ಕರೋನ, ಒಟ್ಟು ಸೋಂಕಿತರ ಸಂಖ್ಯೆ ಎಷ್ಟು?

ಶಿವಮೊಗ್ಗ ಲೈವ್.ಕಾಂ | SHIMOGA NEWS | 9 APRIL 2021 (ಈ ಸುದ್ದಿಯನ್ನು ಇನ್ನು 48 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಶಿವಮೊಗ್ಗ ಜಿಲ್ಲೆಯಲ್ಲಿ ಕರೋನ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಒಂದೇ ದಿನ 50ಕ್ಕೂ ಹೆಚ್ಚು ಮಂದಿಗೆ ಸೋಂಕು ತಗುಲಿದೆ. ಇದು ಸೋಂಕು ವ್ಯಾಪಕವಾಗಿ ಹರಡುವ ಭೀತಿ ಹುಟ್ಟಿಸಿದೆ.

ಗುರುವಾರ ಶಿವಮೊಗ್ಗ ಜಿಲ್ಲೆಯಲ್ಲಿ 2111 ಮಂದಿಯ ಮಾದರಿಯನ್ನು ಪಡೆಯಲಾಗಿದೆ. 2039 ಮಂದಿಯ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಈ ಪೈಕಿ 52 ಮಂದಿಗೆ ಸೋಂಕು ತಗುಲಿರುವುದು ದೃಢವಾಗಿದೆ.

ಇವತ್ತು ಪತ್ತೆಯಾದ ಸೋಂಕಿತರ ಪೈಕಿ ಶಿವಮೊಗ್ಗದ 32, ಭದ್ರಾವತಿಯ 7, ಶಿಕಾರಿಪುರದ 1, ತೀರ್ಥಹಳ್ಳಿ 1, ಸೊರಬದ 1, ಹೊಸನಗರದ 5, ಸಾಗರದ 7 ಮಂದಿ ಇದ್ದಾರೆ.

ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಪೈಕಿ 112 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದಾರೆ. 41 ಮಂದಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.         215 ಮಂದಿ ಮನೆಯಲ್ಲಿ ಐಸೊಲೇಷನ್‍ನಲ್ಲಿದ್ದು ಚಿಕಿತ್ಸೆಯಲ್ಲಿದ್ದಾರೆ. ಜಿಲ್ಲೆಯಲ್ಲಿ ಸದ್ಯ 368 ಮಂದಿ ಸೋಂಕಿತರಿದ್ದಾರೆ.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ

ಮತ್ತೊಂದೆಡೆ ಜಿಲ್ಲೆಯ ವಿವಿಧೆಡೆ ಚಿಕಿತ್ಸೆ ಪಡೆಯುತ್ತಿದ್ದ 18 ಮಂದಿ ಕರೋನದಿಂದ ಗುಣವಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

Corona PPE Kit and swab box

Leave a Comment