ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | DAM LEVEL | 20 ಮೇ 2022
ಭಾರಿ ಮಳೆ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯ ಪ್ರಮುಖ ಜಲಾಶಯಗಳ ಒಳ ಹರಿವು ಪ್ರಮಾಣ ಹೆಚ್ಚಳವಾಗಿದೆ. ತುಂಗಾ ಜಲಾಶಯ ಭರ್ತಿ ಆಗಿರುವುದರಿಂದ ಇಲ್ಲಿ ಹೊರ ಹರಿವು ಕೂಡ ದಾಖಲಾಗಿದೆ.
ಯಾವ್ಯಾವ ಜಲಾಶಯದಲ್ಲಿ ಎಷ್ಟಿದೆ ನೀರು?
ಲಿಂಗನಮಕ್ಕಿ ಜಲಾಶಯಕ್ಕೆ 11,125 ಕ್ಯೂಸೆಕ್ ಒಳಹರಿವು ಇದೆ. ಜಲಾಶಯದ ಗರಿಷ್ಠ ಮಟ್ಟ 1819 ಅಡಿ. ಪ್ರಸ್ತುತ 1763.65 ಅಡಿಯಷ್ಟು ನೀರಿದೆ. ಕಳೆದ 24 ಗಂಟೆ ಅವಧಿಯಲ್ಲಿ ಲಿಂಗನಮಕ್ಕಿ ಜಲಾಶಯ ವ್ಯಾಪ್ತಿಯಲ್ಲಿ 54.2 ಮಿ.ಮೀ ಮಳೆಯಾಗಿದೆ.
ಭದ್ರಾ ಜಲಾಶಯಕ್ಕೆ 7799 ಕ್ಯೂಸೆಕ್ ಒಳಹರಿವು ದಾಖಲಾಗಿದೆ. ಡ್ಯಾಂನ ಗರಿಷ್ಠ ಮಟ್ಟ 186 ಅಡಿ. ಪ್ರಸ್ತುತ 149.7 ಅಡಿಯಷ್ಟು ನೀರಿದೆ.
ತುಂಗಾ ಜಲಾಶಯ ಗರಿಷ್ಠ ಮಟ್ಟ ತಲುಪಿದೆ. ಆದ್ದರಿಂದ ಒಳ ಹರಿವಿನಷ್ಟೆ ಪ್ರಮಾಣದ ನೀರನ್ನು ಹೊರಗೆ ಬಿಡಲಾಗುತ್ತಿದೆ. ಜಲಾಶಯಕ್ಕೆ ಸದ್ಯ 11,976 ಕ್ಯೂಸೆಕ್ ಒಳ ಹರಿವು ಇದೆ. ಅಷ್ಟೆ ಪ್ರಮಾಣದ ನೀರನ್ನು ಹೊರಗೆ ಬಿಡಲಾಗುತ್ತಿದೆ.
ಮಾಣಿ ಡ್ಯಾಂನಲ್ಲಿ 380 ಕ್ಯೂಸೆಕ್ ಒಳಹರಿವು ಇದೆ. 390 ಕ್ಯೂಸೆಕ್ ನೀರನ್ನು ಹೊರಗೆ ಬಿಡಲಾಗುತ್ತಿದೆ. ಪಿಕಪ್ ಡ್ಯಾಂನಲ್ಲಿ 671 ಕ್ಯೂಸೆಕ್ ಒಳಹರಿವು ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆ, ಯಾವ್ಯಾವ ಗ್ರಾ.ಪಂ ವ್ಯಾಪ್ತಿಯಲ್ಲಿ ಹೆಚ್ಚು ಮಳೆಯಾಗಿದೆ?
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422