ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 19 ಜನವರಿ 2022
ಮೂರನೆ ಅಲೆ ಕರೋನಾಗೆ ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೊಂದು ಸಾವು ಸಂಭವಿಸಿದೆ. ಇವತ್ತು ಕೂಡ ಕರೋನಾಗೆ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.
ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿ ಪ್ರಕಾರ ಶಿವಮೊಗ್ಗ ಜಿಲ್ಲೆಯಲ್ಲಿ ಕರೋನಾಗೆ ಮತ್ತೊಬ್ಬರು ಸಾವನ್ನಪ್ಪಿದ್ದಾರೆ. ಆದ್ದರಿಂದ ಈವರೆಗೂ ಕರೋನಾಗೆ ಬಲಿಯಾದವರ ಸಂಖ್ಯೆ 1074ಕ್ಕೆ ಏರಿಕೆಯಾಗಿದೆ. ಇದು ಜಿಲ್ಲೆಯ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ.
ದಾಖಲೆ ಪ್ರಮಾಣದ ಸೋಂಕಿತರು
ಮತ್ತೊಂದೆಡೆ ಶಿವಮೊಗ್ಗ ಜಿಲ್ಲೆಯಲ್ಲಿ ದಾಖಲೆ ಪ್ರಮಾಣದ ಜನರಿಗೆ ಕರೋನ ಸೋಂಕು ತಗುಲಿದೆ. ಇವತ್ತು 422 ಮಂದಿ ಪಾಸಿಟಿವ್ ಬಂದಿದೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ. ಈ ಪೈಕಿ ಶಿವಮೊಗ್ಗ ತಾಲೂಕಿನ 125 ಮಂದಿ, ಭದ್ರಾವತಿಯ 157, ತೀರ್ಥಹಳ್ಳಿಯ 8, ಶಿಕಾರಿಪುರದ 19, ಸಾಗರದ 29, ಹೊಸನಗರದ 47, ಸೊರಬದ 30, ಹೊರ ಜಿಲ್ಲೆಯ 7 ಮಂದಿಗೆ ಸೋಂಕು ತಗುಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ದೊಡ್ಡ ಪ್ರಮಾಣದಲ್ಲಿ ಗುಣಮುಖರು
ಇನ್ನು, ಶಿವಮೊಗ್ಗ ಜಿಲ್ಲೆಯಲ್ಲಿ ಗುಣಮುಖರಾದವರ ಸಂಖ್ಯೆ ಕೂಡ ದೊಡ್ಡ ಪ್ರಮಾಣದಲ್ಲಿ ಇದೆ. ಇವತ್ತು 345 ಮಂದಿ ಕರೋನಾದಿಂದ ಗುಣವಾಗಿದ್ದಾರೆ. ಈ ವರ್ಷದಲ್ಲಿ ಇದು ಅತ್ಯಧಿಕ ಪ್ರಮಾಣವಾಗಿದೆ.
ಒಂದೂವರೆ ಸಾವಿರದಾಚೆಗೆ ಸಕ್ರಿಯ ಕೇಸ್
ಜಿಲ್ಲೆಯಲ್ಲಿ ಒಂದೂವರೆ ಸಾವಿರಕ್ಕಿಂತಲೂ ಹೆಚ್ಚು ಸಕ್ರಿಯ ಪ್ರಕರಣಗಳಿವೆ. ಸದ್ಯ ಜಿಲ್ಲೆಯಲ್ಲಿ 1688 ಸಕ್ರಿಯ ಪ್ರಕರಣಗಳಿವೆ.
ಸಕ್ರಿಯ ಪ್ರಕರಣಗಳ ಪೈಕಿ 34 ಮಂದಿ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದಾರೆ. 25 ಮಂದಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 22 ಮಂದಿ ಡಿಸಿಹೆಚ್’ಸಿ, 13 ಮಂದಿ ಟ್ರಯೇಜ್’ನಲ್ಲಿದ್ದಾರೆ. 1594 ಮಂದಿ ಹೋಮ್ ಐಸೊಲೇಷನ್’ಗೆ ಒಳಗಾಗಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422