ಲಿಂಗನಮಕ್ಕಿ ಡ್ಯಾಂ ನೀರಿನ ಮಟ್ಟ ಮೂರೂವರೆ ಅಡಿ ಹೆಚ್ಚಳ, ತುಂಗಾ ಜಲಾಶಯದ ಹೊರಹರಿವು ಎಷ್ಟಿದೆ ಗೊತ್ತಾ?

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಜುಲೈ 2021

ಸುದ್ದಿಯ ಮುಂದಿನ ಭಾಗ ಕೆಳಗಿದೆ

ಜೋರು ಮಳೆಯಿಂದಾಗಿ ಶಿವಮೊಗ್ಗ ಜಿಲ್ಲೆಯ ಮೂರು ಪ್ರಮುಖ ಜಲಾಶಯಗಳ ಒಳ ಹರಿವು ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ. ಈಗಾಗಲೇ ಭರ್ತಿಯಾಗಿರುವುದರಿಂದ ತುಂಗಾ ಜಲಾಶಯದ ಒಳ ಹರಿವಿನ ಪ್ರಮಾಣದಷ್ಟೆ ನೀರನ್ನು ಹೊರಗೆ ಹರಿಸಲಾಗುತ್ತಿದೆ.

ಯಾವ್ಯಾವ ಡ್ಯಾಂಗೆ ಎಷ್ಟಿದೆ ಒಳಹರಿವು?

ಲಿಂಗನಮಕ್ಕಿ ಡ್ಯಾಂಗೆ 1,03,117 ಕ್ಯೂಸೆಕ್‍ ಒಳ ಹರಿವು ಇದೆ. ಶುಕ್ರವಾರ ಭಾರಿ ಪ್ರಮಾಣದ ನೀರು ಹರಿದು ಬಂದಿರುವುದರಿಂದ ಜಲಾಶಯದ ನೀರಿನ ಮಟ್ಟ 1802.60 ಕ್ಯೂಸೆಕ್‍ಗೆ ಏರಿಕೆಯಾಗಿದೆ. ಒಂದೇ ದಿನದಲ್ಲಿ 3.45 ಅಡಿಯಷ್ಟು ನೀರು ಬಂದಿದೆ.

Shivamogga Live Promotion

ಭದ್ರಾ ಜಲಾಶಯಕ್ಕೂ ಒಳ  ಹರಿವು ಹೆಚ್ಚಳವಾಗಿದೆ. 50,195 ಕ್ಯೂಸೆಕ್ ಒಳ ಹರಿವು ಇದೆ. ಇದರಿಂದ ಜಲಾಶಯದ ನೀರಿನ ಮಟ್ಟ 175 ಅಡಿಗೆ ಹೆಚ್ಚಳವಾಗಿದೆ.

ಇನ್ನು, ತುಂಗಾ ಜಲಾಶಯದ ಒಳ ಹರಿವು ಪ್ರಮಾಣ ಸ್ವಲ್ಪ ತಗ್ಗಿದೆ. 78,832 ಕ್ಯೂಸೆಕ್ ಒಳಹರಿವು ಇದೆ. ಅಷ್ಟೆ ಪ್ರಮಾಣದ ನೀರನ್ನ ಹೊರಗೆ ಹರಿಸಲಾಗುತ್ತಿದೆ. ಹಿನ್ನೀರು ಭಾಗದಲ್ಲಿ ಮಳೆ ಆಧಾರದ ಮೇಲೆ ಹೊರ ಹರಿವು ಏರಿಕೆ ಅಥವಾ ಇಳಿಕೆಯಾಗಲಿದೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Leave a Comment