BREAKING NEWS | ಕರೋನ ಮೂರನೆ ಅಲೆ, ಶಿವಮೊಗ್ಗ ಡಿಸಿಯಿಂದ ಐದು ಗೈಡ್ ಲೈನ್ ಬಿಡುಗಡೆ, ಏನೆಲ್ಲ ಸೂಚನೆಗಳಿವೆ?

ಶಿವಮೊಗ್ಗ ಲೈವ್.ಕಾಂ | SHIMOGA NEWS | 4 ಆಗಸ್ಟ್ 2021

ಕೋವಿಡ್ ಮೂರನೆ ಅಲೆ ನಿಯಂತ್ರಣ ಸಲುವಾಗಿ ಶಿವಮೊಗ್ಗ ಜಿಲ್ಲಾಧಿಕಾರಿ ಅವರು ನೂತನ ಗೈಡ್ ಲೈನ್ ಬಿಡುಗಡೆ ಮಾಡಿದ್ದಾರೆ. ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವುದು, ನೆರಯ ಜಿಲ್ಲೆಗಳಲ್ಲಿ ಕರೋನ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಈ ಗೈಡ್ ಲೈನ್ ಬಿಡುಗಡೆ ಮಾಡಲಾಗಿದೆ.

ಗೈಡ್ ಲೈನ್ನಲ್ಲಿ ಏನೇನಿದೆ?

ಗೈಡ್ ಲೈನ್ 1 – ಮಾಸ್ಕ್, ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆಯನ್ನು ಕಡ್ಡಾಯಗೊಳಿಸಲಾಗಿದೆ.

ಗೈಡ್ ಲೈನ್ 2 – ಸರ್ಕಾರಿ ಬಸ್ ಅಥವಾ ಖಾಸಗಿ ವಾಹನಗಳ ಮೂಲಕ ಜಿಲ್ಲೆಗೆ ಪ್ರವೇಶ ಪಡೆಯುವವರಿಗೆ ಕೋವಿಡ್ ಪರೀಕ್ಷಾ ವರದಿ ಕಡ್ಡಾಯ. ಎರಡನೆ ಡೋಸ್ ಪಡೆದಿದ್ದರೂ ಜಿಲ್ಲೆಗೆ ಪ್ರವೇಶ ಪಡೆಯುವ 72 ಗಂಟೆ ಮುನ್ನ RTPCR ಪರೀಕ್ಷೆ ಮಾಡಿಸಿ ನೆಗೆಟಿವ್ ರಿಪೋರ್ಟ್ ಬಂದಿರಬೇಕು.

ಗೈಡ್ ಲೈನ್ 3 –  ಹೊಟೇಲ್, ಲಾಡ್ಜ್, ಹೋಂ ಸ್ಟೇ, ಇಲಾಖೆಗಳ ವಸತಿ ಗೃಹದಲ್ಲಿ ಉಳಿಯುವ ಪ್ರವಾಸಿಗರಿಗೆ RTPCR ನೆಗೆಟಿವ್ ರಿಪೋರ್ಟ್ ಕಡ್ಡಾಯ. ತಂಗಲು ಬರುವ 72 ಗಂಟೆ ಮೊದಲು ಪರೀಕ್ಷೆ ಮಾಡಿಸಿರಬೇಕು.

ಗೈಡ್ ಲೈನ್ 4 – ಜೋಗ ಜಲಪಾತ, ಆಗುಂಬೆ, ಬಿ.ಆರ್.ಪಿ, ಹುಲಿ ಮತ್ತು ಸಿಂಹಧಾಮ, ಸಕ್ರೆಬೈಲು ಆನೆ ಬಿಡಾರ ಸೇರಿದಂತೆ ಶಿವಮೊಗ್ಗ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಬರುವ ಪ್ರವಾಸಿಗರಿಗೂ RTPCR ನೆಗೆಟಿವ್ ರಿಪೋರ್ಟ್ ಕಡ್ಡಾಯ.

ಗೈಡ್ ಲೈನ್ 5 – ಮದುವೆ ಸಮಾರಂಭಗಳು ಕೇವಲ 50 ಜನರಿಗೆ ಮಾತ್ರ ಸೀಮಿತ.

ಈ ಗೈಡ್ ಲೈನ್ ಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಇಲ್ಲವಾದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿ ಅವರು ಆದೇಶದಲ್ಲಿ ತಿಳಿಸಿದ್ದಾರೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Shivamogga-Live-Number-1-Promotion
Shivamogga-Live-Number-1-Promotion

Leave a Comment