ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 22 ಜನವರಿ 2022
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ದಾಖಲೆ ಪ್ರಮಾಣದ ಏರಿಕೆಯಾಗಿದೆ. ಇವತ್ತು ಒಂದೇ ದಿನ ಜಿಲ್ಲೆಯಲ್ಲಿ 870 ಮಂದಿಗೆ ಸೋಂಕು ತಗುಲಿದೆ. ಇದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ ಎರಡೂವರೆ ಸಾವಿರಕ್ಕಿಂತಲೂ ಹೆಚ್ಚಾಗಿದೆ.
ಇವತ್ತು ಸೋಂಕಿಗೆ ತುತ್ತಾದವರ ಪೈಕಿ ಶಿವಮೊಗ್ಗ, ಭದ್ರಾವತಿ, ಸಾಗರ, ಹೊಸನಗರ ತಾಲೂಕಿನವರೆ ಹೆಚ್ಚಿದ್ದಾರೆ. ಶಿವಮೊಗ್ಗ ತಾಲೂಕಿನ 359, ಭದ್ರಾವತಿಯ 161, ಸಾಗರದ 118 ಮಂದಿಗೆ ಕೊರೋನಾ ಪಾಸಿಟಿವ್ ಬಂದಿದೆ.
ಉಳಿದಂತೆ ತೀರ್ಥಹಳ್ಳಿಯ 45, ಶಿಕಾರಿಪುರದ 46, ಹೊಸನಗರದ 99, ಸೊರಬದ 28, ಹೊರ ಜಿಲ್ಲೆಯಿಂದ ಬಂದಿರುವ 14 ಮಂದಿಗೆ ಕೋವಿಡ್ ಪಾಸಿಟಿವ್ ಬಂದಿದೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ.
ಮೂರು ಸಾವಿರದ ಸನಿಹಕ್ಕೆ ಸಕ್ರಿಯ ಕೇಸ್
ಇವತ್ತು ದಾಖಲೆ ಪ್ರಮಾಣದಲ್ಲಿ ಸೋಂಕಿತರು ಪತ್ತೆಯಾದ ಹಿನ್ನೆಲೆ, ಸಕ್ರಿಯ ಪ್ರಕರಣಗಳ ಸಂಖ್ಯೆ ಒಂದೇ ಭಾರಿ ಮೂರು ಸಾವಿರದ ಸನಿಹಕ್ಕೆ ತಲುಪಿದೆ. ಜಿಲ್ಲೆಯಲ್ಲಿ 2805 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ 58 ಮಂದಿ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದಾರೆ. 9 ಮಂದಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಡಿಸಿಹೆಚ್’ಸಿಯಲ್ಲಿ 27, ಟ್ರಯೇಜ್’ನಲ್ಲಿ 58 ಮಂದಿ ಇದ್ದಾರೆ. ಬಾಕಿ ಉಳಿದ 2653 ಮಂದಿ ಹೋಮ್ ಐಸೊಲೇಷನ್’ನಲ್ಲಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಮೂರನೇ ಅಲೆಗೆ ಐದನೇ ಸಾವು
ಮತ್ತೊಂದೆಡೆ ಕೋವಿಡ್ ಮೂರನೆ ಅಲೆಗೆ ನಿತ್ಯ ಒಬ್ಬೊಬ್ಬರು ಸಾವನ್ನಪ್ಪುತ್ತಿದ್ದಾರೆ ಎಂದು ಜಿಲ್ಲಾಡಳಿತದ ವರದಿಯಲ್ಲಿ ತಿಳಿಸಲಾಗಿದೆ. ಇವತ್ತು ಕೂಡ ಸೋಂಕಿತರೊಬ್ಬರು ಮೃತರಾಗಿದ್ದಾರೆ. ಹಾಗಾಗಿ ಜಿಲ್ಲೆಯಲ್ಲಿ ಕರೋನಾಗೆ ಬಲಿಯಾದವರ ಒಟ್ಟು ಸಂಖ್ಯೆ 1077ಕ್ಕೆ ತಲುಪಿದೆ.
350ಕ್ಕೂ ಹೆಚ್ಚು ಮಂದಿ ಗುಣಮುಖ
ಇನ್ನು, ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ದೊಡ್ಡ ಪ್ರಮಾಣದಲ್ಲಿ ಸೋಂಕಿತರು ಗುಣವಾಗಿದ್ದಾರೆ. ಇವತ್ತು 365 ಮಂದಿ ಕೊರೋನಾದಿಂದ ಗುಣವಾಗಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.