ಶಿವಮೊಗ್ಗದಲ್ಲಿ ಒಂದೇ ದಿನ 300ಕ್ಕಿಂತಲೂ ಹೆಚ್ಚು ಜನರಿಗೆ ಕರೋನ, ಶಿವಮೊಗ್ಗ, ಭದ್ರಾವತಿ, ಸಾಗರದಲ್ಲಿ ಅಧಿಕ ಕೇಸ್

ಶಿವಮೊಗ್ಗದ ಲೈವ್.ಕಾಂ | SHIMOGA NEWS | 13 ಜನವರಿ 2022

ಕರೋನ ಸೋಂಕಿತರ ಸಂಖ್ಯೆಯಲ್ಲಿ ದೊಡ್ಡ ಪ್ರಮಾಣದ ಏರಿಕೆಯಾಗಿದೆ. ಇವತ್ತು ಒಂದೇ ದಿನ ಮುನ್ನೂರಕ್ಕಿಂತಲೂ ಅಧಿಕ ಜನರಿಗೆ ಸೋಂಕು ತಗುಲಿದೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ.

AVvXsEichXaELYeDOhFU0n9XstiInpkhsI4y9y5uB VImqATyx1h3CLRA4zsRrFRxoiVo U462f0MYCBVD

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು 319 ಮಂದಿಗೆ ಪಾಸಿಟಿವ್ ಬಂದಿದೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ. ಈ ಪೈಕಿ ಶಿವಮೊಗ್ಗ ತಾಲೂಕಿನಲ್ಲಿ ಅತ್ಯಧಿಕ ಪ್ರಕರಣಗಳು ದಾಖಲಾಗಿವೆ. ಶಿವಮೊಗ್ಗದಲ್ಲಿ 171 ಮಂದಿಗೆ ಪಾಸಿಟಿವ್ ಬಂದಿವೆ.

ಭದ್ರಾವತಿಯಲ್ಲಿ 59, ತೀರ್ಥಹಳ್ಳಿಯಲ್ಲಿ 19, ಶಿಕಾರಿಪುರದಲ್ಲಿ 13, ಸಾಗರದಲ್ಲಿ 37, ಹೊಸನಗರದಲ್ಲಿ 8, ಸೊರಬದಲ್ಲಿ 8, ಇತರೆ ಜಿಲ್ಲೆಯಿಂದ ಬಂದಿರುವ 4 ಮಂದಿಗೆ ಕರೋನ ಪಾಸಿಟಿವ್ ಬಂದಿದೆ.

ಸಾವಿರದ ಸನಿಹಕ್ಕೆ ಸಕ್ರಿಯ ಪ್ರಕರಣ

ಇವತ್ತು ದೊಡ್ಡ ಪ್ರಮಾಣದಲ್ಲಿ ಸೋಂಕಿತರು ಪತ್ತೆಯಾಗಿರುವುದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ ಒಂದು ಸಾವಿರದ ಸನಿಹಕ್ಕೆ ತಲುಪಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 979ಕ್ಕೆ ಏರಿಕೆಯಾಗಿದೆ.

144 ಮಂದಿ ಕೋವಿಡ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. 74 ಮಂದಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 87 ಮಂದಿ ಡಿಸಿಹೆಚ್’ಸಿ, 35 ಮಂದಿ ಟ್ರಯೇಜ್’ನಲ್ಲಿದ್ದಾರೆ. 639 ಮಂದಿ ಹೋಮ್ ಐಸೊಲೇಷನ್’ಗೆ ಒಳಗಾಗಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಮತ್ತೊಂದೆಡೆ, ಇವತ್ತು ದೊಡ್ಡ ಪ್ರಮಾಣದಲ್ಲಿ ಸೋಂಕಿತರು ಗುಣವಾಗಿದ್ದಾರೆ. 87 ಮಂದಿ ಕರೋನದಿಂದ ಗುಣವಾಗಿದ್ದಾರೆ ಎಂದು ಜಿಲ್ಲಾಡಳಿತದ ವರದಿಯಲ್ಲಿ ತಿಳಿಸಲಾಗಿದೆ.

ALSO READ | All About Shivamogga Live

ABOUT ME DECEMBER REPORTshimoga

ಚಿತ್ರದ ವಿವರಣೆ
Shaki Toyota, Shivamogga
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : January 13, 2022 at 7:26 PM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಜನವರಿ 13, 2022

Leave a Comment