ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 4 MAY 2021
ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಸಾವಿನ ಸಂಖ್ಯೆಯಲ್ಲಿ ಭಾರಿ ಏರಿಕೆಯಾಗಿದೆ. ಕರೋನದಿಂದ ಇಷ್ಟೊಂದು ಮಂದಿ ಮೃತಪಟ್ಟಿರುವುದು ಇದೆ ಮೊದಲು.
ಜಿಲ್ಲೆಯಲ್ಲಿ ಇವತ್ತು 15 ಸೋಂಕಿತರು ಸಾವನ್ನಪ್ಪಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಕೋವಿಡ್‍ಗೆ ಬಲಿಯಾದವರ ಸಂಖ್ಯೆ 420ಕ್ಕೆ ಏರಿಕೆಯಾಗಿದೆ. ಕರೋನ ಸೋಂಕಿನ ಕುರುತು ಉಪೇಕ್ಷೆ ಮಾಡುವವರಿಗೆ ಇದು ಎಚ್ಚರಿಕೆಯ ಕರೆಗಂಟೆಯಾಗಿದೆ.
ಸೋಂಕಿತರು, ಗುಣವಾದವರು
ಜಿಲ್ಲೆಯಲ್ಲಿ ಸೋಂಕಿತರಗಿಂತಲೂ ಗುಣವಾದವರ ಸಂಖ್ಯೆ ಹೆಚ್ಚಳವಾಗಿದೆ. ಇವತ್ತು 642 ಮಂದಿ ಸೋಂಕಿನಿಂದ ಗುಣವಾಗಿದ್ದಾರೆ. ಇನ್ನು, 612 ಮಂದಿಗೆ ಕರೋನ ಪಾಸಿಟಿವ್ ಬಂದಿದೆ.
ಶಿವಮೊಗ್ಗ ತಾಲೂಕಿನಲ್ಲಿ 230 ಮಂದಿಗೆ ಪಾಸಿಟಿವ್ ಬಂದಿದೆ. ಭದ್ರಾವತಿಯಲ್ಲಿ 62, ಶಿಕಾರಿಪುರದಲ್ಲಿ 50, ತೀರ್ಥಹಳ್ಳಿಯಲ್ಲಿ 39, ಸೊರಬದಲ್ಲಿ 48, ಸಾಗರದಲ್ಲಿ 124, ಹೊಸನಗರದಲ್ಲಿ 16, ಇತರೆ ಜಿಲ್ಲೆಯಿಂದ ಬಂದಿರುವ 43 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.
ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದು, ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ ಮೂರೂವರೆ ಸಾವಿರದ ಸನಿಹಕ್ಕೆ ತಲುಪಿದೆ. ಒಟ್ಟು ಸೋಂಕಿತರ ಸಂಖ್ಯೆ ಜಿಲ್ಲೆಯಲ್ಲಿ 3489ಗೆ ಏರಿಕೆಯಾಗಿದೆ.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






