ಶಿವಮೊಗ್ಗದಲ್ಲಿ ನಿನ್ನೆಗಿಂತಲೂ ಹೆಚ್ಚು ಜನರಿಗೆ ಕರೋನ ಸೋಂಕು, ಸಕ್ರಿಯ ಪ್ರಕರಣಗಳು ಏರಿಕೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗದ ಲೈವ್.ಕಾಂ | SHIMOGA NEWS | 6 ಜನವರಿ 2022

ಶಿವಮೊಗ್ಗ ಜಿಲ್ಲೆಯಲ್ಲಿ ಕರೋನ ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಹೆಚ್ಚಳವಾಗಿದೆ. ಇವತ್ತು 20ಕ್ಕಿಂತಲೂ ಹೆಚ್ಚು ಮಂದಿಗೆ ಸೋಂಕು ತಗುಲಿದೆ ಎಂದ ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ. ಇದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದೆ.

AVvXsEichXaELYeDOhFU0n9XstiInpkhsI4y9y5uB VImqATyx1h3CLRA4zsRrFRxoiVo U462f0MYCBVD

ಜಿಲ್ಲೆಯಲ್ಲಿ ಇವತ್ತು 23 ಮಂದಿಗೆ ಕರೋನ ಸೋಂಕು ತಗುಲಿದೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ. ಸೋಂಕಿತರ ಪೈಕಿ 15 ಮಂದಿ ಶಿವಮೊಗ್ಗ ತಾಲೂಕಿನವರಾಗಿದ್ದಾರೆ. ನಾಲ್ಕು ಮಂದಿ ತೀರ್ಥಹಳ್ಳಿ, ಇಬ್ಬರು ಸಾಗರ, ಇಬ್ಬರು ಸೊರಬದವರಾಗಿದ್ದಾರೆ.

ಶಿಕ್ಷಣ ಸಂಸ್ಥೆಗಳಲ್ಲಿ ಹೆಚ್ಚಿದ ಕೇಸ್

ಶೈಕ್ಷಣಿಕ ಸಂಸ್ಥೆಗಳಲ್ಲಿ ಕರೋನಾದ ರಾಂಡಮ್ ಪರೀಕ್ಷೆ ನಡೆಸಲಾಗುತ್ತಿದೆ. ಇವತ್ತು ಪರೀಕ್ಷೆ ನಡೆಸಿದಾಗ ಶಿಕ್ಷಣ ಸಂಸ್ಥೆಗಳಲ್ಲಿ ಹನ್ನೊಂದು ಮಂದಿಗೆ ಕೋವಿಡ್ ಸೋಂಕು ತಗುಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಸಕ್ರಿಯೆ ಪ್ರಕರಣದಲ್ಲಿ ಏರಿಕೆ

23 ಮಂದಿಗೆ ಇವತ್ತು ಕರೋನ ಸೋಂಕು ತಗುಲಿರುವುದರಿಂದ ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಕ್ಯೆ ಹೆಚ್ಚಳವಾಗಿದೆ. ಜಿಲ್ಲೆಯಲ್ಲಿ ಸದ್ಯ 67 ಸೋಂಕಿತರಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ. ಈ ಪೈಕಿ 9 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 6 ಸೋಂಕಿತರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. 52 ಮಂದಿ ಹೋಮ್ ಐಸೊಲೇಷನ್’ನಲ್ಲಿದ್ದಾರೆ.

ಇನ್ನು, ಜಿಲ್ಲೆಯಲ್ಲಿ ಕರೋನ ಟೆಸ್ಟಿಂಗ್ ಸಂಖ್ಯೆ ಏರಿಕೆಯಾಗಿದೆ. ಇವತ್ತು 3008 ಮಂದಿಯ ಗಂಟಲು ದ್ರವ ಮಾದರಿಯನ್ನು ಸಂಗ್ರಹ ಮಾಡಲಾಗಿದೆ.

ಇದನ್ನೂ ಓದಿ | ಶಿವಮೊಗ್ಗದಲ್ಲಿ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಕುರಿತು ಮಹತ್ವದ ಸಭೆ, ಜಿಲ್ಲಾಧಿಕಾರಿಯಿಂದ 10 ಪಾಯಿಂಟ್ ಸೂಚನೆ

ABOUT ME DECEMBER REPORT

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment