ಶಿವಮೊಗ್ಗ ಜಿಲ್ಲೆಯಲ್ಲಿ ಇಂದಿನಿಂದ 30 ದಿನ ಇವೆಲ್ಲವು ಬ್ಯಾನ್‌, ಡಿಸಿ ಆದೇಶ, ಏನೇನದು?

ಶಿವಮೊಗ್ಗ: ಜಿಲ್ಲೆಯಲ್ಲಿ ಗಣೇಶ ಹಬ್ಬದ ಆಚರಣೆ ಹಾಗೂ ಮೆರವಣಿಗೆ ವೇಳೆ ಸಾರ್ವಜನಿಕ ಶಾಂತಿ ಕಾಪಾಡುವ ಹಿನ್ನೆಲೆ 30 ದಿನಗಳ ಕಾಲ ಡಿಜೆ ಸಿಸ್ಟಂ, ಕಲರ್ ಪೇಪರ್ ಬ್ಲಾಸ್ಟಿಂಗ್, ಸಿಡಿಮದ್ದು ಹಾಗೂ ಬೈಕ್ ರ‍್ಯಾಲಿಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ ಹೊರಡಿಸಿದ್ದಾರೆ.

ಸೆಪ್ಟೆಂಬರ್ 14 ರಿಂದ ಅಕ್ಟೋಬರ್ 13 ರವರೆಗೆ ನಿಷೇಧ ಇರಲಿದೆ. ವಿದ್ಯಾರ್ಥಿಗಳು, ರೋಗಿಗಳಿಗೆ ತೊಂದರೆ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವುದನ್ನು ತಡೆಯಲು ಪೊಲೀಸ್ ಅಧೀಕ್ಷಕರ ಶಿಫಾರಸಿನ ಮೇರೆಗೆ ಈ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಜಿಲಾಧಿಕಾರಿ ಆದೇಶದಲ್ಲಿ ತಿಳಿಸಲಾಗಿದೆ.

Shimoga-DC-Prabhulinga-Kavalikatti

ತೆಪ್ಪ ಬಳಕೆ ನಿಷೇಧ

ಈ ಹಿಂದೆ ಶಿವಮೊಗ್ಗ ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದಲ್ಲಿ ತೆಪ್ಪ ಮುಳುಗಿ 12 ಜನರು ಸಾವನ್ನಪ್ಪಿದ್ದರು. ಈ ಘಟನೆ ಹಿನ್ನೆಲೆ ಶಿವಮೊಗ್ಗದಲ್ಲಿ ಗಣಪತಿ ವಿಸರ್ಜನೆ ಕುರಿತು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ತೆಪ್ಪದ ಮೂಲಕ ಗಣಪತಿ ವಿಸರ್ಜನೆ ಮಾಡುವಾಗ ತೆಪ್ಪದಲ್ಲಿ ಕೇವಲ 2 ರಿಂದ 3 ಜನರಿಗೆ ಮಾತ್ರ ಹೋಗಲು ಅವಕಾಶ. ತೆಪ್ಪದಲ್ಲಿ ತೆರಳುವ ಪ್ರತಿಯೊಬ್ಬರೂ ಕಡ್ಡಾಯವಾಗಿ ಲೈಫ್ ಜ್ಯಾಕೆಟ್  ಧರಿಸಿರಬೇಕು. ನುರಿತ ಈಜುಗಾರರು ಗಣಪತಿ ಮೂರ್ತಿ ವಿಸರ್ಜನೆ ಪ್ರಕ್ರಿಯೆಯನ್ನು ನಡೆಸಬೇಕು ಎಂದು ಆದೇಶಿಸಿದ್ದಾರೆ.

Bhovi Samaja Prathiba Puraskara

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ