SHIVAMOGGA LIVE NEWS | 7 NOVEMBER 2023
CHIKKAMAGALURU : ತೀರ್ಥಹಳ್ಳಿ ಕ್ಷೇತ್ರದ ಮಾಜಿ ಶಾಸಕ, ಹಿರಿಯ ರಾಜಕಾರಣಿ, ಮಾಜಿ ಸಚಿವ ಡಿ.ಬಿ.ಚಂದ್ರೇಗೌಡ ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಚಿಕ್ಕಮಗಳೂರಿನ ಮೂಡಿಗೆರೆಯ ದಾರದಹಳ್ಳಿಯ ತಮ್ಮ ನಿವಾಸ ಪೂರ್ಣಚಂದ್ರದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.
ತೀರ್ಥಹಳ್ಳಿ ಶಾಸಕರಾಗಿದ್ದರು
1971ರಲ್ಲಿ ಚಿಕ್ಕಮಗಳೂರಿನ ಸಂಸದರಾಗಿದ್ದರು. 1978ರಲ್ಲಿ ಚಂದ್ರೇಗೌಡ ಅವರು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರಿಗಾಗಿ ತಮ್ಮ ಸ್ಥಾನ ತೆರವು ಮಾಡಿದ್ದರು. ಈ ಮೂಲಕ ದೇಶದ ಗಮನ ಸೆಳೆದಿದ್ದರು. ಬಳಿಕ ವಿಧಾನ ಪರಿಷತ್ ಸದಸ್ಯರಾಗಿದ್ದರು. 1983ರಲ್ಲಿ ತೀರ್ಥಹಳ್ಳಿ ವಿಧಾನಸಭೆ ಕ್ಷೇತ್ರದ ಶಾಸಕರಾಗಿದ್ದರು. ವಿಧಾಸನಭೆ ಸ್ಪೀಕರ್ ಆಗಿ ಜವಾಬ್ದಾರಿ ನಿಭಾಯಿಸಿದ್ದರು. 1989ರಲ್ಲಿ ತೀರ್ಥಹಳ್ಳಿ ಕ್ಷೇತ್ರದಿಂದ ಪುನರಾಯ್ಕೆಯಾಗಿದ್ದರು. ವಿಧಾನಸಭೆ ವಿರೋಧ ಪಕ್ಷದ ನಾಯಕರಾಗಿದ್ದರು.
ನಾಲ್ಕು ಸದನದಲ್ಲಿ ಅನುಭವ
ಡಿ.ಬಿ.ಚಂದ್ರೇಗೌಡ ಅವರು ನಾಲ್ಕು ಸದನದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 1971ರಲ್ಲಿ ಚಿಕ್ಕಮಗಳೂರಿನಿಂದ ಕಾಂಗ್ರೆಸ್ ಸಂಸದರಾಗಿದ್ದರು. 1977ರಲ್ಲಿ ಸಂಸದರಾಗಿ ಪುನರಾಯ್ಕೆಯಾಗಿದ್ದರು. 1978, 1983ರಲ್ಲಿ ವಿಧಾನ ಪರಿಷತ್ ಸದಸ್ಯರಾಗಿದ್ದರು. 1983ರಲ್ಲಿ ತೀರ್ಥಹಳ್ಳಿ ಕ್ಷೇತ್ರದಿಂದ ಜನತಾ ಪಕ್ಷದ ಶಾಸಕರಾಗಿದ್ದರು. 1986ರಲ್ಲಿ ಜನತಾದಳದ ರಾಜ್ಯಸಭೆ ಸದಸ್ಯರಾದರು. 1989ರಲ್ಲಿ ತೀರ್ಥಹಳ್ಳಿ ಕ್ಷೇತ್ರದಿಂದ ಜನತಾ ದಳದ ಶಾಸಕರಾದರು. 1999ರಲ್ಲಿ ಕಾಂಗ್ರೆಸ್ ಪಕ್ಷದಿಂದ ಶೃಂಗೇರಿ ಕ್ಷೇತ್ರದಿಂದ ಶಾಸಕರಾಗಿದ್ದರು. 2009ರಲ್ಲಿ ಬಿಜೆಪಿಯಿಂದ ಬೆಂಗಳೂರು ಉತ್ತರದ ಸಂಸದರಾಗಿದ್ದರು.
ಇದನ್ನೂ ಓದಿ – ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ 17 ಗಂಟೆ ಕಾರ್ಯಾಚರಣೆ, ಏನೆಲ್ಲ ಪರೀಕ್ಷೆಗಳಾದವು? ಜನಕ್ಕೆ ಏನೆಲ್ಲ ಸಮಸ್ಯೆಯಾಯ್ತು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200