ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 15 MAY 2021
ಶಿವಮೊಗ್ಗ ಜಿಲ್ಲೆಯಲ್ಲಿ ಕರೋನ ಸೋಂಕಿತರ ಸಂಖ್ಯೆ ಸಾವಿರಕ್ಕಿಂತಲೂ ಕಡಿಮೆಯಾಗಿದೆ. ಆದರೆ ಸಾವಿನ ಸಂಖ್ಯೆ ಮಾತ್ರ ಹೆಚ್ಚುತ್ತಲೆ ಇದೆ. ಸೋಂಕಿನಿಂದ ಶುಕ್ರವಾರ ಸಂಭವಿಸಿದ್ದ ಸಾವಿಗಿಂತಲೂ ಮೂರು ಪಟ್ಟು ಹೆಚ್ಚು ಮಂದಿ ಇವತ್ತು ಮೃತರಾಗಿದ್ದಾರೆ.
ಶುಕ್ರವಾರ ಕೋವಿಡ್‍ನಿಂದ ಐವರು ಮೃತರಾಗಿದ್ದರು. ಇವತ್ತು ಕರೋನಾಗೆ ಹದಿನೈದು ಮಂದಿ ಬಲಿಯಾಗಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಈವರೆಗೂ ಕೋವಿಡ್‍ಗೆ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 572ಕ್ಕೆ ಹೆಚ್ಚಳವಾಗಿದೆ.
ಇದನ್ನೂ ಓದಿ | ಇಡೀ ದಿನ ಆಯನೂರು ಸಂಪೂರ್ಣ ಬಂದ್ಗೆ ಟಾಸ್ಕ್ ಫೋರ್ಸ್ ನಿರ್ಣಯ
ಇನ್ನು, ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು 803 ಮಂದಿಗೆ ಕರೋನ ಪಾಸಿಟಿವ್ ಬಂದಿದೆ. ಈ ಪೈಕಿ 178 ಸೋಂಕಿತರು ಶಿವಮೊಗ್ಗ ತಾಲೂಕಿನವರಾಗಿದ್ದಾರೆ. ಭದ್ರಾವತಿಯಲ್ಲಿ 68, ಶಿಕಾರಿಪುರದಲ್ಲಿ 155, ತೀರ್ಥಹಳ್ಳಿಯ 113, ಸೊರಬದ 74, ಸಾಗರದಲ್ಲಿ 152, ಹೊಸನಗರದಲ್ಲಿ 52, ಇತರೆ ಜಿಲ್ಲೆಯಿಂದ ಬಂದಿರುವ 11 ಮಂದಿಯಲ್ಲಿ ಕರೋನ ಸೋಂಕು ಕಾಣಿಸಿಕೊಂಡಿದೆ.
ಇದನ್ನೂ ಓದಿ | ಶಿವಮೊಗ್ಗ ಜಿಲ್ಲೆಯ ಹಳ್ಳಿಗಳೇ ಎರಡನೇ ಅಲೆ ಕರೋನಾದ ಟಾರ್ಗೆಟ್, ಜಾಗೃತರಾಗದಿದ್ದರೆ ಇನ್ನಷ್ಟು ಅಪಾಯ ಫಿಕ್ಸ್
ಜಿಲ್ಲೆಯಲ್ಲಿ ಆಕ್ಟಿವ್ ಪ್ರಕರಣಗಳ ಸಂಖ್ಯೆ 7318ಕ್ಕೆ ಏರಿಕೆಯಾಗಿದೆ. ಇನ್ನು, ಇವತ್ತು 762 ಮಂದಿ ಕರೋನದಿಂದ ಗುಣವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






