ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 21 ಜನವರಿ 2022
ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ 500ಕ್ಕಿಂತಲೂ ಹೆಚ್ಚು ಜನರಿಗೆ ಕೊರೋನಾ ಸೋಂಕು ತಗುಲಿದೆ. ಮತ್ತೊಂದೆಡೆ ಸೋಂಕಿತರೊಬ್ಬರು ಮೃತಪಟ್ಟಿದ್ದು, ಸಾವಿನ ಸಂಖ್ಯೆಯಲ್ಲಿಯೂ ಏರಿಕೆಯಾಗಿದೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ.
ಜಿಲ್ಲೆಯಲ್ಲಿ 525 ಮಂದಿಗೆ ಇವತ್ತು ಸೋಂಕು ತಗುಲಿದೆ. ಈ ಪೈಕಿ ಶಿವಮೊಗ್ಗ ತಾಲೂಕಿನವರೆ ಅತಿ ಹೆಚ್ಚು ಮಂದಿ ಇದ್ದಾರೆ. ಶಿವಮೊಗ್ಗ ತಾಲೂಕಿನ 239 ಮಂದಿಗೆ ಸೋಂಕು ತಗುಲಿದೆ. ಭದ್ರಾವತಿಯ 138, ತೀರ್ಥಹಳ್ಳಿಯ 44, ಶಿಕಾರಿಪುರದ 23, ಸಾಗರದ 29, ಹೊಸನಗರದ 18, ಸೊರಬದ 27 ಮತ್ತು ಹೊರ ಜಿಲ್ಲೆಯ 7 ಮಂದಿಗೆ ಸೋಂಕು ತಗುಲಿದೆ.
2000ಕ್ಕಿಂತಲೂ ಹೆಚ್ಚು ಸಕ್ರಿಯ ಕೇಸ್
ಸೋಂಕಿತರ ಸಂಖ್ಯೆಯಲ್ಲಿ ಏರಿಕೆ ಆಗಿರುವುದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿಯೂ ಹೆಚ್ಚಳವಾಗಿದೆ. ಜಿಲ್ಲೆಯಲ್ಲಿ ಸದ್ಯ 2300 ಕೊರೋನಾ ಸೋಂಕಿತರಿದ್ದಾರೆ ಎಂದು ಜಿಲ್ಲಾಡಳಿತದ ವರದಿಯಲ್ಲಿ ತಿಳಿಸಲಾಗಿದೆ.
ಒಟ್ಟು ಸಕ್ರಿಯ ಪ್ರಕರಣಗಳ ಪೈಕಿ 49 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 20 ಮಂದಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. 32 ಮಂದಿ ಡಿಸಿಹೆಚ್’ಸಿ, 35 ಮಂದಿ ಟ್ರಯೇಜ್’ನಲ್ಲಿದ್ದಾರೆ. 2164 ಮಂದಿ ಹೋಮ್ ಐಸೊಲೇಷನ್’ಗೆ ಒಳಗಾಗಿದ್ದಾರೆ.
ಮೃತರ ಸಂಖ್ಯೆಯಲ್ಲಿ ಏರಿಕೆ
ಇನ್ನು, ಜಿಲ್ಲೆಯಲ್ಲಿ ಕೋವಿಡ್’ನಿಂದ ಮೃತಪಟ್ಟವರ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಇವತ್ತು ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರೊಬ್ಬರು ಮೃತಪಟ್ಟಿದ್ದಾರೆ ಎಂದು ಜಿಲ್ಲಾಡಳಿತದ ವರದಿಯಲ್ಲಿ ತಿಳಿಸಲಾಗಿದೆ. ಇದರಿಂದ ಈವರೆಗೂ ಜಿಲ್ಲೆಯಲ್ಲಿ ಮೃತರಾದ ಸೋಂಕಿತರ ಸಂಖ್ಯೆ 1076ಕ್ಕೆ ತಲುಪಿದೆ.
ಇವೆಲ್ಲದರ ನಡುವೆ ಕೊರೋನಾ ಸೋಂಕಿನಿಂದ ಗುಣವಾಗುತ್ತಿರುವವರ ಸಂಖ್ಯೆ ಕೂಡ ಹೆಚ್ಚಳವಾಗುತ್ತಿದೆ. ಜಿಲ್ಲೆಯಲ್ಲಿ ಇವತ್ತು 253 ಮಂದಿ ಸೋಂಕಿನಿಂದ ಗುಣವಾಗಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ | ಕೊರೋನ ಆತಂಕದ ಮಧ್ಯೆ ಶಿವಮೊಗ್ಗ ಜಿಲ್ಲೆಯಲ್ಲಿ ಮಹಿಳೆಗೆ ಕೆಎಫ್‌ಡಿ ಪಾಸಿಟಿವ್, ತೀರ್ಥಹಳ್ಳಿ ಭಾಗದಲ್ಲಿ ಆತಂಕ
ಇದನ್ನೂ ಓದಿ | ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ ತೆರವು, ಷರತ್ತು ವಿಧಿಸಿದ ಸರ್ಕಾರ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422