ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 9 ಜನವರಿ 2022
ಶಿವಮೊಗ್ಗದಲ್ಲಿ ಕರೋನ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಹೆಚ್ಚಳವಾಗಿದೆ. ಇವತ್ತು ಕೂಡ ನೂರಕ್ಕಿಂತಲೂ ಹೆಚ್ಚು ಮಂದಿಗೆ ಸೋಂಕು ತಗುಲಿದೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ.
ಜಿಲ್ಲೆಯಲ್ಲಿ ಇವತ್ತು 148 ಮಂದಿಗೆ ಸೋಂಕು ತಗುಲಿದೆ. ಈ ಪೈಕಿ ಶಿವಮೊಗ್ಗ ತಾಲೂಕಿನಲ್ಲಿ 50 ಮಂದಿಗೆ ಪಾಸಿಟಿವ್ ಬಂದಿದೆ. ಭದ್ರಾವತಿಯಲ್ಲಿ 47, ತೀರ್ಥಹಳ್ಳಿಯಲ್ಲಿ 7, ಶಿಕಾರಿಪುರದಲ್ಲಿ 19, ಸಾಗರದಲ್ಲಿ 19, ಹೊಸನಗರದಲ್ಲಿ 2, ಸೊರಬ 2, ಇತರೆ ಜಿಲ್ಲೆಯಿಂದ ಬಂದಿರುವ ಇಬ್ಬರಿಗೆ ಸೋಂಕು ತಗುಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಮುನ್ನೂರಕ್ಕಿಂತಲೂ ಹೆಚ್ಚು ಸಕ್ರಿಯ ಕೇಸ್
ಸೋಂಕಿತರ ಸಂಖ್ಯೆ ಹೆಚ್ಚಳದಿಂದಾಗಿ ಶಿವಮೊಗ್ಗದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆಯು ಹೆಚ್ಚಳವಾಗಿದೆ. ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 361ಕ್ಕೆ ಏರಿಕೆಯಾಗಿದೆ.
ಈ ಪೈಕಿ 51 ಮಂದಿ ಕೋವಿಡ್ ಆಸ್ಪತ್ರೆಯಲ್ಲಿದ್ದಾರೆ. 14 ಮಂದಿ ಡಿಸಿಹಚ್’ಸಿ, 29 ಮಂದಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. 19 ಮಂದಿ ಟ್ರಯೇಜ್’ನಲ್ಲಿದ್ದಾರೆ. ಉಳಿದಂತೆ 248 ಮಂದಿ ಹೋಮ್ ಐಸೊಲೇಷನ್’ನಲ್ಲಿದ್ದಾರೆ.
ಮತ್ತೊಂದೆಡೆ ಶಿವಮೊಗ್ಗದಲ್ಲಿ ಇವತ್ತು 12 ಮಂದಿ ಕರೋನದಿಂದ ಗುಣವಾಗಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ | ಮಾಸ್ಕ್ ದಂಡ ಹಾಕಲು ಬಂದ ಶಿವಮೊಗ್ಗ ಪಾಲಿಕೆ ಅಧಿಕಾರಿಗಳಿಗೆ ನಡುರಸ್ತೆಯಲ್ಲಿ ಜನರಿಂದ ಕ್ಲಾಸ್
ಇದನ್ನೂ ಓದಿ | ಶಿವಮೊಗ್ಗ ಜಿಲ್ಲೆಯಲ್ಲಿ ಓಂ ಶಕ್ತಿ ಪ್ರವಾಸದಿಂದ ಹಿಂತಿರುಗಿದ 50ಕ್ಕೂ ಹೆಚ್ಚು ಮಂದಿಗೆ ಕರೋನ ಪಾಸಿಟಿವ್
shimoga, shi
LATEST NEWS
- ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆ, ಸ್ಥಳಕ್ಕೆ ತುಂಗಾ ನಗರ ಪೊಲೀಸರು ದೌಡು

- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

- ಶಿವಮೊಗ್ಗದ ಸವಾರರೆ ಹುಷಾರ್, ಬೈಕ್ನಿಂದ ಬಿದ್ದರು, ಆಟೋ ಜಖಂ, ಕಾರ್ ಕೆಳಗೆ ಡ್ಯಾಮೇಜ್, ಏನಿದು?

- ಭದ್ರಾವತಿ ಹೊಸ ಸಿದ್ಧಾಪುರದಲ್ಲಿ ಮನೆಗೆ ನುಗ್ಗಿದ ಕಳ್ಳರು, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಕಳವು

- ಇವತ್ತಿನ ₹98,140ಕ್ಕೆ ತಲುಪಿದೆ ಅಡಿಕೆ | 12 ಫೆಬ್ರವರಿ 2026 | ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು






