ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 8 AUGUST 2023
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ಕಾಂಗ್ರೆಸ್ (Congress) ವರಿಷ್ಠ ರಾಹುಲ್ ಗಾಂಧಿ (Rahul Gandhi) ಅವರ ಪರವಾಗಿ ಸುಪ್ರೀಂ ಕೋರ್ಟ್ (Supreme Court) ತೀರ್ಪು ನೀಡಿರುವುದನ್ನು ಜಿಲ್ಲಾ ಕಾಂಗ್ರೆಸ್ ಸಮಿತಿ ಸ್ವಾಗತಿಸುತ್ತದೆ ಎಂದು ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ತಿಳಿಸಿದರು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ದ್ವೇಷ ರಾಜಕಾರಣ ಮಾಡುತ್ತಿದೆ. ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸಿ ವಿನಾಕಾರಣ ಕಿರುಕುಳ ನೀಡುತ್ತಿದೆ. ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಅವರಿಗೂ ಕಿರುಕುಳ ನೀಡಿತ್ತು. ರಾಹುಲ್ ಗಾಂಧಿ ಅವರ ಜನಪ್ರಿಯತೆ ಸಹಿಸಲಾಗದೆ ಸೇಡಿನ ರಾಜಕಾರಣ ಮಾಡಿ ಮಾನನಷ್ಟ ಮೊಕದ್ದಮೆ ಹೂಡಿತ್ತು. ಕೋರ್ಟ್‌ಗಳು ಕೂಡ ಅದನ್ನು ಎತ್ತಿ ಹಿಡಿದಿದ್ದವು. ಆದರೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿ ರಾಹುಲ್ ಅವರ ಪರ ತೀರ್ಪು ನೀಡಿದೆ ಎಂದರು.
ಸುಪ್ರೀಂ ಕೋರ್ಟಿನ ತೀರ್ಪಿನಿಂದ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಎತ್ತಿ ಹಿಡಿದಂತಾಗಿದೆ. ಸತ್ಯಕ್ಕೆ ಜಯ ಸಿಕ್ಕಿದೆ. ಜನರ ನಂಬಿಕೆಗಳನ್ನು ಉಳಿಸಿಕೊಂಡಂತಾಗಿದೆ. ಕೇಂದ್ರ ಸರಕಾರಕ್ಕೆ ಮುಖಭಂಗವಾಗಿದೆ ಎಂದರು.
ಇದನ್ನೂ ಓದಿ:ಶಿವಮೊಗ್ಗ ಜಿಲ್ಲೆಯಿಂದ ಮಳೆ ಮಾಯ, ಮತ್ತೆ ಶುರುವಾಯ್ತು ಬಿಸಿಲ ಝಳ, 24 ಗಂಟೆಯಲ್ಲಿ ಎಷ್ಟಾಗಿದೆ ಮಳೆ?
ಕೆಟ್ಟ ಮೇಲೆಯೂ ಬುದ್ದಿ ಬರುವುದಿಲ್ಲ
ಎಐಸಿಸಿ (AICC) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುರಿತು ಆರಗ ಜ್ಞಾನೇಂದ್ರ ನೀಡಿರುವ ಹೇಳಿಕೆ ಅತ್ಯಂತ ಖಂಡನೀಯ. ಕೆಲವರಿಗೆ ಕೆಟ್ಟ ಮೇಲೆ ಬುದ್ದಿ ಬರುತ್ತದೆ. ಆದರೆ, ಈ ಬಿಜೆಪಿಯವರಿಗೆ ಕೆಟ್ಟ ಮೇಲೆಯೂ ಬುದ್ದಿ ಬರುವುದಿಲ್ಲ. ಸಿ.ಟಿ. ರವಿ, ಈಶ್ವರಪ್ಪ, ರೇಣುಕಾಚಾರ್ಯ ಮುಂತಾದವರು ಮೂಲೆ ಗುಂಪಾಗಿದ್ದರೂ ಮಾತನಾಡುವುದನ್ನು ಬಿಡುತ್ತಿಲ್ಲ. ಇದೆ ರೀತಿ ಮುಂದುವರೆದರೆ ಆರಗ ಜ್ಞಾನೇಂದ್ರ ಅವರಿಗೆ ಜನರು ಮಂದೆ ಪಾಠ ಕಲಿಸಲಿದ್ದಾರೆ ಎಂದರು.
ಪ್ರಮುಖರಾದ ಚಂದ್ರಭೂಪಾಲ್, ಕಲೀಮ್ ಪಾಶಾ, ಚಂದ್ರಶೇಖರ್, ಗಂಗಾಧರ್, ಎ.ಬಿ. ಮಾರ್ಟಿಸ್, ಎನ್.ಡಿ. ಪ್ರವೀಣ್ ಕುಮಾರ್ ಇತರರಿದ್ದರು.