ಶಿವಮೊಗ್ಗ ಜಿಲ್ಲೆಯಲ್ಲಿ ಕೊರೋನಾಗೆ ಮೂವರು ಬಲಿ | Covid19

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗದ ಲೈವ್.ಕಾಂ | SHIMOGA NEWS | 28 ಜನವರಿ 2022

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು COVID19  ಸೋಂಕಿಗೆ ತುತ್ತಾಗಿ ಮೂವರು ಮೃತಪಟ್ಟಿದ್ದಾರೆ. ಇದು ಜಿಲ್ಲೆಯಲ್ಲಿ ಸೋಂಕಿನ ಕುರಿತು ಆತಂಕ್ಕೆ ಕಾರಣವಾಗಿದೆ.

Home Care Service by Shimoga Nanjappa Hospital

ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯ ಪ್ರಕಾರ, ಇವತ್ತು ಶಿವಮೊಗ್ಗದಲ್ಲಿ ಮೂರು ಮಂದಿ ಸಾವನಪ್ಪಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಈವರೆಗೂ COVID19ಗೆ ಬಲಿಯಾದವರ ಸಂಖ್ಯೆ 1084ಕ್ಕೆ ಏರಿಕೆಯಾಗಿದೆ.

300ಕ್ಕೂ ಹೆಚ್ಚು ಜನರಿಗೆ COVID19 ಪಾಸಿಟಿವ್

ಜಿಲ್ಲೆಯಲ್ಲಿ ಇವತ್ತು 396 ಮಂದಿ ಕೊರೋನಾ ಪಾಸಿಟಿವ್ ಬಂದಿದೆ ಎಂದು ಜಿಲ್ಲಾಡಳಿತದ ವರದಿಯಲ್ಲಿ ತಿಳಿಸಲಾಗಿದೆ. ಸೋಂಕಿತರ ಪೈಕಿ 189 ಮಂದಿ ಶಿವಮೊಗ್ಗ ತಾಲೂಕಿನವರು. ಭದ್ರಾವತಿಯ 70, ತೀರ್ಥಹಳ್ಳಿಯ 16, ಶಿಕಾರಿಪುರದ 32, ಸಾಗರದ 33, ಹೊಸನಗರದ 19, ಸೊರಬದ 26, ಹೊರ ಜಿಲ್ಲೆಯಿಂದ ಬಂದಿರುವ 11 ಮಂದಿ ಸೋಂಕು ತಗುಲಿದೆ.

ಎರಡು ಸಾವಿರಕ್ಕೂ ಹೆಚ್ಚು ಸಕ್ರಿಯ ಕೇಸ್

ಶಿವಮೊಗ್ಗ ಜಿಲ್ಲೆಯಲ್ಲಿ 2394 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ 66 ಮಂದಿ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದಾರೆ. 9 ಮಂದಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಡಿಸಿಹೆಚ್’ಸಿಯಲ್ಲಿ 23, ಟ್ರಯೇಜ್’ನಲ್ಲಿ 16 ಮಂದಿ ಇದ್ದಾರೆ. 2280 ಮಂದಿ ಹೋಮ್ ಐಸೊಲೇಷನ್’ಗೆ ಒಳಗಾಗಿದ್ದಾರೆ.

ಮತ್ತೊಂದೆಡೆ ಶಿವಮೊಗ್ಗ ಜಿಲ್ಲೆಯಲ್ಲಿ COVID19 ಸೋಂಕಿನಿಂದ ಗುಣವಾದವರ ಸಂಖ್ಯೆಯಲ್ಲಿ ಭಾರಿ ಏರಿಕೆಯಾಗಿದೆ. ಇವತ್ತು 711 ಮಂದಿ ಕೊರೋನಾದಿಂದ ಗುಣವಾಗಿದ್ದಾರೆ ಎಂದು ಜಿಲ್ಲಾಡಳಿತದ ವರದಿಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ | ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೊಂದು KFD ಪ್ರಕರಣ, ಶಿಕ್ಷಕರೊಬ್ಬರಿಗೆ ಸೋಂಕು ದೃಢ

CLICK HERE | All About Shivamogga Live

OUR FACEBOOK PAGE | OUR FACEBOOK PAGE

shivamogga live readers reach

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment