ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 17 ಜನವರಿ 2022
ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ದೊಡ್ಡ ಸಂಖ್ಯೆಯಲ್ಲಿ ಸೋಂಕಿತರು ಗುಣವಾಗಿದ್ದಾರೆ. ಮತ್ತೊಂದೆಡೆ ಕರೋನಾ ಸೋಂಕಿಗೆ ತುತ್ತಾದವರ ಸಂಖ್ಯೆಯಲ್ಲಿ ಭಾರಿ ಏರಿಕೆಯಾಗೆ. ಸದ್ಯ ಒಂದೂವರೆ ಸಾವಿರಕ್ಕಿಂತಲೂ ಹೆಚ್ಚು ಸಕ್ರಿಯ ಪ್ರಕರಣಗಳಿರುವುದು ಆತಂಕ ಮೂಡಿಸಿದೆ.
ಜಿಲ್ಲೆಯಲ್ಲಿ ಇವತ್ತು 230 ಮಂದಿ ಕರೋನ ಪಾಸಿಟಿವ್ ಬಂದಿದೆ. ಈ ಪೈಕಿ ಅತಿ ಹೆಚ್ಚು ಸೋಂಕಿತರು ಶಿವಮೊಗ್ಗ ಜಿಲ್ಲೆಗೆ ಸೇರಿದವರಾಗಿದ್ದಾರೆ. 103 ಮಂದಿ ಸೋಂಕಿತರು ಶಿವಮೊಗ್ಗ ತಾಲೂಕಿಗೆ ಸೇರಿದ್ದಾರೆ. ಭದ್ರಾವತಿಯ 39, ತೀರ್ಥಹಳ್ಳಿಯ 22, ಶಿಕಾರಿಪುರ 11, ಸಾಗರ 37, ಹೊಸನಗರ 5, ಸೊರಬ 5, ಇತರೆ ಜಿಲ್ಲೆಯ 8 ಮಂದಿಗೆ ಸೋಂಕು ತಗುಲಿದೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ.
ಒಂದೂವರೆ ಸಾವಿರ ಸಕ್ರಿಯ ಪ್ರಕರಣ
ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆ ಸಕ್ರಿಯ ಪ್ರಕರಣಗಳ ಸಂಖ್ಯೆ ಒಂದೂವರೆ ಸಾವಿರಕ್ಕಿಂತಲೂ ಹೆಚ್ಚಾಗಿದೆ. ಇವತ್ತು ಸಕ್ರಿಯ ಪ್ರಕರಣಗಳ ಸಂಖ್ಯೆ 1628ಕ್ಕೆ ಏರಿಕೆಯಾಗಿದೆ. ಈ ಪೈಕಿ, 52 ಮಂದಿ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದಾರೆ. 38 ಮಂದಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಡಿಸಿಹೆಚ್’ಸಿಯಲ್ಲಿ 46, ಟ್ರಯೇಜ್’ನಲ್ಲಿ 36, ಹೋಮ್ ಐಸೊಲೇಷನ್’ನಲ್ಲಿ 1456 ಮಂದಿ ಇದ್ದಾರೆ.
ಗುಣವಾದವರ ಸಂಖ್ಯೆ ಹೆಚ್ಚಳ
ಕರೋನದಿಂದ ಗುಣವಾದವರ ಸಂಖ್ಯೆಯಲ್ಲಿ ಇವತ್ತು ದೊಡ್ಡ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಇದು ತುಸು ನೆಮ್ಮದಿ ಮೂಡಿಸಿದೆ. ಜಿಲ್ಲೆಯಲ್ಲಿ ಇವತ್ತು 158 ಮಂದಿ ಸೋಂಕಿನಿಂದ ಗುಣವಾಗಿದ್ದಾರೆ ಎಂದು ಜಿಲ್ಲಾಡಳಿತದ ವರದಿಯಲ್ಲಿ ತಿಳಿಸಲಾಗಿದೆ.

LATEST NEWS
- ಸಾವಿನಲ್ಲು ಸಾರ್ಥಕತೆ ಮೆರೆದ ಶಿರಾಳಕೊಪ್ಪದ ಯುವಕ, ಬಹು ಅಂಗಾಂಗ ದಾನ, ಆಗಿದ್ದೇನು?

- ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಟಿ ರಂಜನಿ ರಾಘವನ್ ಉಪನ್ಯಾಸ, ಯಾವಾಗ? ಏನು ವಿಷಯ?

- ‘ಶಾಸಕರಿಗೆ ಹೇಳಿ ನೀನೆ ತಡೆದಿದ್ದೀಯ’ ಎಂದು ಆರೋಪಿಸಿ ವ್ಯಕ್ತಿ ಮೇಲೆ ಚಪ್ಪಲಿಯಿಂದ ಹಲ್ಲೆ, ಏನಿದು ಪ್ರಕರಣ?

- ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಬಯಲು ಕುಸ್ತಿ, ಹೇಗಿತ್ತು ಎರಡನೇ ದಿನದ ಕಾದಾಟ? ಯಾರೆಲ್ಲ ಗೆದ್ದರು?

- ತೀರ್ಥಹಳ್ಳಿಯಲ್ಲಿ ಫಾರ್ಚುನರ್ ಕಾರಿನಲ್ಲಿ ಬಂದು ಇಂಜಿನಿಯರ್ಗೆ ಬೆದರಿಸಿ ಹಣ ವಸೂಲಿ, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





