ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 21 DECEMBER 2023
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
SHIMOGA : ಪ್ರಸ್ತುತ ಕೇರಳ, ತಮಿಳುನಾಡು ರಾಜ್ಯಗಳಲ್ಲಿ ಕೋವಿಡ್-19ನ ಉಪತಳಿ ಜೆ.ಎನ್.1 ವರದಿಯಾಗಿದೆ. ಈ ಹಿನ್ನೆಲೆ ಕೋವಿಡ್-19 ರಾಜ್ಯ ತಾಂತ್ರಿಕ ಸಲಹಾ ಸಮಿತಿಯ ಶಿಫಾರಸ್ಸಿನಂತೆ ಸಾರ್ವಜನಿಕರು ಮಾರ್ಗ ಸೂಚಿಗಳನ್ನು ಪಾಲಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಸುರಗಿಹಳ್ಳಿ ಸಲಹೆ ನೀಡಿದ್ದಾರೆ.
ಏನೇನೆಲ್ಲ ಮಾರ್ಗಸೂಚಿ ಪಾಲಿಸಬೇಕು?
60 ವರ್ಷ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರಿಕರು ಹಾಗೂ ಇತರೆ ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವವರು, ಗರ್ಭಿಣಿಯರು, ಹಾಲುಣಿಸುತ್ತಿರುವ ತಾಯಂದಿರು ಹೊರಾಂಗಣ ಪ್ರದೇಶಗಳಿಗೆ ತೆರಳಿದಾಗ ಮಾಸ್ಕ್ ಧರಿಸಬೇಕು. ಅಗತ್ಯ ಗಾಳಿ ಬೆಳಕು ವ್ಯವಸ್ಥೆ ಇಲ್ಲದ ಹಾಗೂ ಹೆಚ್ಚು ಜನಸಂದಣಿ ಇರುವ ಪ್ರದೇಶಗಳಿಗೆ ತೆರಳದಿರುವುದು ಸೂಕ್ತ.
ಜ್ವರ, ಕೆಮ್ಮು, ನೆಗಡಿ ಇತ್ಯಾದಿ ಉಸಿರಾಟದ ಸೋಂಕಿನ ಲಕ್ಷಣ ಹೊಂದಿದವರು ತಕ್ಷಣವೇ ವೈದ್ಯಕೀಯ ಸಲಹೆ ಪಡೆಯಬೇಕು. ಮೂಗು ಹಾಗೂ ಬಾಯಿ ಮುಚ್ಚುವಂತೆ ಮಾಸ್ಕ್ ಧರಿಸಬೇಕು. ಅಗತ್ಯ ಗಾಳಿ ಬೆಳಕು ವ್ಯವಸ್ಥೆ ಇಲ್ಲದ ಹಾಗೂ ಹೆಚ್ಚು ಜನಸಂದಣಿ ಇರುವ ಪ್ರದೇಶಗಳಿಗೆ ತೆರಳದಿರುವುದು ಸೂಕ್ತ.
ಆಗ್ಗಾಗೆ ಕೈಗಳನ್ನು ಸೋಪು ಹಾಗೂ ನೀರಿನಿಂದ ತೊಳೆದುಕೊಳ್ಳುವುದು ಇತ್ಯಾದಿಗಳ ಪಾಲನೆ ಅಗತ್ಯವಾಗಿದೆ.
ಆರೋಗ್ಯ ಸಮಸ್ಯೆ ಕಂಡುಬಂದಲ್ಲಿ ಮನೆಯಲ್ಲಿರುವುದು ಸೂಕ್ತ. ಹಿರಿಯ ನಾಗರಿಕರು, ದುರ್ಬಲರು, ಆರೋಗ್ಯ ಸಮಸ್ಯೆಗಳನ್ನು ಹೊಂದಿದವರನ್ನು ಅವಶ್ಯವಿದ್ದರೆ ಮಾತ್ರ ಭೇಟಿ ನೀಡುವುದು. ಜನಸಂದಣಿ ಪ್ರದೇಶಗಳಿಗೆ ಭೇಟಿ ನೀಡಬೇಕಾದ ಸಂದರ್ಭದಲ್ಲಿ ಮಾಸ್ಕ್ ಧರಿಸುವುದು ಸೂಕ್ತ.
ಅಂತರಾಷ್ಟ್ರೀಯ ಪ್ರಯಾಣ ಸಂದರ್ಭದಲ್ಲಿ ಎಚ್ಚರಿಕೆಯಿಂದಿದ್ದು, ನಿಲ್ದಾಣದಲ್ಲಿ ಹಾಗೂ ವಿಮಾನದ ಒಳಗೆ ಮಾಸ್ಕ್ ಧರಿಸುವುದು. ಹೆಚ್ಚಿನ ಗಾಳಿ ಬೆಳಕು ವ್ಯವಸ್ಥೆ ಇಲ್ಲದ ಹಾಗೂ ಹೆಚ್ಚು ಜನಸಂದಣಿ ಇರುವ ಪ್ರದೇಶಗಳಿಗೆ ತೆರಳದಿರುವುದು ಸೇರಿದಂತೆ ಅಗತ್ಯ ಮುಂಜಾಗ್ರತ ಕ್ರಮಗಳನ್ನು ಪಾಲಿಸುವುದು ಸೂಕ್ತವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಸಹಾಯಕರನ್ನು ಹತ್ತಿರದ ಸರ್ಕಾರಿ ಆಸ್ಪತ್ರೆಯ ವೈದ್ಯರನ್ನು ಸಂಪರ್ಕಿಸಿ ಅಥವಾ 24/7 ಉಚಿತ ಸಹಾಯವಾಣಿ 104 ಕ್ಕೆ ಕರೆ ಮಾಡಬಹುದಾಗಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಮತ ಯಂತ್ರ, ವಿವಿ ಪ್ಯಾಟ್ ಪ್ರಾತ್ಯಕ್ಷಿಕೆ