ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 27 ಜನವರಿ 2022
ಶಿವಮೊಗ್ಗ ಜಿಲ್ಲೆಯಲ್ಲಿ ಕೊರೋನ ಸೋಂಕಿತರ ಸಂಖ್ಯೆಗಿಂತಲೂ ಇವತ್ತು ಗುಣವಾದವರ ಸಂಖ್ಯೆ ಹೆಚ್ಚಿದೆ. ಇದರಿಂದ ಜನರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.
ಜಿಲ್ಲೆಯಲ್ಲಿ ಇವತ್ತು 572 ಮಂದಿಗೆ ಸೋಂಕು ತಗುಲಿದೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ. ಈ ಪೈಕಿ ಶಿವಮೊಗ್ಗ, ಭದ್ರಾವತಿ, ಸಾಗರ ತಾಲೂಕಿನಲ್ಲಿ ನೂರಕ್ಕಿಂತಲೂ ಹೆಚ್ಚು ಮಂದಿಗೆ ಸೋಂಕು ತಗುಲಿದೆ.
ಶಿವಮೊಗ್ಗ ತಾಲೂಕಿನಲ್ಲಿ 123 ಮಂದಿಗೆ ಪಾಸಿಟಿವ್ ಬಂದಿದೆ. ಭದ್ರಾವತಿಯ 110, ಸಾಗರದ 101, ತೀರ್ಥಹಳ್ಳಿಯ 57, ಶಿಕಾರಿಪುರದ 73, ಹೊಸನಗರದ 30, ಸೊರಬದ 50, ಹೊರ ಜಿಲ್ಲೆಯಿಂದ ಬಂದಿರುವ 28 ಮಂದಿಗೆ ಕೊರೋನ ಪಾಸಿಟಿವ್ ಬಂದಿದೆ ಎಂದು ಜಿಲ್ಲಾಡಳಿತದ ವರದಿಯಲ್ಲಿ ತಿಳಿಸಲಾಗಿದೆ.
2700ಕ್ಕೂ ಹೆಚ್ಚು ಸಕ್ರಿಯ ಕೇಸ್
ಜಿಲ್ಲೆಯಲ್ಲಿ ಸದ್ಯ 2709 ಸಕ್ರಿಯ ಕೊರೋನ ಪ್ರಕರಣಗಳಿವೆ. ಈ ಪೈಕಿ 58 ಮಂದಿ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 12 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಡಿಸಿಹೆಚ್’ಸಿಯಲ್ಲಿ 32, ಟ್ರಯೇಜ್’ನಲ್ಲಿ 20 ಮಂದಿ ಇದ್ದಾರೆ. 2587 ಸೋಂಕಿತರು ಹೋಮ್ ಐಸೊಲೇಷನ್’ನಲ್ಲಿದ್ದಾರೆ.
ಗುಣವಾದವರ ಸಂಖ್ಯೆ ಏರಿಕೆ
ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ದೊಡ್ಡ ಪ್ರಮಾಣ ಮಂದಿ ಸೋಂಕಿನಿಂದ ಗುಣವಾಗಿದ್ದಾರೆ. 812 ಮಂದಿ ಗುಣವಾಗಿದ್ದಾರೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ.

LATEST NEWS
- ನಾಳೆಯಿಂದ ಶಿವಮೊಗ್ಗದ ಶೇ.90ರಷ್ಟು ಹೊಟೇಲ್ಗಳು ಬಂದ್, ಕಾರಣವೇನು?

- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





