ಶಿವಮೊಗ್ಗ ಲೈವ್.ಕಾಂ | SHIMOGA NEWS | 18 JUNE 2021
ಜಿಲ್ಲೆಯಾದ್ಯಂತ ಮಳೆ ಮುಂದುವರೆದಿದೆ. ಕೆಲವು ಕಡೆ ವರುಣನ ಆರ್ಭಟ ಸ್ವಲ್ಪ ತಗ್ಗಿದೆ. ಆದರೆ ಮೋಡ ಕವಿದ ವಾತಾವರಣವಿದೆ.
ಇನ್ನು, ಹಿನ್ನೀರು ಭಾಗದಲ್ಲಿ ಮಳೆಯಾಗುತ್ತಿರುವುದರಿಂದ ಜಿಲ್ಲೆಯ ಮೂರು ಪ್ರಮುಖ ಜಲಾಶಯಗಳಲ್ಲಿ ನೀರನ ಒಳ ಹರಿವು ಹೆಚ್ಚಳವಾಗಿದೆ.
ಗಾಜನೂರು ತುಂಗಾ ಜಲಾಶಯಕ್ಕೆ 31,277 ಕ್ಯೂಸೆಕ್ ಒಳ ಹರಿವು ಇದೆ. ಈಗಾಗಲೆ ಜಲಾಶಯ ಭರ್ತಿಯಾಗಿರುವುದರಿಂದ ಅಷ್ಟೆ ಪ್ರಮಾಣದ ನೀರನ್ನು ನದಿಗೆ ಬಿಡಲಾಗುತ್ತಿದೆ. ಜಲಾಶಯದ ನೀರಿನ ಮಟ್ಟ 588.24 ಮೀಟರ್ ಇದೆ.
ಭದ್ರಾ ಜಲಾಶಯದ ಒಳ ಹರಿವು
ಭದ್ರಾವತಿಯ ಭದ್ರಾ ಜಲಾಶಯಕ್ಕೂ ಒಳಹರಿವು ಹೆಚ್ಚಳವಾಗಿದೆ. 21,598 ಕ್ಯೂಸೆಕ್ ಒಳ ಹರಿವು ಇದೆ. ಇದರಿಂದ ಭದ್ರಾ ಜಲಾಶಯದ ನೀರಿನ ಮಟ್ಟ 146.6 ಅಡಿಗೆ ಏರಿಕೆಯಾಗಿದೆ.
ಲಿಂಗನಮಕ್ಕಿಗೂ ಉತ್ತಮ ಒಳ ಹರಿವು
ಇನ್ನು, ಲಿಂಗನಮಕ್ಕಿ ಹಿನ್ನೀರು ವ್ಯಾಪ್ತಿಯಲ್ಲೂ ಭಾರಿ ಮಳೆಯಾಗುತ್ತಿದೆ. ಆದ್ದರಿಂದ ಲಿಂಗನಮಕ್ಕಿ ಜಲಾಶಯಕ್ಕೆ 45,413 ಕ್ಯೂಸೆಕ್ ಒಳ ಹರಿವು ದಾಖಲಾಗಿದೆ. ಇದರಿಂದ ನೀರಿನ ಮಟ್ಟ ಒಂದೆ ದಿನದಲ್ಲಿ 2.20 ಅಡಿಯಷ್ಟು ಏರಿಕೆಯಾಗಿದ್ದು, ಪ್ರಸ್ತುತ ಜಲಾಶಯದ 1781.45 ಅಡಿಯಷ್ಟು ನೀರಿನ ಸಂಗ್ರಹವಾಗಿದೆ.
ಇನ್ಮುಂದೆ ಕರೋನ ಪರೀಕ್ಷೆ ನಿಮ್ಮ ಮನೆಯಲ್ಲೇ ಆಗುತ್ತೆ. ಶಿವಮೊಗ್ಗ ನಗರ ವ್ಯಾಪ್ತಿಯ ಯಾವುದೆ ಏರಿಯಾದಿಂದ ಕರೆ ಮಾಡಿ. ಪರೀಕ್ಷೆಗೆ ನಿಮ್ಮ ಮನೆಗೆ ಬರ್ತಾರೆ ತಜ್ಞರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]