ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗ ಲೈವ್.ಕಾಂ | SHIMOGA NEWS | 29 MARCH 2021
ರಾಜ್ಯಾದ್ಯಂತ ಪೊಲೀಸ್ ಇಲಾಖೆಯಲ್ಲಿ ಡಿವೈಎಸ್ಪಿಗಳು ಮತ್ತು ಇನ್ಸ್ಪೆಕ್ಟರ್ಗಳ ವರ್ಗಾವಣೆ ಮಾಡಲಾಗಿದೆ.
ರಾಜ್ಯದ ವಿವಿಧೆಡೆ ಕರ್ತವ್ಯ ನಿರ್ವಹಿಸುತ್ತಿರುವ 18 ಡಿವೈಎಸ್ಪಿಗಳು ಮತ್ತು 100 ಇನ್ಸ್ಪೆಕ್ಟರ್ಗಳ ವರ್ಗಾವಣೆ ಮಾಡಲಾಗಿದೆ.
ತೀರ್ಥಹಳ್ಳಿ ಡಿವೈಎಸ್ಪಿ ವರ್ಗಾವಣೆ
ತೀರ್ಥಹಳ್ಳಿ ಡಿವೈಎಸ್ಪಿ ಡಾ.ಸಂತೋಷ್ ಕೆ.ಎಂ ಅವರನ್ನು ದಾವಣಗೆರೆ ಜಿಲ್ಲೆಯ ಚನ್ನಗಿರಿ ಉಪ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ. ಇವರಿಂದ ತೆರವಾಗಿರುವ ಸ್ಥಾನಕ್ಕೆ ಯಾರನ್ನೂ ನಿಯೋಜಿಸಿಲ್ಲ.
ಇನ್ಸ್ಪೆಕ್ಟರ್ಗಳ ವರ್ಗಾವಣೆ
ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ವಸಂತ್ ಕುಮಾರ್ ಅವರನ್ನು ಭ್ರಷ್ಟಾಚಾರ ನಿಗ್ರಹದಳಕ್ಕೆ ವರ್ಗಾಯಿಸಲಾಗಿದೆ.
ಪ್ರಸ್ತುತ ಚಿಕ್ಕಮಗಳೂರಿನ ಕಡೂರು ಪಿಟಿಎಸ್ನಲ್ಲಿ ಇನ್ಸ್ಪೆಕ್ಟರ್ ಆಗಿರುವ ಹರೀಶ್ ಕೆ.ಪಾಟೀಲ್ ಅವರನ್ನು ದೊಡ್ಡಪೇಟೆ ಠಾಣೆಗೆ ವರ್ಗಾಯಿಸಲಾಗಿದೆ. ಹರೀಶ್ ಪಾಟೀಲ್ ಅವರು ಈ ಹಿಂದ ಇದೇ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com






