ಶಿವಮೊಗ್ಗ ಲೈವ್.ಕಾಂ | SHIMOGA NEWS | 6 MARCH 2021
ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಸಾಹಿತಿ ಡಾ. ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟ (85) ಅವರು ಬೆಂಗಳೂರಿನಲ್ಲಿ ಕೊನೆಯುಸಿರೆಳೆದಿದ್ದಾರೆ.
ಬೆಂಗಳೂರಿನ ಬನಶಂಕರಿಯ ನಿವಾಸದಲ್ಲಿ ಬೆಳಗಿನ ಜಾವ ಡಾ. ಲಕ್ಷ್ಮೀನಾರಾಯಣ ಭಟ್ಟ ಅವರು ಕೊನೆಯುಸಿರೆಳೆದಿದ್ದಾರೆ. ಮನೆಯ ಬಳಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಡಾ. ಲಕ್ಷ್ಮೀನಾರಾಯಣ ಭಟ್ಟ ಅವರು ಮೂಲತಃ ಶಿವಮೊಗ್ಗ ಜಿಲ್ಲೆಯವರು. 1936ರ ಅಕ್ಟೋಬರ್ 29ರಂದು ಶಿವಮೊಗ್ಗದಲ್ಲಿ ಜನಿಸಿದರು. ತಂದೆ ಶಿವರಾಮ ಭಟ್ಟ, ತಾಯಿ ಮೂಕಾಂಬಿಕೆ. ಮೈಸೂರು ಮಹಾರಾಜ ಕಾಲೇಜಿನಲ್ಲಿ ಎಂ.ಎ ಪದವಿ ಪಡೆದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಪಿಹೆಚ್‍ಡಿ ಪದವಿ ಪಡೆದಿದ್ದರು.
ಇಂಗ್ಲೀಷ್‍ನ ಪ್ರಖ್ಯಾತ ಸಹಿತಿಗಳಾದ ಏಟ್ಸ್ , ಟಿ.ಎಸ್.ಏಲಿಯಟ್, ವಿಲಿಯಂ ಷೇಕ್ಸ್ ಪಿಯರ್ ಅವರ ಕಾವ್ಯಗಳನ್ನು ಕನ್ನಡಕ್ಕೆ ಅನುವಾದಿಸಿದ್ದರು. ಹೊರಳು ದಾರಿಯಲ್ಲಿ ಕಾವ್ಯ ವಿಮರ್ಶಾ ಗ್ರಂಥಕ್ಕೆ 1974ರಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿತ್ತು. ‘ನೀ ಸಿಗದೆ ಬಾಳೊಂದು ಬಾಳೇ ಕೃಷ್ಣ’ ಸೇರಿದಂತೆ ಹಲವು ಜನಪ್ರಯ ಕಾವ್ಯಗಳನ್ನು ರಚಿಸಿದ್ದರು. ಹಲವು ಕಾವ್ಯ, ವಿಮರ್ಶೆ, ಅನುವಾದ, ನವ್ಯ ಕವಿತೆ, ಮಕ್ಕಳಿಗಾಗಿ ಗೀತೆ ಸೇರಿದಂತೆ ಹಲವು ವಿಭಾಗಗಳಲ್ಲಿ ಸಾಹಿತ್ಯ ಕೃಷಿ ಮಾಡಿದ್ದರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200