ಶಿವಮೊಗ್ಗ ಜಿಲ್ಲೆಯಲ್ಲಿ ನಿಲ್ಲದ ಕರೋನ ಸೋಂಕಿತರ ಸಾವು, ಇವತ್ತೆಷ್ಟು ಪಾಸಿಟಿವ್ ಕೇಸ್? ಗುಣ ಆದವರೆಷ್ಟು?

Nammur News For Website 2 2

ಶಿವಮೊಗ್ಗ ಲೈವ್.ಕಾಂ | SHIMOGA NEWS | 18 JUNE 2021

ಶಿವಮೊಗ್ಗ ಜಿಲ್ಲೆಯಾದ್ಯಂತ ಕರೋನ ಸೋಂಕಿತರ ಪ್ರಮಾಣ ಸಂಪೂರ್ಣ ಕಡಿಮೆಯಾಗಿದೆ. ಜಿಲ್ಲಾಡಳಿತ ಇವತ್ತು ಬಿಡುಗಡೆ ಮಾಡಿರುವ ಕೋವಿಡ್ ರಿಪೋರ್ಟ್‍ ಪ್ರಕಾರ, ಇವತ್ತು 195 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.

ಇವತ್ತು 4783 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ಪೈಕಿ 3896 ಮಂದಿಯಲ್ಲಿ ನೆಗೆಟಿವ್ ಬಂದಿದೆ. 195 ಮಂದಿಗೆ ಸೋಂಕು ದೃಢವಾಗಿದೆ.

ಇನ್ನು, ಸೋಂಕಿತರ ಪೈಕಿ ಶಿವಮೊಗ್ಗ ತಾಲೂಕಿನ 87 ಮಂದಿ ಇದ್ದಾರೆ. ಭದ್ರಾವತಿಯ 54, ತೀರ್ಥಹಳ್ಳಿಯ 16, ಶಿಕಾರಿಪುರದ 11, ಸಾಗರದ 6, ಹೊಸನಗರದ 8, ಸೊರಬದ 6, ಇತರೆ ಜಿಲ್ಲೆಯ 7 ಮಂದಿ ಇದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಮತ್ತೊಂದೆಡೆ ಕೋವಿಡ್‍ನಿಂದ ಗುಣವಾಗಿ 724 ಮಂದಿಗೆ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್‍ನಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 3158ಕ್ಕೆ ಇಳಿಕೆಯಾಗಿದೆ.

ಸೋಂಕಿಗೆ ತುತ್ತಾಗಿದ್ದ ಐವರು ಇವತ್ತು ಮೃತಪಟ್ಟಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಕರೋನ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 937ಕ್ಕೆ ಏರಿಕೆಯಾಗಿದೆ.

ಇನ್ಮುಂದೆ ಕರೋನ ಪರೀಕ್ಷೆ ನಿಮ್ಮ ಮನೆಯಲ್ಲೇ ಆಗುತ್ತೆ. ಶಿವಮೊಗ್ಗ ನಗರ ವ್ಯಾಪ್ತಿಯ ಯಾವುದೆ ಏರಿಯಾದಿಂದ ಕರೆ ಮಾಡಿ. ಪರೀಕ್ಷೆಗೆ ನಿಮ್ಮ ಮನೆಗೆ ಬರ್ತಾರೆ ತಜ್ಞರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

Corona PPE Kit and swab box

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

Leave a Comment