ಶಿವಮೊಗ್ಗ ಲೈವ್.ಕಾಂ | SHIMOGA NEWS | 25 MAY 2021
ಶಿವಮೊಗ್ಗ ಜಿಲ್ಲೆಯಲ್ಲಿ ಕರೋನ ಪಾಸಿಟಿವ್ ಸಂಖ್ಯೆಯಲ್ಲಿ ಭಾರಿ ಇಳಿಕೆಯಾಗಿದೆ. ಸೋಂಕಿನಿಂದ ಗುಣವಾದವರ ಸಂಖ್ಯೆಯಲ್ಲಿ ಏರಿಕೆಯಾಗಿದೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಜಿಲ್ಲೆಯಲ್ಲಿ ಇವತ್ತು 2418 ಮಂದಿಗೆ ಕರೋನ ಪರೀಕ್ಷೆ ನಡೆಸಲಾಗಿದೆ. ಈ ಪೈಕಿ 640 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದರಿಂದ ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 6769 ಇದೆ.
ಶಿವಮೊಗ್ಗ ತಾಲೂಕಿನಲ್ಲಿ 264 ಮಂದಿಗೆ ಪಾಸಿಟಿವ್ ಬಂದಿದೆ. ಭದ್ರಾವತಿಯಲ್ಲಿ 135, ತೀರ್ಥಹಳ್ಳಿಯಲ್ಲಿ 35, ಶಿಕಾರಿಪುರದಲ್ಲಿ 36, ಸಾಗರದಲ್ಲಿ 59, ಹೊಸನಗರದಲ್ಲಿ 28, ಸೊರಬದಲ್ಲಿ 49, ಇತರೆ ಜಿಲ್ಲೆಯಿಂದ ಬಂದಿರುವ 34 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.
ಇನ್ನು, ಜಿಲ್ಲೆಯಲ್ಲಿ ಕರೋನದಿಂದ ಗುಣವಾಗುವವರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಇವತ್ತು 895 ಮಂದಿ ಸೋಂಕಿನಿಂದ ಗುಣವಾಗಿದ್ದಾರೆ.
ಮತ್ತೊಂದೆಡೆ ಸಾವಿನ ಸಂಖ್ಯೆಯಲ್ಲಿ ಹೆಚ್ಚುತ್ತಲೆ ಇದೆ. ಇವತ್ತು 19 ಮಂದಿ ಕರೋನ ಸೋಂಕಿನಿಂದ ಮೃತಪಟ್ಟಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಕೋವಿಡ್‍ಗೆ ಬಲಿಯಾದವರ ಸಂಖ್ಯೆ 734ಕ್ಕೆ ಏರಿಕೆಯಾಗಿದೆ.
ಜನ ಜಂಗುಳಿ ಇಲ್ಲದೆ, ಸುರಕ್ಷಿತವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ | ಫೋನ್ ಮಾಡಿ ರಿಜಿಸ್ಟರ್ ಮಾಡಿಕೊಳ್ಳಿ
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]