ಶಿವಮೊಗ್ಗ ಲೈವ್.ಕಾಂ | SHIMOGA NEWS | 16 JUNE 2021
ಶಿವಮೊಗ್ಗ ಜಿಲ್ಲೆಯಾದ್ಯಂತ ಕರೋನ ಪ್ರಕರಣಗಳ ಸಂಖ್ಯೆ ಭಾರಿ ಪ್ರಮಾಣದಲ್ಲಿ ತಗ್ಗಿದೆ. ಇವತ್ತು ಕೇವಲ 130 ಮಂದಿಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದೆ.
ಶಿವಮೊಗ್ಗ ತಾಲೂಕಿನಲ್ಲಿ 62 ಮಂದಿಗೆ ಪಾಸಿಟಿವ್ ಬಂದಿದೆ. ಭದ್ರಾವತಿಯಲ್ಲಿ 29, ಶಿಕಾರಿಪುರದಲ್ಲಿ 15, ತೀರ್ಥಹಳ್ಳಿಯಲ್ಲಿ 5, ಸಾಗರ 9, ಹೊಸನಗರ 4, ಸೊರಬ 5, ಇತರೆ ಜಿಲ್ಲೆಯಿಂದ ಬಂದ ಒಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ.
ಜಿಲ್ಲೆಯಲ್ಲಿ ಇವತ್ತು 4484 ಮಂದಿಗೆ ಕರೋನ ಟೆಸ್ಟ್ ಮಾಡಲಾಗಿತ್ತು. ಈ ಪೈಕಿ ಕೇವಲ 130 ಮಂದಿಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದೆ. 4003 ಸ್ಯಾಂಪಲ್‍ಗಳು ನೆಗೆಟಿವ್ ಬಂದಿದೆ.
ಇನ್ನು, 918 ಸೋಂಕಿತರು ಗುಣವಾಗಿದ್ದು, ಆಸ್ಪತ್ರೆ, ಕೋವಿಡ್ ಕೇರ್ ಸೆಂಟರ್‍ಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಹಾಗಾಗಿ ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 4053ಕ್ಕೆ ಇಳಿಕೆಯಾಗಿದೆ.
ಮತ್ತೊಂದೆಡೆ ಜಿಲ್ಲೆಯಲ್ಲಿ ಇವತ್ತು ನಾಲ್ವರು ಕೋವಿಡ್‍ಗೆ ಬಲಿಯಾಗಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಈವರೆಗೂ ಕರೋನಾಗೆ ಮೃತಪಟ್ಟವರ ಸಂಖ್ಯೆ 927ಕ್ಕೆ ಏರಿಕೆಯಾಗಿದೆ.