ಕಂಕಣ ಸೂರ್ಯಗ್ರಹಣ ಆರಂಭವಾಗಿದ್ದು, ಇದನ್ನು ಕಣ್ತುಂಬಿಕೊಳ್ಳಲು ಜನರು ಕಾತುರವಾಗಿದ್ದಾರೆ.
ಈಗಾಗಲೇ ಜಿಲ್ಲೆಯ ವಿವಿಧೆಡೆ ಗ್ರಹಣ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ.
ಶಿವಮೊಗ್ಗದ SRNM ಕಾಲೇಜು ಆವರಣದಲ್ಲಿ ಗ್ರಹಣ ವೀಕ್ಷಣೆಗೆ ವಿಶೇಷ ವ್ಯವಸ್ಥೆ ಮಾಡಲಾಗಿದೆ.
ವಿಜ್ಞಾನ ಪರಿಷತ್ ವತಿಯಿಂದ ಗ್ರಹಣ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿತ್ತು. ವಿದ್ಯಾರ್ಥಿಗಳು, ನಾಗರೀಕರು
ವಿಶೇಷ ಕನ್ನಡಕದ ಮೂಲಕ ಗ್ರಹಣದ ವೀಕ್ಷಣೆ ಮಾಡುತ್ತಿದ್ದಾರೆ.
ಶಿವಮೊಗ್ಗದಲ್ಲಿ ಆವರಿಸಿದ ಕತ್ತಲು
ಸೂರ್ಯ ಗ್ರಹಣದ ಪ್ರಭಾವದಿಂದಾಗಿ ಶಿವಮೊಗ್ಗದಲ್ಲಿ ಬೆಳಗ್ಗೆ 9 ಗಂಟೆ ಹೊತ್ತಿಗೆ ಸ್ವಲ್ಪ ಕತ್ತಲು
ಆವರಿಸಿದೆ. 9.30ರ ಹೊತ್ತಿಗೆ ಗ್ರಹಣ ಗೋಚರಿಸಲಿದೆ.
ದೇವಸ್ಥಾನಗಳು ಬಂದ್
ಗ್ರಹಣದ ಹಿನ್ನೆಲೆ ಶಿವಮೊಗ್ಗದ ದೇವಸ್ಥಾನಗಳ ಬಂದ್ ಮಾಡಲಾಗಿದೆ. ಪ್ರಮುಖ ದೇವಸ್ಥಾನಗಳ ಬಾಗಿಲು
ಮುಚ್ಚಲಾಗಿದೆ. ಗ್ರಹಣ ಮುಗಿದ ಬಳಿಕ ವಿಶೇಷ ಪೂಜೆಗಳನ್ನು ಏರ್ಪಡಿಸಲಾಗಿದೆ.
ಗ್ರಹಣ ಕಾಲದ ಹೋಮ
ಗ್ರಹಣದ ದೋಷ ಮುಕ್ತಿಗೆ ಕೆಲವು ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಮತ್ತು ಹೋಮ ಮಾಡಲಾಗುತ್ತಿದೆ.
ಶಿವಮೊಗ್ಗ ವಿನೋಬನಗರದ ಶನಿಮಹಾತ್ಮ ಸ್ವಾಮಿ ದೇವಸ್ಥಾನದಲ್ಲಿ ಗ್ರಹಣ ಕಾಲದಲ್ಲಿ ಹೋಮ ನಡೆಸಲಾಗುತ್ತಿದೆ.
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ