ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 17 DECEMBER 2024
ಬೆಳಗಾವಿ : ಪ್ರತಿಭಟನೆ ವೇಳೆ ಕುಸಿದು ಬಿದ್ದ ಅತಿಥಿ ಉಪನ್ಯಾಸಕಿಗೆ ಡಾ. ಧನಂಜಯ ಸರ್ಜಿ ತುರ್ತು ಚಿಕಿತ್ಸೆ (Treatment) ನೀಡಿ, ತಾವೇ ಕರೆದೊಯ್ದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಬೆಳಗಾವಿಯ ಸುವರ್ಣ ವಿಧಾನಸೌಧದ ಮುಂಭಾಗ ಪ್ರತಿಭಟನೆ ವೇಳೆ ಘಟನೆ ಸಂಭವಿಸಿದೆ.
ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸಿದರು. ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ ಮನವಿ ಸ್ವೀಕರಿಸಿದರು. ಈ ಸಂದರ್ಭ ಅತಿಥಿ ಉಪನ್ಯಾಸಕಿಯೊಬ್ಬರು ದಿಢೀರ್ ಕುಸಿದು ಬಿದ್ದು, ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದರು.
ಅತಿಥಿ ಉಪನ್ಯಾಸಕಿಗೆ ಡಾ. ಧನಂಜಯ ಸರ್ಜಿ ಅವರು ತಕ್ಷಣ ಅರೈಕೆ ಮಾಡಿ, ಪ್ರಥಮ ಚಿಕಿತ್ಸೆ ನೀಡಿದರು. ತಾವೇ ಬೆಳಗಾವಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದರು. ಡಾ. ಧನಂಜಯ ಸರ್ಜಿ ಅವರ ಕರ್ತವ್ಯ ಪ್ರಜ್ಞೆಗೆ ಅತಿಥಿ ಉಪನ್ಯಾಸಕರು ಮೆಚ್ಚುಗೆ ವ್ಯಕ್ತಪಡಿಸಿದರು.
ಈಚೆಗೆ ಶಿವಮೊಗ್ಗದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೆಡಿಪಿ ಸಭೆ ವೇಳೆ ಐಎಎಸ್ ಅಧಿಕಾರಿ ಕಾವೇರಿ ಅಸ್ವಸ್ಥರಾಗಿದ್ದರು. ಆ ಸಂದರ್ಭದಲ್ಲಿಯು ಡಾ. ಧನಂಜಯ ಸರ್ಜಿ ಪ್ರಥಮ ಚಿಕಿತ್ಸೆ ನೀಡಿದ್ದರು.
ಇದನ್ನೂ ಓದಿ » ಶಿವಮೊಗ್ಗ ಸಿಟಿಯಲ್ಲಿ ಏನೇನಾಯ್ತು? ಇಲ್ಲಿದೆ ಫಟಾಫಟ್ ನ್ಯೂಸ್ ಅಪ್‌ಡೇಟ್
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422